AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karachi Blast: ಕರಾಚಿಯಲ್ಲಿ ಸ್ಫೋಟ, ಮಕ್ಕಳು ಸೇರಿ 16 ಮಂದಿ ಸಾವು

ಪಾಕಿಸ್ತಾನದ ಕರಾಚಿಯಲ್ಲಿ ಭಾರಿ ಸ್ಫೋಟ(Blast) ಸಂಭವಿಸಿದ್ದು, ಮಕ್ಕಳು ಸೇರಿ 16 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಸತಿ ಕಟ್ಟಡವೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ 14 ಮಂದಿ ಗಾಯಗೊಂಡಿದ್ದಾರೆ. ಓಲ್ಡ್ ಸೋಲ್ಜರ್ ಬಜಾರ್ ಪ್ರದೇಶದ ಕಟ್ಟಡದ ಮೊದಲ ಮಹಡಿಯಲ್ಲಿ ಸ್ಫೋಟ ಸಂಭವಿಸಿದೆ, ಪಾಕಿಸ್ತಾನದಲ್ಲಿ ಇಂದು ರಂಜಾನ್ ಮೊದಲ ದಿನವನ್ನು ಆಚರಿಸಲಾಗುತ್ತಿತ್ತು. ಪ್ರಾಥಮಿಕ ತನಿಖೆಯ ಪ್ರಕಾರ ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.

Karachi Blast: ಕರಾಚಿಯಲ್ಲಿ ಸ್ಫೋಟ, ಮಕ್ಕಳು ಸೇರಿ 16 ಮಂದಿ ಸಾವು
ಸ್ಫೋಟ Image Credit source: Benefit news24
ನಯನಾ ರಾಜೀವ್
|

Updated on: Feb 19, 2026 | 3:43 PM

Share

ಕರಾಚಿ, ಫೆಬ್ರವರಿ 19: ಪಾಕಿಸ್ತಾನದ ಕರಾಚಿಯಲ್ಲಿ ಭಾರಿ ಸ್ಫೋಟ(Blast) ಸಂಭವಿಸಿದ್ದು, ಮಕ್ಕಳು ಸೇರಿ 16 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಸತಿ ಕಟ್ಟಡವೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ 14 ಮಂದಿ ಗಾಯಗೊಂಡಿದ್ದಾರೆ. ಓಲ್ಡ್ ಸೋಲ್ಜರ್ ಬಜಾರ್ ಪ್ರದೇಶದ ಕಟ್ಟಡದ ಮೊದಲ ಮಹಡಿಯಲ್ಲಿ ಸ್ಫೋಟ ಸಂಭವಿಸಿದೆ, ಪಾಕಿಸ್ತಾನದಲ್ಲಿ ಇಂದು ರಂಜಾನ್ ಮೊದಲ ದಿನವನ್ನು ಆಚರಿಸಲಾಗುತ್ತಿತ್ತು. ಪ್ರಾಥಮಿಕ ತನಿಖೆಯ ಪ್ರಕಾರ ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬಹುತೇಕ ಮನೆಗಳಲ್ಲಿ ದೈನಂದಿನ ಬಳಕೆಗಾಗಿ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಸಿಲಿಂಡರ್‌ಗಳನ್ನು ಅವಲಂಬಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಸ್ಥಳದಿಂದ ಇದುವರೆಗೆ 14 ಶವಗಳನ್ನು ಆಸ್ಪತ್ರೆಗಳಿಗೆ ತರಲಾಗಿದೆ ಎಂದು ದೃಢಪಡಿಸಿದ್ದಾರೆ, ಆದರೆ 14 ಗಾಯಾಳುಗಳು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

ಸ್ಫೋಟದ ಪರಿಣಾಮವಾಗಿ ಕಟ್ಟಡದ ಒಂದು ಭಾಗ ಶಿಥಿಲಗೊಂಡಿದ್ದರಿಂದ ಕುಸಿದು ಬಿದ್ದಿದೆ. ಇನ್ನೂ ಶವಗಳು ಅಥವಾ ಬದುಕುಳಿದವರು ಇದ್ದಾರೆಯೇ ಎಂದು ನೋಡಲು ನಾವು ಇನ್ನೂ ಹುಡುಕುತ್ತಿದ್ದೇವೆ ಎಂದು ಮುಖ್ಯ ಅಗ್ನಿಶಾಮಕ ಅಧಿಕಾರಿ ಹುಮಾಯೂನ್ ಖಾನ್ ಹೇಳಿದ್ದಾರೆ. ಮೃತರಲ್ಲಿ ಎರಡರಿಂದ 17 ವರ್ಷದೊಳಗಿನ ಕನಿಷ್ಠ ಒಂಬತ್ತು ಮಕ್ಕಳು ಸೇರಿದ್ದಾರೆ, ಗಾಯಗೊಂಡವರಲ್ಲಿ ಏಳು ಮಕ್ಕಳಿದ್ದಾರೆ.

ಮತ್ತಷ್ಟು ಓದಿ: ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಸ್ಫೋಟದ ಹೊಸ ಸಿಸಿಟಿವಿ ವಿಡಿಯೋ ವೈರಲ್

ಕರಾಚಿಯಲ್ಲಿ ಇತ್ತೀಚೆಗೆ ಸಂಭವಿಸಿದ ಎರಡನೇ ಪ್ರಮುಖ ದುರಂತ ಇದಾಗಿದೆ. ಕಳೆದ ತಿಂಗಳು, ಸದ್ದಾರ್ ಪ್ರದೇಶದ ಸಗಟು ಮತ್ತು ಚಿಲ್ಲರೆ ಮಾರುಕಟ್ಟೆಯಾದ ಗುಲ್ ಶಾಪಿಂಗ್ ಪ್ಲಾಜಾದ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 79 ಜನರು ಸಾವನ್ನಪ್ಪಿದ್ದರು ಮತ್ತು ಹಲವಾರು ಜನರು ಗಾಯಗೊಂಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