AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಪ್ಪಂದ ಮಾಡಿಕೊಳ್ಳಿ ಅಥವಾ ಸಂಪೂರ್ಣ ಶರಣಾಗಿ’; ಇರಾನ್‌ ವಿರುದ್ಧ ಗುಡುಗಿದ ಟ್ರಂಪ್

"ಒಪ್ಪಂದ ಅಥವಾ ಸಂಪೂರ್ಣ ಶರಣಾಗತಿ" ಇವು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮುಂದೆ ಇಟ್ಟಿರುವ ಎರಡು ಆಯ್ಕೆಗಳು. ತಮ್ಮ 'ಟ್ರೂತ್ ಸೋಶಿಯಲ್' ಜಾಲತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಟ್ರಂಪ್, ಸಾರ್ವಜನಿಕವಾಗಿ ಯಾವುದೇ ಚರ್ಚೆ ನಡೆಯುತ್ತಿಲ್ಲ ಎಂದು ನಿರಾಕರಿಸುವ ಇರಾನ್ ಖಾಸಗಿಯಾಗಿ ನಮ್ಮ ಜೊತೆ ಮಾತುಕತೆಗಾಗಿ ಬೇಡಿಕೊಂಡಿತ್ತು ಎಂದು ಟೀಕಿಸಿದ್ದಾರೆ. ಹಾರ್ಮುಜ್ ಜಲಸಂಧಿಯ ಮೂಲಕ ಸರಕುಗಳ ಸಂಚಾರವು ಸಂಪೂರ್ಣವಾಗಿ ಅಮೆರಿಕದ ನಿರ್ಧಾರದ ಮೇಲೆಯೇ ಅವಲಂಬಿತವಾಗಿರುತ್ತದೆ ಎಂದು ಟ್ರಂಪ್ ಎಚ್ಚರಿಸಿದ್ದಾರೆ.

'ಒಪ್ಪಂದ ಮಾಡಿಕೊಳ್ಳಿ ಅಥವಾ ಸಂಪೂರ್ಣ ಶರಣಾಗಿ'; ಇರಾನ್‌ ವಿರುದ್ಧ ಗುಡುಗಿದ ಟ್ರಂಪ್
Donald Trump Image Credit source: AP
ಸುಷ್ಮಾ ಚಕ್ರೆ
|

Updated on: Aug 03, 2026 | 10:50 PM

Share

ವಾಷಿಂಗ್ಟನ್, ಆಗಸ್ಟ್ 3: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಇರಾನ್ (Iran War) ವಿರುದ್ಧ ವಾಗ್ದಾಳಿ ನಡೆಸಿದ್ದು, ಮಾತುಕತೆಯ ವಿಷಯದಲ್ಲಿ ಇರಾನ್ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ. ಜೊತೆಗೆ ಇರಾನ್ ಎಂದಿಗೂ ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸಲು ನಾವು ಅನುಮತಿ ನೀಡುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ. ನಮ್ಮ ಬಳಿ ಖಾಸಗಿಯಾಗಿ ಇರಾನ್ ನಾಯಕರು ಮಾತುಕತೆಗಾಗಿ ಮನವಿ ಮಾಡುತ್ತಿದ್ದಾರೆ, ಆದರೆ ಸಾರ್ವಜನಿಕವಾಗಿ ಯಾವುದೇ ಚರ್ಚೆಗಳು ನಡೆಯುತ್ತಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಟ್ರಂಪ್ (Donald Trump) ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಇರಾನ್ ಒಪ್ಪಿಕೊಳ್ಳಲಿ ಅಥವಾ ಬಿಡಲಿ, ಅವರು ದಶಕಗಳಿಂದ ಸೃಷ್ಟಿಸಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಾವು ಮಾತುಕತೆ ನಡೆಸುತ್ತಿರುವುದು ಸತ್ಯ” ಎಂದು ಟ್ರಂಪ್ ಪೋಸ್ಟ್ ಮಾಡಿದ್ದಾರೆ. ಜಾಗತಿಕ ನೌಕಾ ಸಾರಿಗೆಯ ಪ್ರಮುಖ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯ ನಿಯಂತ್ರಣದ ಕುರಿತು ಇರಾನ್ ಮಾಡುತ್ತಿರುವ ಪ್ರತಿಪಾದನೆಯನ್ನೂ ಕೂಡ ಟ್ರಂಪ್ ತಳ್ಳಿಹಾಕಿದ್ದಾರೆ. “ಹಾರ್ಮುಜ್ ಜಲಸಂಧಿಯನ್ನು ತಾವೇ ಶಕ್ತಿಯುತವಾಗಿ ನಿರ್ವಹಿಸುವುದಾಗಿ ಅವರು ಎಂದಿನಂತೆ ಸುದ್ದಿ ಹರಡುತ್ತಿದ್ದಾರೆ. ಆದರೆ ಈಗಾಗಲೇ ಅಮೆರಿಕ ನೌಕಾಪಡೆ ಅದನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತೆಗೆದುಕೊಂಡಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇರಾನ್ ಜತೆ ಮತ್ತೆ ಶಾಂತಿ ಮಾತುಕತೆ, ದಾಳಿ ರದ್ದು: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು

ಹಾರ್ಮುಜ್ ಜಲಸಂಧಿಯ ಮೂಲಕ ಸರಕುಗಳ ಸಂಚಾರವು ಸಂಪೂರ್ಣವಾಗಿ ಅಮೆರಿಕದ ನಿರ್ಧಾರದ ಮೇಲೆಯೇ ಅವಲಂಬಿತವಾಗಿರುತ್ತದೆ ಎಂದಿರುವ ಟ್ರಂಪ್, “ನಾವು ಬಯಸದ ಹೊರತು ಇರಾನ್‌ಗೆ ಏನೂ ಮಾಡಲು ಸಾಧ್ಯವಿಲ್ಲ. ಒಪ್ಪಂದಕ್ಕೆ ಬರದಿದ್ದರೆ ಅಥವಾ ಸಂಪೂರ್ಣ ಶರಣಾಗದಿದ್ದರೆ ಏನೂ ಸಿಗುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ಇರಾನ್ ವಿರುದ್ಧ ನಡೆಸಲು ಉದ್ದೇಶಿಸಿದ್ದ ಬೃಹತ್ ಮಿಲಿಟರಿ ದಾಳಿಯನ್ನು ಹಿಂಪಡೆಯುವುದಾಗಿ ಪ್ರಕಟಿಸಿದ ಮರುದಿನವೇ ಟ್ರಂಪ್ ಈ ಆಕ್ರೋಶದ ಹೇಳಿಕೆಗಳನ್ನು ನೀಡಿದ್ದಾರೆ. ಕತಾರ್, ಸೌದಿ ಅರೇಬಿಯಾ ಮತ್ತು ಯುಎಇಯಂತಹ ಗಲ್ಫ್ ಮಿತ್ರ ರಾಷ್ಟ್ರಗಳ ವಿನಂತಿಯ ಮೇರೆಗೆ ಎರಡನೇ ಮಹಾಯುದ್ಧದ ನಂತರದ ಅತಿ ದೊಡ್ಡ ದಾಳಿ ಎಂದು ತಾವು ಬಣ್ಣಿಸಿದ್ದ ಯೋಜನೆಯನ್ನು ತಡೆಹಿಡಿದಿರುವುದಾಗಿ ಟ್ರಂಪ್ ಭಾನುವಾರ ಹೇಳಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!