ಯುನೈಟೆಡ್ ಏರ್‌ಲೈನ್ಸ್ ವಿಮಾನದ ಚಕ್ರದಲ್ಲಿ ಮೃತದೇಹ ಪತ್ತೆಯಾಗಿದೆ. ವಿಮಾನವು ಹವಾಯಿಯಲ್ಲಿ ಇಳಿದಿತ್ತು. ಈ ಸಮಯದಲ್ಲಿ ವಿಮಾನದ ಚಕ್ರದಡಿಯಲ್ಲಿ ಶವ ಇರುವುದು ಬೆಳಕಿಗೆ ಬಂದಿದ್ದು ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ವಿಮಾನವು ಚಿಕಾಗೋದಿಂದ ಕಹುಲುಯಿ ವಿಮಾನ ನಿಲ್ದಾಣಕ್ಕೆ ಆಗಮಿಸಿತ್ತು. ಲ್ಯಾಂಡಿಂಗ್ ಗೇರ್ಗಳ ಚಕ್ರಗಳ ಅಡಿಯಲ್ಲಿ ವ್ಯಕ್ತಿಯ ಮೃತದೇಹ ಸಿಕ್ಕಿದೆ.
ಈ ವ್ಯಕ್ತಿ ಚಕ್ರದಡಿ ಸಿಲುಕಿದ್ಹೇಗೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ವಿಮಾನಯಾನ ಸಂಸ್ಥೆ ಹೇಳಿದೆ. ಈ ಚಕ್ರದ ಬಳಿ ವಿಮಾನದ ಹೊರಗಿನಿಂದ ಮಾತ್ರ ಜನರು ಪ್ರವೇಶಿಸಬಹುದು. ಬೋಯಿಂಗ್ 787-10 ವಿಮಾನದ ಕೆಳಗೆ ಶವ ಪತ್ತೆಯಾಗಿದೆ. ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗುತ್ತಿದ್ದಾಗ ವಿಮಾನದ ಲ್ಯಾಂಡಿಂಗ್ ಗೇರ್ ಹೊಂದಿರುವ ವಿಭಾಗದಲ್ಲಿ ಶವ ಇರುವುದು ಕಂಡುಬಂದಿದೆ.
ಮೃತ ವ್ಯಕ್ತಿಯ ಬಗ್ಗೆ ತನಿಖೆ ನಡೆಯುತ್ತಿದೆ. ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಗಳು ಸಾಮಾನ್ಯವಾಗಿವೆ ಮತ್ತು ಘಟನೆಯಿಂದ ಏನೂ ಪರಿಣಾಮ ಬೀರಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತಷ್ಟು ಓದಿ: Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಮಾಯಿಯಲ್ಲಿ ಶವವಾಗಿ ಪತ್ತೆಯಾದ ವ್ಯಕ್ತಿ ಅಕ್ರಮ ವಲಸಿಗನೇ ಎಂದು ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಹಿಂದೆಯೂ ಲ್ಯಾಂಡಿಂಗ್ ಗೇರ್ ವಿಭಾಗದಲ್ಲಿ ಪ್ರಯಾಣಿಸಲು ಪ್ರಯತ್ನಿಸಿದ ಕಾರಣ ಕಳೆದ ಕೆಲವು ವರ್ಷಗಳಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ.
ಕಜಾಕಿಸ್ತಾನದಲ್ಲಿ ವಿಮಾನ ಪತನ
ಕಜಾಕಿಸ್ತಾನದ ಅಕ್ಟೌ ಬಳಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ. ಅಪಘಾತದ ಸ್ಥಳದಲ್ಲಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಜರ್‌ಬೈಜಾನ್ ಏರ್‌ಲೈನ್ಸ್ ನಿರ್ವಹಿಸುತ್ತಿದ್ದ ವಿಮಾನವು ಬಾಕುದಿಂದ ರಷ್ಯಾದ ಚೆಚೆನ್ಯಾದ ಗ್ರೋಜ್ನಿಗೆ ಹಾರುತ್ತಿತ್ತು. ವಿಮಾನದಲ್ಲಿ 105 ಪ್ರಯಾಣಿಕರು ಮತ್ತು ಐವರು ಸಿಬ್ಬಂದಿ ಇದ್ದರು ಎಂದು ಕಜಾಕ್ ಮಾಧ್ಯಮ ವರದಿ ಮಾಡಿದೆ. ಅಪಘಾತದಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