ಮುಂಬೈ ದಾಳಿ ಅಪರಾಧಿ ತಹಾವ್ವುರ್ ರಾಣಾ ಹಸ್ತಾಂತರಕ್ಕೆ ಅನುಮೋದನೆ, ಪ್ರಧಾನಿ ಮೋದಿ ಸಮ್ಮುಖದಲ್ಲಿ ಟ್ರಂಪ್ ಘೋಷಣೆ

2008ರ 26/11 ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಅಮೆರಿಕದಲ್ಲಿ ಶಿಕ್ಷೆಗೊಳಗಾಗಿರುವ ತಹಾವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಮುಂದಾಗಿದ್ದು, ಪ್ರಧಾನಿ ಮೋದಿ ಸಮ್ಮುಖದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಈ ಘೋಷಣೆ ಮಾಡಿದ್ದಾರೆ. ಕಳೆದ ತಿಂಗಳು, ಅಮೆರಿಕದ ಸುಪ್ರೀಂ ಕೋರ್ಟ್ ತಹಾವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅನುಮೋದನೆ ನೀಡಿತ್ತು. ಪ್ರಕರಣದಲ್ಲಿ ಅವರ ಶಿಕ್ಷೆಯ ವಿರುದ್ಧ ಅವರು ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತು.

ಮುಂಬೈ ದಾಳಿ ಅಪರಾಧಿ ತಹಾವ್ವುರ್ ರಾಣಾ ಹಸ್ತಾಂತರಕ್ಕೆ ಅನುಮೋದನೆ, ಪ್ರಧಾನಿ ಮೋದಿ ಸಮ್ಮುಖದಲ್ಲಿ ಟ್ರಂಪ್ ಘೋಷಣೆ
ತಹಾವ್ವುರ್ ರಾಣಾ
Image Credit source: Indian Express

Updated on: Feb 14, 2025 | 7:49 AM

2008ರ 26/11 ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಅಮೆರಿಕದಲ್ಲಿ ಶಿಕ್ಷೆಗೊಳಗಾಗಿರುವ ತಹಾವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಮುಂದಾಗಿದ್ದು, ಪ್ರಧಾನಿ ಮೋದಿ ಸಮ್ಮುಖದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಈ ಘೋಷಣೆ ಮಾಡಿದ್ದಾರೆ. ಕಳೆದ ತಿಂಗಳು, ಅಮೆರಿಕದ ಸುಪ್ರೀಂ ಕೋರ್ಟ್ ತಹಾವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅನುಮೋದನೆ ನೀಡಿತ್ತು. ಪ್ರಕರಣದಲ್ಲಿ ಅವರ ಶಿಕ್ಷೆಯ ವಿರುದ್ಧ ಅವರು ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತು.

ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ ತಹಾವ್ವುರ್ ರಾಣಾ ಅವರು 2008 ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಆರೋಪಿಸಲ್ಪಟ್ಟರು ಮತ್ತು ಶಿಕ್ಷೆಗೊಳಗಾಗಿದ್ದಾರೆ. ಭಾರತವು ಅಮೆರಿಕದ ಏಜೆನ್ಸಿಯೊಂದಿಗೆ ವಿವರಗಳನ್ನು ಹಂಚಿಕೊಂಡಿತ್ತು, ಅದನ್ನು ಕೆಳ ನ್ಯಾಯಾಲಯಗಳು ಮತ್ತು ಸುಪ್ರೀಂ ಕೋರ್ಟ್‌ನ ಮುಂದೆ ಇಡಲಾಯಿತು. ಭಾರತದ ಈ ಸಾಕ್ಷ್ಯವನ್ನು ನ್ಯಾಯಾಲಯ ಸ್ವೀಕರಿಸಿತು. ಭಾರತ ನೀಡಿದ ದಾಖಲೆಯಲ್ಲಿ 26/11 ದಾಳಿಯಲ್ಲಿ ತಹಾವ್ವುರ್ ಪಾತ್ರವನ್ನು ಉಲ್ಲೇಖಿಸಲಾಗಿದೆ.

