AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಮನವಿ ಮಾಡಿದ್ದರಿಂದ ನಾಳೆ ದೋಹಾದಲ್ಲಿ ಮಾತುಕತೆ; ಅಮೆರಿಕ ಅಧ್ಯಕ್ಷ ಟ್ರಂಪ್ ಮಾಹಿತಿ

ಹಾರ್ಮುಜ್ ಜಲಸಂಧಿ ವಿವಾದಕ್ಕೆ ಸಂಬಂಧಿಸಿದಂತೆ ಇರಾನ್ ವಿನಂತಿಯ ಮೇರೆಗೆ ನಾಳೆ ಸಭೆ ನಡೆಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದರಿಂದ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಕುತೂಹಲ ಹೆಚ್ಚಿದೆ. ಅಮೆರಿಕ ಮತ್ತು ಇರಾನ್ ದೇಶಗಳು ಮಂಗಳವಾರ ಕತಾರ್‌ನ ದೋಹಾದಲ್ಲಿ ಮಾತುಕತೆ ನಡೆಸಲಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಹಾರ್ಮುಜ್ ಜಲಸಂಧಿಯಲ್ಲಿ ಓಮನ್ ಬಳಿ ಸರಕು ಸಾಗಣೆ ಹಡಗೊಂದರ ಮೇಲೆ ಇರಾನ್ ನಡೆಸಿದ ಡ್ರೋನ್ ದಾಳಿಯ ನಂತರ ಉಭಯ ದೇಶಗಳ ನಡುವೆ ಉಂಟಾಗಿದ್ದ ಸರಣಿ ಪ್ರತಿದಾಳಿಗಳ ಬೆನ್ನಲ್ಲೇ ಈ ಅಧಿಕೃತ ಪ್ರಕಟಣೆ ಹೊರಬಿದ್ದಿದೆ.

ಇರಾನ್ ಮನವಿ ಮಾಡಿದ್ದರಿಂದ ನಾಳೆ ದೋಹಾದಲ್ಲಿ ಮಾತುಕತೆ; ಅಮೆರಿಕ ಅಧ್ಯಕ್ಷ ಟ್ರಂಪ್ ಮಾಹಿತಿ
Donald Trump Image Credit source: AP
ಸುಷ್ಮಾ ಚಕ್ರೆ
|

Updated on: Jun 29, 2026 | 7:36 PM

Share

ವಾಷಿಂಗ್ಟನ್, ಜೂನ್ 29: ಅಮೆರಿಕ ಮತ್ತು ಇರಾನ್ (Iran) ನಡುವಿನ ರಾಜತಾಂತ್ರಿಕ ಬಾಂಧವ್ಯದಲ್ಲಿ ತೀವ್ರ ಕುತೂಹಲ ಕೆರಳಿಸುವ ಬೆಳವಣಿಗೆಯೊಂದು ನಡೆದಿದೆ. ಇರಾನ್ ದೇಶದ ಮನವಿಯ ಮೇರೆಗೆ ನಾಳೆ (ಜೂನ್ 30) ಕತಾರ್‌ನ ದೋಹಾದಲ್ಲಿ ಉಭಯ ದೇಶಗಳ ನಡುವೆ ಮಹತ್ವದ ಸಭೆ ನಿಗದಿಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಇಂದು ತಮ್ಮ ‘ಟ್ರೂತ್ ಸೋಷಿಯಲ್’ (Truth Social) ಜಾಲತಾಣದಲ್ಲಿ ಈ ವಿಷಯ ಹಂಚಿಕೊಂಡ ಡೊನಾಲ್ಡ್ ಟ್ರಂಪ್, ಇರಾನ್ ಕಡೆಯಿಂದಲೇ ಈ ಸಭೆಗಾಗಿ ಮನವಿ ಬಂದಿತ್ತು ಎಂದು ಹೇಳಿದ್ದಾರೆ.

