AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ ಪುಟಿನ್​ಗೇನಾದ್ರೂ ಹುಚ್ಚು ಹಿಡಿದಿದ್ಯಾ? ಉಕ್ರೇನ್​ ಮೇಲೆ ರಷ್ಯಾ ಡ್ರೋನ್​ ದಾಳಿಗೆ ಟ್ರಂಪ್ ಆಕ್ರೋಶ

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ನಿಲ್ಲುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಶನಿವಾರ ರಾತ್ರಿ, ರಷ್ಯಾ ಉಕ್ರೇನ್ ಮೇಲೆ ಇದುವರೆಗಿನ ಅತಿದೊಡ್ಡ ವಾಯುದಾಳಿ ನಡೆಸಿತು. ಈ ದಾಳಿಯಲ್ಲಿ, ರಾಜಧಾನಿ ಕೀವ್ ಸೇರಿದಂತೆ ಉಕ್ರೇನಿಯನ್ ನಗರಗಳ ಮೇಲೆ ಒಟ್ಟು 367 ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಹಾರಿಸಲಾಯಿತು. ಈ ಕುರಿತು ಅಮರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮಾತನಾಡಿ, ಪುಟಿನ್​ಗೆ ಹುಚ್ಚು ಹಿಡಿದಿದೆ ಎಂದೆನಿಸುತ್ತಿದೆ. ಸುಖಾಸುಮ್ಮನೆ ಅಮಾಯಕರನ್ನು ಹತ್ಯೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಅಯ್ಯೋ ಪುಟಿನ್​ಗೇನಾದ್ರೂ ಹುಚ್ಚು ಹಿಡಿದಿದ್ಯಾ? ಉಕ್ರೇನ್​ ಮೇಲೆ ರಷ್ಯಾ ಡ್ರೋನ್​ ದಾಳಿಗೆ ಟ್ರಂಪ್ ಆಕ್ರೋಶ
ಡೊನಾಲ್ಡ್​ ಟ್ರಂಪ್, ಝೆಲೆನ್ಸ್ಕಿ, ಪುಟಿನ್
ನಯನಾ ರಾಜೀವ್
|

Updated on: May 26, 2025 | 10:34 AM

Share

ವಾಷಿಂಗ್ಟನ್, ಮೇ 26: ‘‘ಅಯ್ಯೋ ಪುಟಿನ್​ಗೇನಾದ್ರೂ ಹುಚ್ಚು ಹಿಡಿದಿದ್ಯಾ’’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಪ್ರಶ್ನಿಸಿದ್ದಾರೆ. ಉಕ್ರೇನ್​ನ ಕೈವ್ ಮತ್ತು ಇತರೆ ನಗರಗಳ ಮೇಲೆ ರಷ್ಯಾ ಸತತ ಮೂರನೇ ದಿನವೂ ಡ್ರೋನ್ ಮತ್ತು ಕ್ಷಿಪಣಿ ದಾಳಿ ಮುಂದುವರೆಸಿದ್ದಕ್ಕೆ ಟ್ರಂಪ್ ಪುಟಿನ್​ರನ್ನು ಕಟುವಾಗಿ ಟೀಕಿಸಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಾನು ಯಾವಾಗಲೂ ಉತ್ತಮ ಸಂಬಂಧವನ್ನು ಹೊಂದಿದ್ದೇನೆ.ಆದರೆ ಅವರಿಗೆ ಈಗ ಏನೋ ಆಗಿದೆ.

ಅವರಿಗೆ ಹುಚ್ಚು ಹಿಡಿದಂತಿದೆ. ಪುಟಿನ್ ಅನಗತ್ಯವಾಗಿ ಹೆಚ್ಚಿನ ಸಂಖ್ಯೆಯ ಜನರನ್ನು ಕೊಲ್ಲುತ್ತಿದ್ದಾರೆ. ಉಕ್ರೇನ್ ಮೇಲೆ ರಷ್ಯಾದಿಂದ ದಾಳಿಗಳು ನಿರಂತರವಾಗಿ ಹೆಚ್ಚುತ್ತಿದ್ದು, ಇದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೆರಳಿಸಿದೆ. ಅಧ್ಯಕ್ಷ ಟ್ರಂಪ್ ಅವರು ಪುಟಿನ್ ಅವರ ಬಗ್ಗೆ ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಉಕ್ರೇನ್ ನಗರಗಳ ಮೇಲೆ ವಿನಾಕಾರಣ ಕ್ಷಿಪಣಿಗಳು ಮತ್ತು ಡ್ರೋನ್‌ಗಳಿಂದ ದಾಳಿ ಮಾಡಲಾಗುತ್ತಿದೆ ಎಂದರು.ಪುಟಿನ್ ಇಡೀ ಉಕ್ರೇನ್ ಅನ್ನು ವಶಪಡಿಸಿಕೊಳ್ಳಲು ಬಯಸಿದರೆ, ಅದು ರಷ್ಯಾದ ಪತನಕ್ಕೆ ಕಾರಣವಾಗುತ್ತದೆ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಟ್ರಂಪ್, ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದರು.

