AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶ ವಿಚಾರವನ್ನು ಮೋದಿಗೆ ಬಿಟ್ಟಿದ್ದೀವಿ, ಅವರೇ ನೋಡಿಕೊಳ್ತಾರೆ ಎಂದ ಟ್ರಂಪ್

ಶೇಖ್ ಹಸೀನಾ ಸರ್ಕಾರದ ಪತನದ ನಂತರ ಬಾಂಗ್ಲಾದೇಶದಲ್ಲಿ ಅವ್ಯವಸ್ಥೆ ಮುಂದುವರೆದಿದೆ. ಈ ಇಸ್ಲಾಮಿಕ್ ದೇಶಗಳಲ್ಲಿ ಜಿಹಾದಿ ಶಕ್ತಿಗಳು ತಲೆ ಎತ್ತಲು ಪ್ರಾರಂಭಿಸಿವೆ, ಇದರಿಂದಾಗಿ ಅಂತಾರಾಷ್ಟ್ರೀಯ ಬೆದರಿಕೆ ಎದುರಾಗಿದೆ. ಹಿಂದಿನ ಬೈಡನ್ ಆಡಳಿತವು ಈ ನಿಲುವನ್ನು ಬೆಂಬಲಿಸಿದ್ದರಿಂದ ಇದು ಡೊನಾಲ್ಡ್ ಟ್ರಂಪ್ ಅವರ ವಿದೇಶಾಂಗ ನೀತಿಗೆ ಸವಾಲಾಗಿ ಪರಿಣಮಿಸಿದೆ. ವಾಷಿಂಗ್ಟನ್‌ನಲ್ಲಿ ವ್ಯಾಪಾರ ಮತ್ತು ಭಾರತ-ಯುಎಸ್ ಸಂಬಂಧಗಳ ಬಗ್ಗೆ ಚರ್ಚಿಸಿದ ನಂತರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಟ್ರಂಪ್ ಹೇಳಿದರು.

ಬಾಂಗ್ಲಾದೇಶ ವಿಚಾರವನ್ನು ಮೋದಿಗೆ ಬಿಟ್ಟಿದ್ದೀವಿ, ಅವರೇ ನೋಡಿಕೊಳ್ತಾರೆ ಎಂದ ಟ್ರಂಪ್
ಡೊನಾಲ್ಡ್​ ಟ್ರಂಪ್-ಮೋದಿ Image Credit source: Aljazeera
ನಯನಾ ರಾಜೀವ್
|

Updated on: Feb 14, 2025 | 10:10 AM

Share

ಬಾಂಗ್ಲಾದೇಶ ಬಿಕ್ಕಟ್ಟಿನಲ್ಲಿ ಅಮೆರಿಕದ ಯಾವುದೇ ಪಾತ್ರವಿಲ್ಲ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಬಾಂಗ್ಲಾದೇಶದ ಬಗ್ಗೆ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು. ಇದಕ್ಕೂ ಮುನ್ನ ಪ್ರಧಾನಿ ಮೋದಿ ಟ್ರಂಪ್ ಮುಂದೆ ಬಾಂಗ್ಲಾದೇಶದ ವಿಷಯವನ್ನು ಪ್ರಸ್ತಾಪಿಸಿದ್ದರು.

ಶೇಖ್ ಹಸೀನಾ ಸರ್ಕಾರದ ಪತನದ ನಂತರ ಬಾಂಗ್ಲಾದೇಶದಲ್ಲಿ ಅವ್ಯವಸ್ಥೆ ಮುಂದುವರೆದಿದೆ. ಈ ಇಸ್ಲಾಮಿಕ್ ದೇಶಗಳಲ್ಲಿ ಜಿಹಾದಿ ಶಕ್ತಿಗಳು ತಲೆ ಎತ್ತಲು ಪ್ರಾರಂಭಿಸಿವೆ, ಇದರಿಂದಾಗಿ ಅಂತಾರಾಷ್ಟ್ರೀಯ ಬೆದರಿಕೆ ಎದುರಾಗಿದೆ. ಹಿಂದಿನ ಬೈಡನ್ ಆಡಳಿತವು ಈ ನಿಲುವನ್ನು ಬೆಂಬಲಿಸಿದ್ದರಿಂದ ಇದು ಡೊನಾಲ್ಡ್ ಟ್ರಂಪ್ ಅವರ ವಿದೇಶಾಂಗ ನೀತಿಗೆ ಸವಾಲಾಗಿ ಪರಿಣಮಿಸಿದೆ. ವಾಷಿಂಗ್ಟನ್‌ನಲ್ಲಿ ವ್ಯಾಪಾರ ಮತ್ತು ಭಾರತ-ಯುಎಸ್ ಸಂಬಂಧಗಳ ಬಗ್ಗೆ ಚರ್ಚಿಸಿದ ನಂತರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಟ್ರಂಪ್ ಹೇಳಿದರು.

