AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತಿಹಾಸದಲ್ಲೇ ನೊಬೆಲ್​ಗೆ ನನಗಿಂತ ಅರ್ಹರು ಯಾರೂ ಇಲ್ಲ: ನೊಬೆಲ್ ಶಾಂತಿ ಪುರಸ್ಕಾರ ನೀಡದಿದ್ದರೆ ಅದು ನೊಬೆಲ್ ಸಮಿತಿಗೇ ಅಪಖ್ಯಾತಿ ಎಂದ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡುವಂತೆ ಪುನರುಚ್ಚರಿಸಿದ್ದಾರೆ. "8 ಜಾಗತಿಕ ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗಿಂತ ಅರ್ಹರು ಯಾರು ಇಲ್ಲ" ಎಂದು ಹೇಳಿದ್ದಾರೆ. ಪ್ರಶಸ್ತಿ ನೀಡದಿದ್ದರೆ ನೊಬೆಲ್ ಸಮಿತಿಗೆ ಅಪಖ್ಯಾತಿ ಎಂದು ವಾದಿಸಿದ್ದಾರೆ. ಒಬಾಮಾ ಏನೂ ಮಾಡದಿದ್ದರೂ ಪ್ರಶಸ್ತಿ ಪಡೆದರು ಎಂದು ಟೀಕಿಸಿ, ತಮ್ಮ ಸಾಧನೆಗಳನ್ನು ಎತ್ತಿಹಿಡಿದ್ದಾರೆ.

ಇತಿಹಾಸದಲ್ಲೇ ನೊಬೆಲ್​ಗೆ ನನಗಿಂತ ಅರ್ಹರು ಯಾರೂ ಇಲ್ಲ: ನೊಬೆಲ್ ಶಾಂತಿ ಪುರಸ್ಕಾರ ನೀಡದಿದ್ದರೆ ಅದು ನೊಬೆಲ್ ಸಮಿತಿಗೇ ಅಪಖ್ಯಾತಿ ಎಂದ ಟ್ರಂಪ್
ಡೊನಾಲ್ಡ್​ ಟ್ರಂಪ್ Image Credit source: PTI
ನಯನಾ ರಾಜೀವ್
|

Updated on: Oct 08, 2026 | 7:25 AM

Share

ವಾಷಿಂಗ್ಟನ್, ಅಕ್ಟೋಬರ್ 08: ಜಾಗತಿಕವಾಗಿ ಎಂಟು ಪ್ರಮುಖ ಯುದ್ಧ ಹಾಗೂ ಸಂಘರ್ಷಗಳನ್ನು ತಾವೇ ಖುದ್ದು ಮಧ್ಯಸ್ಥಿಕೆ ವಹಿಸಿ ಇತ್ಯರ್ಥಪಡಿಸಿದ್ದೇನೆ ಎಂದು ಹೇಳಿಕೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ತಮಗೆ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕು ಎಂಬ ಬೇಡಿಕೆಯನ್ನು ಮತ್ತೆ ಮುನ್ನೆಲೆಗೆ ತಂದಿದ್ದಾರೆ. ಶ್ವೇತ ಭವನದ ಓವಲ್ ಕಚೇರಿಯಲ್ಲಿ

ಶ್ವೇತಭವನದ ಓವಲ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನೊಬೆಲ್ ಸಮಿತಿಯ ಅಂತಿಮ ತೀರ್ಮಾನ ಏನಾಗಲಿದೆ ಎಂಬುದು ನನಗೆ ತಿಳಿದಿಲ್ಲ. ಆದರೆ ನನ್ನಂತಹ ದಿಟ್ಟ ವ್ಯಕ್ತಿಗಳಿಗೆ ಪ್ರಶಸ್ತಿ ನೀಡದಿರುವ ಕೆಟ್ಟ ಖ್ಯಾತಿ ಆ ಸಮಿತಿಗಿದೆ. ನನಗಿದು ಸಿಗಲಿ ಅಥವಾ ಸಿಗದಿರಲಿ, ನಾನು ಶಾಂತಿಗಾಗಿ ಗಣನೀಯ ಸಾಧನೆ ಮಾಡಿದ್ದೇನೆ. ಒಂದು ವೇಳೆ ನನಗೆ ಪ್ರಶಸ್ತಿ ನೀಡದಿದ್ದರೆ ಅದು ಆ ಸಮಿತಿಗೇ ದೊಡ್ಡ ಅಪಖ್ಯಾತಿಯಾಗುತ್ತದೆ” ಎಂದು ನೇರವಾಗಿ ಹೇಳಿದ್ದಾರೆ.

