‘ಅಮೆರಿಕದಲ್ಲಿ ಕೊರೊನಾ ಬಿಕ್ಕಟ್ಟು ನಿಯಂತ್ರಿಸುವಲ್ಲಿ ಟ್ರಂಪ್ ವಿಫಲ’

ವಾಷಿಂಗ್ಟನ್: ಮಹಾಮಾರಿ ಕೊರೊನಾ ಬಿಕ್ಕಟ್ಟು ನಿಯಂತ್ರಿಸುವಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಸಂಪೂರ್ಣವಾಗಿ ವಿಫಲರಾಗಿದ್ದಾರೆಂದು ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡನ್ ಆರೋಪಿಸಿದ್ದಾರೆ. ಕೊರೊನಾ ಎದುರಿಸಲು ಯಾವುದೇ ತಯಾರಿ ಮಾಡಲಿಲ್ಲ. ಟ್ರಂಪ್ ನಿರ್ಧಾರಗಳು ಶ್ರೀಮಂತ ಕಂಪನಿಗಳ ಪರವಾಗಿವೆ ಎಂದು ಡೊನಾಲ್ಡ್ ಟ್ರಂಪ್ ವಿರುದ್ಧ ಜೋ ಬಿಡನ್ ವಾಗ್ದಾಳಿ ನಡೆಸಿದ್ದಾರೆ. ಕೊರೊನಾದಿಂದ ಏಪ್ರಿಲ್‌ನಲ್ಲಿ 2.05 ಕೋಟಿ ಜನರಿಗೆ ಉದ್ಯೋಗ ನಷ್ಟವಾಗಿದೆ. ಅಮೆರಿಕದಲ್ಲಿ ನಿರುದ್ಯೋಗ ದರ ಈಗ ಶೇ. 14.7ರಷ್ಟಿದೆ. ಮಹಾ ಆರ್ಥಿಕ ಕುಸಿತದ ನಂತರದ ಗರಿಷ್ಟ ಸಂಖ್ಯೆಯಾಗಿದೆ. ಟ್ರಂಪ್ ಆಡಳಿತದಲ್ಲಿ […]

‘ಅಮೆರಿಕದಲ್ಲಿ ಕೊರೊನಾ ಬಿಕ್ಕಟ್ಟು ನಿಯಂತ್ರಿಸುವಲ್ಲಿ ಟ್ರಂಪ್ ವಿಫಲ’
ಸಾಧು ಶ್ರೀನಾಥ್​

Updated on: May 09, 2020 | 9:38 AM

ವಾಷಿಂಗ್ಟನ್: ಮಹಾಮಾರಿ ಕೊರೊನಾ ಬಿಕ್ಕಟ್ಟು ನಿಯಂತ್ರಿಸುವಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಸಂಪೂರ್ಣವಾಗಿ ವಿಫಲರಾಗಿದ್ದಾರೆಂದು ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡನ್ ಆರೋಪಿಸಿದ್ದಾರೆ. ಕೊರೊನಾ ಎದುರಿಸಲು ಯಾವುದೇ ತಯಾರಿ ಮಾಡಲಿಲ್ಲ. ಟ್ರಂಪ್ ನಿರ್ಧಾರಗಳು ಶ್ರೀಮಂತ ಕಂಪನಿಗಳ ಪರವಾಗಿವೆ ಎಂದು ಡೊನಾಲ್ಡ್ ಟ್ರಂಪ್ ವಿರುದ್ಧ ಜೋ ಬಿಡನ್ ವಾಗ್ದಾಳಿ ನಡೆಸಿದ್ದಾರೆ.

ಕೊರೊನಾದಿಂದ ಏಪ್ರಿಲ್‌ನಲ್ಲಿ 2.05 ಕೋಟಿ ಜನರಿಗೆ ಉದ್ಯೋಗ ನಷ್ಟವಾಗಿದೆ. ಅಮೆರಿಕದಲ್ಲಿ ನಿರುದ್ಯೋಗ ದರ ಈಗ ಶೇ. 14.7ರಷ್ಟಿದೆ. ಮಹಾ ಆರ್ಥಿಕ ಕುಸಿತದ ನಂತರದ ಗರಿಷ್ಟ ಸಂಖ್ಯೆಯಾಗಿದೆ. ಟ್ರಂಪ್ ಆಡಳಿತದಲ್ಲಿ ಅಮೆರಿಕದಲ್ಲಿ ಕೆಟ್ಟ ಪರಿಸ್ಥಿತಿ ನಿರ್ಮಾಣವಾಗಿದೆ. ಡೊನಾಲ್ಡ್ ಟ್ರಂಪ್ ಅವರದ್ದು ವಿನಾಶಕಾರಿ ಆರ್ಥಿಕತೆ ಎಂದು ಜೋ ಬಿಡನ್ ಕಿಡಿಕಾರಿದ್ದಾರೆ.

ಅಂದಹಾಗೆ ನವೆಂಬರ್ ತಿಂಗಳಿನಲ್ಲಿ ಅಮೆರಿಕದಲ್ಲಿ ಚುನಾವಣೆ ನಡೆಯಲಿದೆ. ಮುಂಬರುವ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಜೋ ಬಿಡನ್ ಸ್ಪರ್ಧಿಸಲಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us