ಝೆಲೆನ್ಸ್ಕಿ ಬಾಯಿಂದ ಹೊರಬರುವ ಎಲ್ಲವೂ ಸಮಸ್ಯೆಗಳನ್ನು ಸೃಷ್ಟಿಸುತ್ತದೆ, ಅದನ್ನು ನಿಲ್ಲಿಸಲೇಬೇಕು. ಮೂರು ವರ್ಷಗಳ ಯುದ್ಧ ಇನ್ನೂ ಕೊನೆಗೊಳ್ಳದಿರುವ ಬಗ್ಗೆ ಅಧ್ಯಕ್ಷ ಟ್ರಂಪ್ ಕಳವಳ ವ್ಯಕ್ತಪಡಿಸುತ್ತಿದ್ದಾರೆ. ತಾವು ಮತ್ತೆ ಅಧಿಕಾರಕ್ಕೆ ಬಂದರೆ, ಈ ಯುದ್ಧವನ್ನು ಬೇಗನೆ ಕೊನೆಗೊಳಿಸುವುದಾಗಿ ಅವರು ತಮ್ಮ ಅಧ್ಯಕ್ಷೀಯ ಪ್ರಚಾರದ ಸಮಯದಲ್ಲಿ ಭರವಸೆ ನೀಡಿದ್ದರು.

ಮತ್ತಷ್ಟು ಓದಿ: ದೊಡ್ಡಣ್ಣನಿಗೆ ಇಷ್ಟು ಸಣ್ಣತನವೇಕೆ? ಅತಿಥಿಗಳಿಗೆ ಸತ್ಕಾರದ ಬದಲು ಅವಮಾನ ಮಾಡ್ತಿದ್ದಾರೆ ಟ್ರಂಪ್

ಟ್ರಂಪ್ ಬಹಳ ಹಿಂದಿನಿಂದಲೂ ಪುಟಿನ್ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆಂದು ಹೇಳಿಕೊಳ್ಳುತ್ತಿದ್ದಾರೆ ಮತ್ತು ಉಕ್ರೇನ್ ಗಿಂತ ರಷ್ಯಾ ಶಾಂತಿ ಒಪ್ಪಂದಕ್ಕೆ ಬರಲು ಹೆಚ್ಚು ಇಚ್ಛಿಸುತ್ತದೆ ಎಂದು ಹೇಳುತ್ತಲೇ ಬಂದಿದ್ದಾರೆ.

ಆದರೆ ಕಳೆದ ತಿಂಗಳು ರಷ್ಯಾ ಉಕ್ರೇನ್ ಮೇಲೆ ಮಾರಕ ದಾಳಿ ನಡೆಸಿದಾಗ ಟ್ರಂಪ್ ದಾಳಿಯನ್ನು ನಿಲ್ಲಿಸುವಂತೆ ಪುಟಿನ್​ಗೆ ಮನವಿ ಮಾಡಿದ್ದರು. ರಷ್ಯಾದ ದಾಳಿಯಿಂದ ಝೆಲೆನ್ಸ್ಕಿ ಹತಾಶೆಗೊಂಡಿರುವುದು ಸಹಜ. ಜನವರಿ 20 ರವರೆಗೆ ಎಲ್ಲಾ ರೀತಿಯ ಸಹಾಯವನ್ನು ನೀಡುತ್ತಿದ್ದ ಅಮೆರಿಕ, ಈಗ ಮಿಲಿಟರಿ ಸಹಾಯವನ್ನು ಹಿಂತೆಗೆದುಕೊಳ್ಳುತ್ತಿದೆ.

30 ದಿನಗಳ ಕದನ ವಿರಾಮಕ್ಕಾಗಿ ರಷ್ಯಾವನ್ನು ಒತ್ತಾಯಿಸುತ್ತಿರುವ ಯುರೋಪಿಯನ್ ಒಕ್ಕೂಟ ಮತ್ತು ಬ್ರಿಟನ್ ಇತ್ತೀಚೆಗೆ ರಷ್ಯಾದ ಮೇಲೆ ಹೊಸ ನಿರ್ಬಂಧಗಳನ್ನು ವಿಧಿಸಿವೆ. ಆದರೆ ಹೊಸ ನಿರ್ಬಂಧಗಳನ್ನು ವಿಧಿಸುವಲ್ಲಿ ಅವರಿಗೆ ಬೆಂಬಲ ನೀಡಲು ಅಮೆರಿಕ ಅಧ್ಯಕ್ಷ ಟ್ರಂಪ್ ನಿರಾಕರಿಸಿದ್ದಾರೆ.

ಅಂತಾರಾಷ್ಟ್ರಿಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