AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕಕ್ಕೆ ರಷ್ಯಾದಿಂದ ರಾಸಾಯನಿಕ, ರಸಗೊಬ್ಬರಗಳ ರಹಸ್ಯ ಆಮದು, ನನಗೆ ಗೊತ್ತೇ ಇಲ್ಲ ಎಂದ ಟ್ರಂಪ್

ರಷ್ಯಾದಿಂದ ರಾಸಾಯನಿಕಗಳು, ರಸಗೊಬ್ಬರವನ್ನು ಅಮೆರಿಕ ಆಮದು ಮಾಡಿಕೊಳ್ಲುತ್ತಿರುವುದು ತಮಗೆ ತಿಳಿದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ. ರಷ್ಯಾದಿಂದ ಭಾರತವು ತೈಲವನ್ನು ಆಮದು ಮಾಡಿಕೊಳ್ಳುವ ವಿಚಾರವಾಗಿ ಭಾರತದ ವಿರುದ್ಧ ತಿರುಗಿ ಬಿದ್ದಿರುವ ಟ್ರಂಪ್ ನೀವು ಆಮದು ನಿಲ್ಲಿಸದಿದ್ದರೆ ಹೆಚ್ಚು ಸುಂಕ ವಿಧಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಆದರೆ ಬೆನ್ನ ಹಿಂದೆ ರಹಸ್ಯವಾಗಿ ಅದೇ ದೇಶದಿಂದ ರಾಸಾಯನಿಕಗಳು ಹಾಗೂ ರಸಗೊಬ್ಬರವನ್ನು ಅಮೆರಿಕ ಆಮದು ಮಾಡಿಕೊಳ್ಳುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ.

ಅಮೆರಿಕಕ್ಕೆ ರಷ್ಯಾದಿಂದ ರಾಸಾಯನಿಕ, ರಸಗೊಬ್ಬರಗಳ ರಹಸ್ಯ ಆಮದು, ನನಗೆ ಗೊತ್ತೇ ಇಲ್ಲ ಎಂದ ಟ್ರಂಪ್
ಡೊನಾಲ್ಡ್​ ಟ್ರಂಪ್ Image Credit source: Times Of India
ನಯನಾ ರಾಜೀವ್
|

Updated on: Aug 06, 2025 | 9:23 AM

Share

ವಾಷಿಂಗ್ಟನ್, ಆಗಸ್ಟ್​ 06: ತಾವು ಮಾಡುವುದು ಅನಾಚಾರ, ಬೇರೆಯವರಿಗೆ ಆಚಾರದ ಪಾಠ. ಭಾರತಕ್ಕೆ ರಷ್ಯಾ(Russia)ದಿಂದ ತೈಲ ಆಮದು ಮಾಡಿಕೊಳ್ಳಬೇಡಿ ಎಂದು ಎಚ್ಚರಿಕೆ ನೀಡುತ್ತಾ ಒಳಗಿಂದೊಳಗೆ ಅಲ್ಲಿಂದಲೇ ಅಮೆರಿಕವು ರಾಸಾಯನಿಕ ಹಾಗೂ ರಸಗೊಬ್ಬರಗಳನ್ನು ಆಮದು ಮಾಡಿಕೊಳ್ಳುತ್ತಿದೆ ಎನ್ನುವ ಸುದ್ದಿ ಕೇಳಿಬಂದಿದೆ. ಆದರೆ ಈ ಪ್ರಶ್ನೆಗೆ ಟ್ರಂಪ್ ಇದರ ಬಗ್ಗೆ ತಮಗೇನೂ ಗೊತ್ತೇ ಇಲ್ಲ, ವಿಚಾರಿಸಿ ಹೇಳುತ್ತೇನೆ ಎಂದು ಮುಗ್ದನಂತೆ ಉತ್ತರ ನೀಡಿದ್ದಾರೆ. ರಷ್ಯಾದಿಂದ ಭಾರತವು ತೈಲವನ್ನು ಆಮದು ಮಾಡಿಕೊಳ್ಳುವ ವಿಚಾರವಾಗಿ ಭಾರತದ ವಿರುದ್ಧ ತಿರುಗಿ ಬಿದ್ದಿರುವ ಟ್ರಂಪ್ ನೀವು ಆಮದು ನಿಲ್ಲಿಸದಿದ್ದರೆ ಹೆಚ್ಚು ಸುಂಕ ವಿಧಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಆದರೆ ಬೆನ್ನ ಹಿಂದೆ ರಹಸ್ಯವಾಗಿ ಅದೇ ದೇಶದಿಂದ ರಾಸಾಯನಿಕಗಳು ಹಾಗೂ ರಸಗೊಬ್ಬರವನ್ನು ಅಮೆರಿಕ ಆಮದು ಮಾಡಿಕೊಳ್ಳುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಆದರೆ ಇದರ ಬಗ್ಗೆ ತನಗೇನೂ ತಿಳಿದಿಲ್ಲ ಎಂದು ಟ್ರಂಪ್ ಉತ್ತರ ನೀಡಿದ್ದಾರೆ. ಆದರೆ ಒಂದು ರಾಷ್ಟ್ರದ ಅಧ್ಯಕ್ಷರಾಗಿ ಯಾವ ರಾಷ್ಟ್ರಗಳಿಂದ ಯಾವುದನ್ನು ಆಮದು ಮಾಡಿಕೊಳ್ಳುತ್ತೇವೆ ಯಾವುದು ರಫ್ತು ಮಾಡಿಕೊಳ್ಳುತ್ತಿದ್ದೇವೆ ಎನ್ನುವ ಅರಿವಿರುವುದಿಲ್ಲವೇ ಎಂದು ಹಲವರು ಪ್ರಶ್ನಿಸಿದ್ದಾರೆ.