2008 ರ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ತಹಾವ್ವುರ್ ರಾಣಾ ಬೇಕಾಗಿದ್ದರಿಂದ ಭಾರತ ಅವನನ್ನು ಹಸ್ತಾಂತರಿಸುವಂತೆ ಕೋರಿತ್ತು. ಇದಕ್ಕೂ ಮೊದಲು, ಅವರು ಸ್ಯಾನ್ ಫ್ರಾನ್ಸಿಸ್ಕೋದ ಉತ್ತರ ಸರ್ಕ್ಯೂಟ್‌ಗಾಗಿ ಯುಎಸ್ ಕೋರ್ಟ್ ಆಫ್ ಅಪೀಲ್ಸ್ ಸೇರಿದಂತೆ ಹಲವಾರು ಫೆಡರಲ್ ನ್ಯಾಯಾಲಯಗಳಲ್ಲಿ ಕಾನೂನು ಹೋರಾಟಗಳನ್ನು ಸೋತಿದ್ದರು.

ತಹಾವ್ವುರ್ ರಾಣಾ ಯಾರು?

26/11 ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ತಹಾವೂರ್ ರಾಣಾ ಹೆಸರನ್ನು ತಮ್ಮ ಆರೋಪ ಪಟ್ಟಿಯಲ್ಲಿ ಸೇರಿಸಿದ್ದರು. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಮತ್ತು ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ಸಕ್ರಿಯ ಸದಸ್ಯನಾಗಿ ಕೆಲಸ ಮಾಡುತ್ತಿರುವ ಆರೋಪ ಆತನ ಮೇಲಿದೆ.
26/11 ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಡೇವಿಡ್ ಕೋಲ್ಮನ್ ಹೆಡ್ಲಿಗೆ ಸಹಾಯ ಮಾಡಿದ ಆರೋಪ ರಾಣಾ ಮೇಲೆ ಹೊರಿಸಲಾಗಿತ್ತು.

ಮತ್ತಷ್ಟು ಓದಿ: ಈ ವರ್ಷದ ಅಂತ್ಯದಲ್ಲಿ ಮುಂಬೈ ದಾಳಿ ಆರೋಪಿ ತಹವ್ವುರ್​ ರಾಣಾ ಅಮೆರಿಕದಿಂದ ಭಾರತಕ್ಕೆ ಹಸ್ತಾಂತರ ಸಾಧ್ಯತೆ

ಮುಂಬೈನಲ್ಲಿ ದಾಳಿ ನಡೆಸಬೇಕಾದ ಸ್ಥಳಗಳ ಪರಿಶೀಲನೆ ನಡೆಸಿದ್ದು ತಹವ್ವುರ್ ರಾಣಾ, ಅದರ ನೀಲನಕ್ಷೆಯನ್ನು ಸಿದ್ಧಪಡಿಸಿ ಪಾಕಿಸ್ತಾನಿ ಭಯೋತ್ಪಾದಕರಿಗೆ ಹಸ್ತಾಂತರಿಸಿದ್ದ. ರಾಣಾ ಡೇವಿಡ್ ಕೋಲ್ಮನ್ ಹೆಡ್ಲಿ ಅಲಿಯಾಸ್ ದಾವೂದ್ ಸಯೀದ್ ಗಿಲಾನಿಯ ಬಾಲ್ಯದ ಸ್ನೇಹಿತ. ಹೆಡ್ಲಿ ಒಬ್ಬ ಅಮೆರಿಕನ್ ಪ್ರಜೆ. ಆತನ ತಾಯಿ ಅಮೆರಿಕನ್ನ್ ಮತ್ತು ಟಿಪಾ ಪಾಕಿಸ್ತಾನಿ.
ಅಕ್ಟೋಬರ್ 2009 ರಲ್ಲಿ ಅಮೆರಿಕದ ಅಧಿಕಾರಿಗಳು ಅವರನ್ನು ಚಿಕಾಗೋದಲ್ಲಿ ಬಂಧಿಸಿದರು. ಜನವರಿ 24, 2013 ರಂದು, ಮುಂಬೈ ದಾಳಿಯಲ್ಲಿ ಹೆಡ್ಲಿ ಭಾಗಿಯಾಗಿದ್ದಾನೆಂದು ಸಾಬೀತಾಯಿತು ಮತ್ತು ಅಮೆರಿಕದ ನ್ಯಾಯಾಲಯವು ಅವನಿಗೆ 35 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು.

