AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐ ಲವ್ ಇಂಡಿಯಾ, ನಾನು ಪಿಎಂ ಮೋದಿಯ ದೊಡ್ಡ ಅಭಿಮಾನಿ ಎಂದ ಡೊನಾಲ್ಡ್​ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಧಾನಿ ಮೋದಿಯನ್ನು ತಮ್ಮ "ಆಪ್ತ ಸ್ನೇಹಿತ" ಎಂದು ಕರೆದು, "ನಾನು ಭಾರತವನ್ನು ಪ್ರೀತಿಸುತ್ತೇನೆ ಮತ್ತು ಮೋದಿಯ ದೊಡ್ಡ ಅಭಿಮಾನಿ" ಎಂದಿದ್ದಾರೆ. ಅಮೆರಿಕ-ಭಾರತ ಸಂಬಂಧವು ಅತ್ಯಂತ ಬಲವಾಗಿದೆ, ಆರ್ಥಿಕತೆ ಉತ್ತಮವಾಗಿದೆ, ಹಾಗೂ ಭಾರತವು ಅಮೆರಿಕದ ಮೇಲೆ ಸಂಪೂರ್ಣ ವಿಶ್ವಾಸವಿಡಬಹುದು ಎಂದು ತಿಳಿಸಿದ್ದಾರೆ. ವ್ಯಾಪಾರ ಒಪ್ಪಂದಗಳ ಕುರಿತೂ ಚರ್ಚಿಸಲಾಯಿತು.

ಐ ಲವ್ ಇಂಡಿಯಾ, ನಾನು ಪಿಎಂ ಮೋದಿಯ ದೊಡ್ಡ ಅಭಿಮಾನಿ ಎಂದ ಡೊನಾಲ್ಡ್​ ಟ್ರಂಪ್
ಡೊನಾಲ್ಡ್​ ಟ್ರಂಪ್-ಮೋದಿImage Credit source: Sputnik India
ನಯನಾ ರಾಜೀವ್
|

Updated on:May 25, 2026 | 7:49 AM

Share

ವಾಷಿಂಗ್ಟನ್, ಮೇ 25: ಪ್ರಧಾನಿ ಮೋದಿಯನ್ನು ತಮ್ಮ ಆಪ್ತ ಸ್ನೇಹಿತ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಕರೆದಿದ್ದಾರೆ. ಅಮೆರಿಕದ 250ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿದ ಅವರು ತಾನು ಭಾರತವನ್ನು ಪ್ರೀತಿಸುವುದಾಗಿ ಹೇಳಿದ್ದಷ್ಟೇ ಅಲ್ಲದೆ ಪ್ರಧಾನಿ ಮೋದಿಯ ದೊಡ್ಡ ಅಭಿಮಾನಿ ಎಂದು ಕರೆದುಕೊಂಡಿದ್ದಾರೆ. ಭಾರತವು ಅಮೆರಿಕದ ಮೇಲೆ ಶೇಕಡಾ 100 ರಷ್ಟು ಭರವಸೆ ಇಡಬಹುದು ಎಂದು ದ್ವಿಪಕ್ಷೀಯ ಬಾಂಧವ್ಯವನ್ನು ಪುನರುಚ್ಚರಿಸಿದ್ದಾರೆ.