ಭಾರತವು ಬೃಹತ್ ಪ್ರಮಾಣದಲ್ಲಿ ರಷ್ಯಾದ ತೈಲವನ್ನು ಖರೀದಿಸುವುದಲ್ಲದೆ, ಮುಕ್ತ ಮಾರುಕಟ್ಟೆಯಲ್ಲಿ ಖರೀದಿಸಿದ ತೈಲದ ಹೆಚ್ಚಿನ ಭಾಗವನ್ನು ಭಾರಿ ಲಾಭಕ್ಕೆ ಮಾರಾಟ ಮಾಡುತ್ತಿದೆ. ರಷ್ಯಾದ ಯುದ್ಧ ಯಂತ್ರದಿಂದ ಉಕ್ರೇನ್‌ನಲ್ಲಿ ಎಷ್ಟು ಜನರು ಕೊಲ್ಲಲ್ಪಡುತ್ತಿದ್ದಾರೆ ಎಂಬುದು ಅವರಿಗೆ ಲೆಕ್ಕವಿಲ್ಲ. ಅದಕ್ಕಾಗಿಯೇ ಭಾರತವು ಅಮೆರಿಕಕ್ಕೆ ಪಾವತಿಸುವ ಸುಂಕವನ್ನು ನಾನು ಗಣನೀಯವಾಗಿ ಹೆಚ್ಚಿಸುತ್ತೇನೆ ಎಂದು ಟ್ರಂಪ್ ಹೇಳಿದ್ದರು.

ಮತ್ತಷ್ಟು ಓದಿ: ಭಾರತದಂತಹ ಬಲಿಷ್ಠ ರಾಷ್ಟ್ರದೊಂದಿಗೆ ಸಂಬಂಧ ಹಾಳು ಮಾಡಿಕೊಳ್ಳಬೇಡಿ: ಟ್ರಂಪ್​ಗೆ ನಿಕ್ಕಿ ಹ್ಯಾಲಿ ಸಲಹೆ

ಅಮೆರಿಕ ಅಧ್ಯಕ್ಷರ ಹೇಳಿಕೆಯನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತವನ್ನು ಗುರಿಯಾಗಿಸಿಕೊಂಡಿರುವುದು ಅನ್ಯಾಯ ಮತ್ತು ಅಜಾಗರೂಕ ಕ್ರಮ ಎಂದು ವಿದೇಶಾಂಗ ಸಚಿವಾಲಯ ಬಣ್ಣಿಸಿದೆ. ರಷ್ಯಾದಿಂದ ಆಮದು ಮಾಡಿಕೊಳ್ಳುವ ಆಮದುಗಳು ಮಾರುಕಟ್ಟೆ ಅಗತ್ಯತೆಗಳು ಮತ್ತು ಇಂಧನ ಭದ್ರತೆಯನ್ನು ಆಧರಿಸಿವೆ ಎಂದು ಭಾರತ ಹೇಳಿದೆ.

ಭಾರತದ ಆಮದುಗಳ ಉದ್ದೇಶ ಭಾರತೀಯ ಗ್ರಾಹಕರಿಗೆ ಊಹಿಸಬಹುದಾದ ಮತ್ತು ಕೈಗೆಟುಕುವ ಇಂಧನ ವೆಚ್ಚಗಳನ್ನು ಖಚಿತಪಡಿಸಿಕೊಳ್ಳುವುದು. ಜಾಗತಿಕ ಮಾರುಕಟ್ಟೆ ಪರಿಸ್ಥಿತಿಯಿಂದಾಗಿ ಇದು ಅತ್ಯಗತ್ಯ ಅವಶ್ಯಕತೆಯಾಗಿದೆ. ಆದಾಗ್ಯೂ, ಭಾರತವನ್ನು ಟೀಕಿಸುವ ದೇಶಗಳು ಸ್ವತಃ ರಷ್ಯಾದೊಂದಿಗೆ ವ್ಯಾಪಾರ ಮಾಡುತ್ತಿವೆ ಎಂದು ತಿಳಿದುಬಂದಿದೆ ಎಂದು ಭಾರತ ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು