AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ಬಾಂಬ್​ ಸ್ಫೋಟ; ಚೀನಾ ರಾಯಭಾರಿ ತಂಗಿದ್ದ ಹೋಟೆಲ್​ನಲ್ಲಿಯೇ ಬ್ಲಾಸ್ಟ್​

ನೈಋತ್ಯ ಬಲೂಚಿಸ್ತಾನ ಪ್ರಾಂತ್ಯದಲ್ಲಿ, ಬಲೂಚಿಸ್ತಾನ ಲಿಬರೇಶನ್​ ಫ್ರಂಟ್​ ಮತ್ತು ಬಲೂಚಿಸ್ತಾನ ಲಿಬರೇಶನ್ ಆರ್ಮಿಯಂಥ ಪ್ರತ್ಯೇಕತಾವಾದಿಗಳ ಗುಂಪು ಪದೇಪದೆ ಬಂಡಾಯ ಏಳುವುದು ಸಾಮಾನ್ಯವಾಗಿದೆ.

ಪಾಕಿಸ್ತಾನದಲ್ಲಿ ಬಾಂಬ್​ ಸ್ಫೋಟ; ಚೀನಾ ರಾಯಭಾರಿ ತಂಗಿದ್ದ ಹೋಟೆಲ್​ನಲ್ಲಿಯೇ ಬ್ಲಾಸ್ಟ್​
ಪಾಕಿಸ್ತಾನದಲ್ಲಿ ಬಾಂಬ್​ ಬ್ಲಾಸ್ಟ್​
Lakshmi Hegde
|

Updated on: Apr 22, 2021 | 9:26 AM

Share

ಪಾಕಿಸ್ತಾನದ ಬಲೂಚಿಸ್ತಾನದ ಕ್ವೆಟ್ಟಾ ನಗರದ ಐಷಾರಾಮಿ ಹೋಟೆಲ್​​ನ ಕಾರ್​ ಪಾರ್ಕಿಂಗ್​ ಸ್ಥಳದಲ್ಲಿ ಪ್ರಬಲ ಬಾಂಬ್​ ಸ್ಫೋಟವಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಹೊಟೆಲ್​ ಹೆಸರು ಸೆರೆನಾ ಎಂದಾಗಿದ್ದು, ಬಾಂಬ್​ ಸ್ಫೋಟ ಮಾಡಿದ್ಯಾರು? ಕಾರಣವೇನು ಎಂಬುದಿನ್ನೂ ಗೊತ್ತಾಗಿಲ್ಲ. ಚೀನಾ ರಾಯಭಾರಿ ಸೇರಿ ನಾಲ್ವರ ನಿಯೋಗ ಇದೇ ಹೋಟೆಲ್​​ನಲ್ಲಿ ಇತ್ತು ಎಂದು ವರದಿಯಾಗಿದೆ.

ಹೋಟೆಲ್ ಕಾರ್ ಪಾರ್ಕಿಂಗ್​ ಬಳಿ ಸ್ಫೋಟವಾಗಿದ್ದನ್ನು ಪಾಕಿಸ್ತಾನ ಆಂತರಿಕ ವ್ಯವಹಾರಗಳ ಸಚಿವ ಶೇಖ್​ ರಶೀದ್​ ಅಹ್ಮದ್​ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದು, ಇದು ಉಗ್ರರ ಕೈವಾಡ ಎಂದಿದ್ದಾರೆ. ಇನ್ನು ಚೀನಾ ರಾಯಭಾರಿಯ ಆತಿಥ್ಯಕ್ಕಾಗಿ ಇದೇ ಹೊಟೆಲ್​ನಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಬಾಂಬ್​ ಸ್ಫೋಟವಾದ ವೇಳೆ ಅವರು ಮೀಟಿಂಗ್​ ನಿಮಿತ್ತ ಹೊರಹೋಗಿದ್ದರು ಎಂದು ತಿಳಿಸಿದ್ದಾರೆ.

ನೈಋತ್ಯ ಬಲೂಚಿಸ್ತಾನ ಪ್ರಾಂತ್ಯದಲ್ಲಿ, ಬಲೂಚಿಸ್ತಾನ ಲಿಬರೇಶನ್​ ಫ್ರಂಟ್​ ಮತ್ತು ಬಲೂಚಿಸ್ತಾನ ಲಿಬರೇಶನ್ ಆರ್ಮಿಯಂಥ ಪ್ರತ್ಯೇಕತಾವಾದಿಗಳ ಗುಂಪು ಪದೇಪದೆ ಬಂಡಾಯ ಏಳುವುದು ಸಾಮಾನ್ಯವಾಗಿದೆ. ಬಲೂಚಿಸ್ತಾನಕ್ಕೆ ಸ್ವಾತಂತ್ರ್ಯ ಬೇಕು ಎಂಬುದು ಅವರ ದಶಕಗಳ ಬೇಡಿಕೆಯಾಗಿದ್ದು, ಆಗಾಗ ಹಿಂಸಾಚಾರ ನಡೆಸುತ್ತಲೇ ಇರುತ್ತಾರೆ. ಆದರೆ ಈ ಬಾಂಬ್ ಸ್ಫೋಟದ ಹಿಂದೆ ಯಾರ ಕೈವಾಡವಿದೆ ಎಂಬುದು ಇನ್ನೂ ಬೆಳಕಿಗೆ ಬರಬೇಕಿದೆ.

ಇದನ್ನೂ ಓದಿ: ಚಿರಂಜೀವಿ ಕ್ಯಾರವಾನ್ ಚಾಲಕ ಕೊರೊನಾದಿಂದ ನಿಧನ; ಮೆಗಾಸ್ಟಾರ್ ಅಭಿಮಾನಿಗಳಲ್ಲಿ ಆತಂಕ

ಸಿಪಿಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಹಿರಿಯ ಪುತ್ರ ಕೊವಿಡ್​ ಸೋಂಕಿನಿಂದ ಸಾವು

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​