ಟ್ರಂಪ್ ವಾದ ಮತ್ತು ಸಾಧನೆಯ ಹಕ್ಕೊತ್ತಾಯಗಳು

ಶ್ವೇತಭವನಕ್ಕೆ ಮರಳಿದ ಬಳಿಕ ಜಾಗತಿಕ ರಂಗದಲ್ಲಿ ಎಂಟು ಯುದ್ಧ ಪರಿಸ್ಥಿತಿಗಳನ್ನು ಶಮನಗೊಳಿಸಿದ್ದೇನೆ ಮತ್ತು ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದುವುದನ್ನು ಕಠಿಣ ನಿರ್ಧಾರಗಳ ಮೂಲಕ ತಡೆದಿದ್ದೇನೆ ಎಂದು ಟ್ರಂಪ್ ಪ್ರತಿಪಾದಿಸಿದರು. ವೆನೆಜುವೆಲಾದ ವಿರೋಧ ಪಕ್ಷದ ಪ್ರಮುಖ ನಾಯಕಿ ಮಾರಿಯಾ ಕೊರಿನಾ ಮಚಾದೊ ಅವರಿಗೆ ಶಾಂತಿ ಪ್ರಶಸ್ತಿ ಘೋಷಣೆಯಾದ ಸಂದರ್ಭವನ್ನು ಸ್ಮರಿಸಿದ ಟ್ರಂಪ್, “ಅವರು ಇತಿಹಾಸದಲ್ಲಿ ನನಗಿಂತ ಹೆಚ್ಚು ಅರ್ಹರು ಯಾರೂ ಇಲ್ಲ ಎಂದು ಹೇಳಿ ಗೌರವಿಸಿದ್ದರು” ಎಂದರು.

ಮತ್ತಷ್ಟು ಓದಿ: ಇರಾನ್‌ನ 7 ದಿನಗಳ ಕದನ ವಿರಾಮ ಆಫರ್ ತಿರಸ್ಕರಿಸಿದ ಡೊನಾಲ್ಡ್ ಟ್ರಂಪ್:ಸೋಲಿನ ಭೀತಿಯಿಂದ ಒಪ್ಪಂದಕ್ಕೆ ಬಂದಿದ್ದಾರೆ ಎಂದ ಅಮೆರಿಕ ಅಧ್ಯಕ್ಷ

ಬರಾಕ್ ಒಬಾಮಾ ವಿರುದ್ಧ ವ್ಯಂಗ್ಯ:

ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ 2009ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ನೀಡಿದ್ದನ್ನು ಟ್ರಂಪ್ ತೀವ್ರವಾಗಿ ಲೇವಡಿ ಮಾಡಿದರು. “ಒಬಾಮಾ ಅಧಿಕಾರ ವಹಿಸಿಕೊಂಡ ಆರಂಭದಲ್ಲೇ ಏನನ್ನೂ ಸಾಧಿಸದೆ ಪ್ರಶಸ್ತಿ ಪಡೆದರು. ಆ ಪ್ರಶಸ್ತಿ ಅವರಿಗೆ ಏಕೆ ಬಂತು ಎಂಬುದು ಇಂದಿಗೂ ಯಾರಿಗೂ ತಿಳಿದಿಲ್ಲ” ಎಂದು ಟೀಕಿಸಿದರು.

ಟ್ರಂಪ್ ಮತ್ತು ನೊಬೆಲ್ ಪ್ರಶಸ್ತಿ ವಿವಾದದ ಹಿನ್ನೆಲೆ

ತಮ್ಮ ಮೊದಲ ಅವಧಿಯಲ್ಲೂ (2017-2021) ಇಸ್ರೇಲ್ ಮತ್ತು ಯುಎಇ ನಡುವಿನ ಐತಿಹಾಸಿಕ ‘ಅಬ್ರಹಾಂ ಒಪ್ಪಂದ’ (Abraham Accords) ಹಾಗೂ ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಅವರೊಂದಿಗೆ ನಡೆಸಿದ ಸಂಧಾನ ಸಭೆಗಳ ಹಿನ್ನೆಲೆಯಲ್ಲಿ ಟ್ರಂಪ್ ಹೆಸರು ನೊಬೆಲ್ ಶಾಂತಿ ಪ್ರಶಸ್ತಿಗೆ ಹಲವು ಬಾರಿ ನಾಮನಿರ್ದೇಶನಗೊಂಡಿತ್ತು.

ನೊಬೆಲ್ ಸಮಿತಿಯ ಸಂಪ್ರದಾಯ:

ನಾರ್ವೇಜಿಯನ್ ನೊಬೆಲ್ ಸಮಿತಿಯು ಸಾಮಾನ್ಯವಾಗಿ ಸಂಘರ್ಷ ಶಮನ, ಅಹಿಂಸಾತ್ಮಕ ಹೋರಾಟ, ಹವಾಮಾನ ಬದಲಾವಣೆ ಅಥವಾ ಮಾನವ ಹಕ್ಕುಗಳ ರಕ್ಷಣೆಗೆ ಸುದೀರ್ಘ ಕೊಡುಗೆ ನೀಡಿದ ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಪರಿಗಣಿಸುತ್ತದೆ. ಆದರೆ, ಟ್ರಂಪ್ ಅವರ ಏಕಪಕ್ಷೀಯ ವಿದೇಶಾಂಗ ನೀತಿಗಳು ಮತ್ತು ವ್ಯಾಪಾರ ಯುದ್ಧಗಳ ನಿಲುವುಗಳಿಂದಾಗಿ ಸಮಿತಿಯು ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿಲ್ಲ ಎಂಬುದು ತಜ್ಞರ ಅಭಿಪ್ರಾಯವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