ಅಮೆರಿಕ ಮತ್ತು ಇರಾನ್ ನಡುವೆ ದೀರ್ಘಕಾಲದಿಂದ ಸಂಘರ್ಷಕ್ಕೆ ಕಾರಣವಾಗಿರುವ ಹಾರ್ಮುಜ್ ಜಲಸಂಧಿಯ ವಿವಾದದ ಕುರಿತು ಚರ್ಚಿಸಲು ಈ ಸಭೆಯನ್ನು ಕರೆಯಲಾಗಿದೆ. ಈ ಪ್ರಮುಖ ಜಲಮಾರ್ಗದ ಮೇಲೆ ತನ್ನ ನಿಯಂತ್ರಣ ಇರಬೇಕು ಎಂದು ಇರಾನ್ ಬಯಸುತ್ತಿದ್ದರೆ, ಈ ಜಲಸಂಧಿಯು ಜಾಗತಿಕ ಸಂಚಾರಕ್ಕೆ ಮುಕ್ತವಾಗಿರಬೇಕು ಎಂದು ಅಮೆರಿಕ ಪ್ರತಿಪಾದಿಸುತ್ತಿದೆ. ಕಳೆದ ವಾರ ಹಾರ್ಮುಜ್ ಜಲಸಂಧಿಯಿಂದ ಹೊರಹೋಗುತ್ತಿದ್ದ ಸರಕು ಸಾಗಣೆ ಹಡಗೊಂದನ್ನು ಇರಾನ್ ಗುರಿಯಾಗಿಸಿಕೊಂಡ ನಂತರ ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಉದ್ವಿಗ್ನತೆ ಹೆಚ್ಚಾಗಿತ್ತು. ಇದಕ್ಕೆ ಪ್ರತಿಕಾರವಾಗಿ ಅಮೆರಿಕವು ಇರಾನ್‌ನ ಕ್ಷಿಪಣಿ, ಡ್ರೋನ್ ಮತ್ತು ರಾಡಾರ್ ಕೇಂದ್ರಗಳ ಮೇಲೆ ದಾಳಿ ನಡೆಸಿತ್ತು. ಇದರಿಂದ ಇರಾನ್ ಮರುದಾಳಿ ನಡೆಸಿತ್ತು.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಭೀಕರ ಸಂಘರ್ಷ: ಶಾಂತಿ ಒಪ್ಪಂದವಾದ ಕೆಲವೇ ದಿನಗಳಲ್ಲಿ ಅಮೆರಿಕ-ಇರಾನ್ ಮುಖಾಮುಖಿ ದಾಳಿ

ಈ ಸಭೆಗೆ ಅಮೆರಿಕದ ಶ್ವೇತಭವನವು ಈಗಾಗಲೇ ಸಿದ್ಧತೆ ಮಾಡಿಕೊಂಡಿದೆ. ಮಧ್ಯಪ್ರಾಚ್ಯದ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ಮತ್ತು ಶಾಂತಿ ಪ್ರಕ್ರಿಯೆಯ ವಿಶೇಷ ರಾಯಭಾರಿ ಜ್ಯಾರೆಡ್ ಕುಶ್ನರ್ ಅವರು ಈ ಸಭೆಯಲ್ಲಿ ಅಮೆರಿಕದ ಪರವಾಗಿ ಭಾಗವಹಿಸಲಿದ್ದಾರೆ ಎಂದು ಶ್ವೇತಭವನ ಖಚಿತಪಡಿಸಿದೆ. ಕಳೆದ ಕೆಲವು ದಿನಗಳಿಂದ ಹಾರ್ಮುಜ್ ಜಲಸಂಧಿಯಲ್ಲಿ ಮಿಲಿಟರಿ ಸಂಘರ್ಷ ಹೆಚ್ಚುತ್ತಿರುವುದರಿಂದ, ಪ್ರಸ್ತುತ ಇರುವ ಸೂಕ್ಷ್ಮ ಮಧ್ಯಂತರ ಒಪ್ಪಂದವನ್ನು ಉಳಿಸಿಕೊಳ್ಳಲು ಟ್ರಂಪ್ ಸರ್ಕಾರ ತೀವ್ರ ಪ್ರಯತ್ನ ನಡೆಸುತ್ತಿದೆ.

ಇದನ್ನೂ ಓದಿ: ಇರಾನ್​ನಲ್ಲಿ ಖಮೇನಿ ಅಂತ್ಯಕ್ರಿಯೆ; ಭಾರತದ ಪರವಾಗಿ ಬಿಹಾರದ ರಾಜ್ಯಪಾಲ, ಸಚಿವ ಪವಿತ್ರ ಮಾರ್ಗರಿಟಾ ಭಾಗಿ

ಇದೇ ಸಂದರ್ಭದಲ್ಲಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರು, ಕತಾರ್‌ನಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದ ಇರಾನ್‌ನ 6 ಬಿಲಿಯನ್ ಡಾಲರ್ (ಸುಮಾರು 600 ಕೋಟಿ ಡಾಲರ್) ಮೌಲ್ಯದ ಆಸ್ತಿಯನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಅಮೆರಿಕದೊಂದಿಗಿನ ಮಾತುಕತೆಗೆ ಪ್ರಸ್ತುತ ಸಂಘರ್ಷದ ವಾತಾವರಣವು ಸವಾಲಾಗಿದ್ದರೂ, ಈ ಆಸ್ತಿ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದೆ ಎನ್ನಲಾಗಿದೆ. ಈ ಮಧ್ಯೆ, ಉಭಯ ದೇಶಗಳ ನಡುವಿನ ಪ್ರಮುಖ ಸಂಧಾನಕಾರ ರಾಷ್ಟ್ರವಾಗಿರುವ ಪಾಕಿಸ್ತಾನ ಮಂಗಳವಾರದಿಂದ ಮಾತುಕತೆಗಳು ಪುನರಾರಂಭಗೊಳ್ಳಲಿವೆ ಎಂದು ಹೇಳಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!