ರಾಣಾ ಪಾಕಿಸ್ತಾನದ ಹಸನ್ ಅಬ್ದಲ್ ಕೆಡೆಟ್ ಶಾಲೆಯಲ್ಲಿ ಅಧ್ಯಯನ ಮಾಡಿದ್ದ, ಹೆಡ್ಲಿ ಅಮೆರಿಕಕ್ಕೆ ತೆರಳುವ ಮೊದಲು ಐದು ವರ್ಷಗಳ ಕಾಲ ಅಲ್ಲಿಯೇ ಅಧ್ಯಯನ ಮಾಡಿದ್ದರು. ಪಾಕಿಸ್ತಾನಿ ಸೈನ್ಯದಲ್ಲಿ ವೈದ್ಯನಾಗಿ ಕೆಲಸ ಮಾಡಿದ ನಂತರ, ರಾಣಾ ಕೆನಡಾಕ್ಕೆ ಸ್ಥಳಾಂತರಗೊಂಡರು ಮತ್ತು ಕೆಲವು ವರ್ಷಗಳ ನಂತರ ಅವರು ಕೆನಡಾದ ಪೌರತ್ವವನ್ನೂ ಪಡೆದರು. ಚಿಕಾಗೋದಲ್ಲಿ ‘ಫಸ್ಟ್ ವರ್ಲ್ಡ್ ಇಮಿಗ್ರೇಷನ್ ಸರ್ವೀಸಸ್’ ಎಂಬ ಸಲಹಾ ಸಂಸ್ಥೆಯನ್ನು ಪ್ರಾರಂಭಿಸಿದರು. ರಾಣಾ ಅವರ ಕಂಪನಿಯು ಮುಂಬೈನಲ್ಲಿ ಒಂದು ಶಾಖೆಯನ್ನು ಸಹ ಹೊಂದಿತ್ತು.

2008 ರ ನವೆಂಬರ್ 26 ರಂದು 10 ಲಷ್ಕರ್ ಭಯೋತ್ಪಾದಕರು ಅಪಾರ ಪ್ರಮಾಣದ ಮದ್ದುಗುಂಡುಗಳು ಮತ್ತು ಶಸ್ತ್ರಾಸ್ತ್ರಗಳನ್ನು ಹೊತ್ತು ಸಮುದ್ರ ಮಾರ್ಗವಾಗಿ ಮುಂಬೈ ಪ್ರವೇಶಿಸಿದರು. ಆತ ಮುಂಬೈನ 9 ಸ್ಥಳಗಳಲ್ಲಿ ಹತ್ಯಾಕಾಂಡವನ್ನು ನಡೆಸಿದ್ದ.

ಭಯೋತ್ಪಾದಕರು ಗುರಿಯಾಗಿಸಿಕೊಂಡ ಎಂಟು ಸ್ಥಳಗಳು ದಕ್ಷಿಣ ಮುಂಬೈನಲ್ಲಿವೆ – ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್, ಒಬೆರಾಯ್ ಟ್ರೈಡೆಂಟ್ ಹೋಟೆಲ್, ತಾಜ್ ಹೋಟೆಲ್, ಲಿಯೋಪೋಲ್ಡ್ ಕೆಫೆ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್, ಮೆಟ್ರೋ ಸಿನಿಮಾ ಮತ್ತು ಟೈಮ್ಸ್ ಆಫ್ ಇಂಡಿಯಾ ಕಟ್ಟಡ ಮತ್ತು ಸೇಂಟ್ ಕ್ಸೇವಿಯರ್ಸ್ ಕಾಲೇಜಿನ ಹಿಂದಿನ ಲೇನ್. ಮುಂಬೈನ ಬಂದರು ಪ್ರದೇಶವಾದ ಮಜಗಾಂವ್ ಮತ್ತು ವಿಲೇ ಪಾರ್ಲೆಯಲ್ಲಿ ಟ್ಯಾಕ್ಸಿಯಲ್ಲಿಯೂ ಸ್ಫೋಟ ಸಂಭವಿಸಿದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