ಬಾಂಗ್ಲಾದೇಶದ ಬಿಕ್ಕಟ್ಟಿನಲ್ಲಿ ಅಮೆರಿಕದ ಪಾತ್ರ ಏನೂ ಇಲ್ಲ, ಈ ವಿಷಯವನ್ನು ಪ್ರಧಾನಿ ಮೋದಿ ನಿರ್ವಹಿಸುತ್ತಾರೆ, ನಾನು ಬಾಂಗ್ಲಾದೇಶವನ್ನು ಮೋದಿಗೆ ಬಿಡುತ್ತೇನೆ ಎಂದರು. ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶ ಸರ್ಕಾರಕ್ಕೆ ಟ್ರಂಪ್ ಆಡಳಿತವು ಎಲ್ಲಾ ಸಹಾಯವನ್ನು ಸ್ಥಗಿತಗೊಳಿಸಿತ್ತು.

ಅಧ್ಯಕ್ಷ ಟ್ರಂಪ್ ಭಾರತದೊಂದಿಗೆ ಹೊಸ ವ್ಯಾಪಾರ ಒಪ್ಪಂದವನ್ನು ಘೋಷಿಸಿದರು, ಅದರ ಅಡಿಯಲ್ಲಿ ನವದೆಹಲಿಯು ವಾಷಿಂಗ್ಟನ್‌ನೊಂದಿಗಿನ ವ್ಯಾಪಾರ ಕೊರತೆಯನ್ನು ಕಡಿಮೆ ಮಾಡಲು ಅಮೆರಿಕದಿಂದ ಹೆಚ್ಚಿನ ತೈಲ ಮತ್ತು ಅನಿಲವನ್ನು ಆಮದು ಮಾಡಿಕೊಳ್ಳುತ್ತದೆ.

ಮತ್ತಷ್ಟು ಓದಿ: ಭಾರತ – ಅಮೆರಿಕ ವ್ಯಾಪಾರ 5 ವರ್ಷಗಳಲ್ಲಿ ದ್ವಿಗುಣ: ಟ್ರಂಪ್, ಮೋದಿ ಸಭೆಯ ಬಳಿಕ ಘೋಷಣೆ

ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವಲ್ಲಿ ಭಾರತ ಪಾತ್ರ ವಹಿಸಬಹುದೇ? ಈ ಪ್ರಶ್ನೆಗೆ ಪ್ರಧಾನಿ ನರೇಂದ್ರ ಮೋದಿ, ರಷ್ಯಾ-ಉಕ್ರೇನ್ ವಿವಾದಕ್ಕೆ ಸಂಬಂಧಿಸಿದಂತೆ, ಅಧ್ಯಕ್ಷ ಟ್ರಂಪ್ ಶಾಂತಿ ಪುನಃಸ್ಥಾಪಿಸಲು ಕ್ರಮ ತೆಗೆದುಕೊಂಡಿದ್ದಾರೆ ಎಂದು ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದರು.

ಅಧ್ಯಕ್ಷ ಪುಟಿನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಜಗತ್ತು ಭಾರತ ತಟಸ್ಥ ದೇಶ ಎಂದು ಭಾವಿಸುತ್ತಿದೆ, ಆದರೆ ಭಾರತ ತಟಸ್ಥವಾಗಿಲ್ಲ. ಭಾರತಕ್ಕೆ ತನ್ನದೇ ಆದ ಪಕ್ಷವಿದೆ ಮತ್ತು ಭಾರತದ ಪಕ್ಷ ಶಾಂತಿ. ನಾನು ಅಧ್ಯಕ್ಷ ಪುಟಿನ್ ಅವರ ಸಮ್ಮುಖದಲ್ಲಿ ಮತ್ತು ಮಾಧ್ಯಮಗಳ ಮುಂದೆ ಹೇಳಿದ್ದೆ, ಇದು ಯುದ್ಧದ ಸಮಯವಲ್ಲ ಸಮಸ್ಯೆಗಳಿಗೆ ಪರಿಹಾರಗಳು ಯುದ್ಧಭೂಮಿಯಲ್ಲಿ ಸಿಗುವುದಿಲ್ಲ, ಅವುಗಳ ಕುರಿತು ಚರ್ಚಿಸುವಾಗ ಸಿಗುತ್ತದೆ ಎಂದು ಹೇಳಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