ಸಂವಾದದಲ್ಲಿ ಮಾತನಾಡಿದ ಟ್ರಂಪ್, “ನಾನು ಭಾರತವನ್ನು ಪ್ರೀತಿಸುತ್ತೇನೆ. ಪ್ರಧಾನಿ ಮೋದಿ ಶ್ರೇಷ್ಠರು, ಅವರು ನನ್ನ ಅತ್ಯಂತ ಆಪ್ತ ಸ್ನೇಹಿತ. ನಾನು ಪ್ರಧಾನಿ ಮೋದಿಯವರ ದೊಡ್ಡ ಅಭಿಮಾನಿ” ಎಂದು ಹೆಮ್ಮೆಯಿಂದ ಹೇಳಿದರು. ನಮ್ಮ ನಡುವೆ ಅದ್ಭುತ ಆರ್ಥಿಕತೆ, ದಾಖಲೆಯ ಷೇರು ಮಾರುಕಟ್ಟೆ ಹಾಗೂ ಭಾರತಕ್ಕೆ ಬೇಕಾದ ಎಲ್ಲವೂ ಇದೆ. ಭಾರತ ಏನನ್ನಾದರೂ ಪಡೆಯಲು ಬಯಸಿದರೆ ನೇರವಾಗಿ ಇಲ್ಲಿಗೇ ಕರೆ ಮಾಡಬಹುದು ಎಂದು ಭಾರತದ ಮೇಲಿನ ತಮ್ಮ ನಂಬಿಕೆಯನ್ನು ವ್ಯಕ್ತಪಡಿಸಿದರು. ಇದೇ ವೇಳೆ ಅವರು ಭಾರತ ಪ್ರವಾಸದಲ್ಲಿರುವ ತಮ್ಮ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರನ್ನು ಅಮೆರಿಕದ ಇತಿಹಾಸದಲ್ಲೇ ಅತ್ಯಂತ ಶ್ರೇಷ್ಠ ವಿದೇಶಾಂಗ ಕಾರ್ಯದರ್ಶಿ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಭಾರತಕ್ಕೆ ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್ ಅವರು, ಭಾರತ-ಯುಎಸ್ ಬಾಂಧವ್ಯವು ಹೊಸ ಯುಗದ ಅಡಿಪಾಯವಾಗಿದೆ ಎಂದರು.ಅಮೆರಿಕ ಮೊದಲು ಎಂದರೆ ಅಮೆರಿಕ ಮಾತ್ರ ಎಂದಲ್ಲ ಎಂದು ಸ್ಪಷ್ಟಪಡಿಸಿದ ಅವರು, ಟ್ರಂಪ್ ತಮ್ಮೊಂದಿಗೆ ಮಾತನಾಡುವ ಪ್ರತಿ ಬಾರಿಯೂ ಮೊದಲು ‘ನನ್ನ ಸ್ನೇಹಿತ ಪ್ರಧಾನಿ ಮೋದಿ ಹೇಗಿದ್ದಾರೆ? ಎಂದು ಕೇಳುತ್ತಾರೆ ಎಂದು ನೆನಪಿಸಿಕೊಂಡರು. ಐದು ತಿಂಗಳ ಹಿಂದಷ್ಟೇ ತಾವು ಭಾರತಕ್ಕೆ ಬಂದ ನಂತರ ಪ್ರಮುಖ ‘ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು ಸಿದ್ಧಪಡಿಸಲಾಗಿದ್ದು, ಮುಂದಿನ ಕೆಲವು ವಾರಗಳಲ್ಲಿ ಅದಕ್ಕೆ ಸಹಿ ಬೀಳಲಿದೆ ಎಂದು ಅವರು ಆಶಾವಾದ ವ್ಯಕ್ತಪಡಿಸಿದರು.

ಮತ್ತಷ್ಟು ಓದಿ: ಅಮೆರಿಕ ನಂಬಿಕೆಗೆ ಯೋಗ್ಯವಲ್ಲ, ಮತ್ತೆ ಯುದ್ಧ ಆರಂಭವಾಗಬಹುದು; ಇರಾನ್ ಸ್ಫೋಟಕ ಹೇಳಿಕೆ

ಜಾಗತಿಕವಾಗಿ ಅಮೆರಿಕಕ್ಕೆ ಹೂಡಿಕೆ ತರುವಲ್ಲಿ ಭಾರತದಲ್ಲಿನ ಅಮೆರಿಕ ರಾಯಭಾರ ಕಚೇರಿಯು ಭಾರಿ ಸಾಧನೆ ಮಾಡಿದೆ. ಭಾರತದಿಂದ ಅಮೆರಿಕಕ್ಕೆ ಬರೋಬ್ಬರಿ 20.5 ಶತಕೋಟಿ (ಬಿಲಿಯನ್) ಡಾಲರ್ ಹೊಸ ಹೂಡಿಕೆಗಳನ್ನು ತರುವ ಮೂಲಕ ಜಾಗತಿಕ ಮಟ್ಟದಲ್ಲೇ ಭಾರತದ ರಾಯಭಾರ ಕಚೇರಿ ಮೊದಲ ಸ್ಥಾನದಲ್ಲಿದೆ ಎಂದು ಗೋರ್ ಹೆಮ್ಮೆಯಿಂದ ಪ್ರಕಟಿಸಿದರು.

ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿರುವ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರು ಮೇ 26 ರಂದು ನವದೆಹಲಿಯಲ್ಲಿ ನಡೆಯಲಿರುವ ಉನ್ನತ ಮಟ್ಟದ ‘ಕ್ವಾಡ್ (QUAD) ವಿದೇಶಾಂಗ ಸಚಿವರ ಸಭೆ’ಯಲ್ಲಿ ಭಾಗವಹಿಸಲಿದ್ದಾರೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಭಾರತ, ಅಮೆರಿಕ, ಆಸ್ಟ್ರೇಲಿಯಾ ಮತ್ತು ಜಪಾನ್ ದೇಶಗಳು ಇಂಡೋ-ಪೆಸಿಫಿಕ್ ಭದ್ರತೆ ಮತ್ತು ಪಶ್ಚಿಮ ಏಷ್ಯಾದ ಪ್ರಸಕ್ತ ಬೆಳವಣಿಗೆಗಳ ಕುರಿತು ಪ್ರಮುಖ ಚರ್ಚೆ ನಡೆಸಲಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:49 am, Mon, 25 May 26

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More