AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲೋರಿಡಾದಲ್ಲಿರುವ ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಬಂಗಲೆಯ ಮೇಲೆ ಎಫ್​​ಬಿಐ ದಾಳಿ

ದಾಳಿಯ ಸಮಯದಲ್ಲಿ ಡೊನಾಲ್ಡ್​ ಟ್ರಂಪ್ ಎಸ್ಟೇಟ್‌ನಲ್ಲಿ ಇರಲಿಲ್ಲ. ಟ್ರಂಪ್ ನಿವಾಸದ ಹೊರಗಿನ ವೈಮಾನಿಕ ದೃಶ್ಯಾವಳಿಗಳು ವೈರಲ್ ಆಗಿದ್ದು, ಇದರಲ್ಲಿ ಅವರ ಮನೆಯ ಹೊರಗೆ ಪೊಲೀಸ್ ಕಾರುಗಳು ನಿಂತಿರುವುದನ್ನು ನೋಡಬಹುದು.

ಫ್ಲೋರಿಡಾದಲ್ಲಿರುವ ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಬಂಗಲೆಯ ಮೇಲೆ ಎಫ್​​ಬಿಐ ದಾಳಿ
ಡೊನಾಲ್ಡ್ ಟ್ರಂಪ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 09, 2022 | 12:22 PM

ವಾಷಿಂಗ್ಟನ್: ತನ್ನ ಮಾರ್-ಎ-ಲಾಗೊ ಎಸ್ಟೇಟ್‌ ಮೇಲೆ ದಾಳಿ ನಡೆಸಿರುವ ಎಫ್‌ಬಿಐ ಹುಡುಕಾಟ ನಡೆಸುತ್ತಿದೆ ಎಂದು ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donal Trump) ಹೇಳಿದ್ದಾರೆ. ಈ ಬಗ್ಗೆ ಫೆಡರಲ್ ಕಾನೂನು ಜಾರಿ ಸಂಸ್ಥೆಯಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲವಾದರೂ ಅಸೋಸಿಯೇಟೆಡ್ ಪ್ರೆಸ್ ಪ್ರಕಾರ, ಡೊನಾಲ್ಡ್​ ಟ್ರಂಪ್ ಅಧ್ಯಕ್ಷರಾಗಿದ್ದಾಗ ತಮ್ಮ ಶ್ವೇತಭವನದಿಂದ ಫ್ಲೋರಿಡಾದಲ್ಲಿರುವ ನಿವಾಸಕ್ಕೆ ವರ್ಗೀಕೃತ ಅಧ್ಯಕ್ಷೀಯ ದಾಖಲೆಗಳನ್ನು ತೆಗೆದುಕೊಂಡಿದ್ದಾರೆಯೇ ಎಂಬ ತನಿಖೆಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.

“ಇದು ನಮ್ಮ ರಾಷ್ಟ್ರಕ್ಕೆ ಕರಾಳ ಸಮಯವಾಗಿದೆ. ಏಕೆಂದರೆ ಫ್ಲೋರಿಡಾದ ಪಾಮ್ ಬೀಚ್‌ನಲ್ಲಿರುವ ನನ್ನ ಸುಂದರವಾದ ಮನೆ ಮಾರ್-ಎ-ಲಾಗೊ ಮೇಲೆ ದಾಳಿ ನಡೆಸಲಾಗಿದೆ. ನನ್ನ ಮನೆಯನ್ನು ಎಫ್‌ಬಿಐ ಏಜೆಂಟ್‌ಗಳ ದೊಡ್ಡ ಗುಂಪು ಆಕ್ರಮಿಸಿಕೊಂಡಿದೆ” ಎಂದು ಡೊನಾಲ್ಡ್​ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ನ್ಯಾನ್ಸಿ ಪೆಲೋಸಿ ಭೇಟಿಯ ನಂತರ ಚೀನಾ ತೈವಾನ್ ನಡುಗಡ್ಡೆಯ ಸುತ್ತಮುತ್ತ ಮಿಲಿಟರಿ ಕವಾಯತುಗಳನ್ನು ಹೆಚ್ಚಿಸಿದೆ: ತೈವಾನ್ ಸರ್ಕಾರ

donald trumpಅವರ ಮನೆಯ ಆವರಣವನ್ನು ಪ್ರವೇಶಿಸಲು ಎಫ್‌ಬಿಐ ಸರ್ಚ್ ವಾರಂಟ್ ಅನ್ನು ಕಾರ್ಯಗತಗೊಳಿಸಿದೆ ಎಂದು ಸಿಎನ್‌ಎನ್ ವರದಿ ಮಾಡಿದೆ. ಈಗಾಗಲೇ ಟ್ರಂಪ್ ಹಲವಾರು ಕಾನೂನು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅವುಗಳಲ್ಲಿ ಹೆಚ್ಚಿನವು ಅವರ ವೈಟ್ ಹೌಸ್​ನಲ್ಲಿ ಅವರ ಅಧಿಕಾರಾವಧಿಯಲ್ಲಿ ಕಾಣೆಯಾದ ರಾಷ್ಟ್ರೀಯ ದಾಖಲೆಗಳು, ಯುಎಸ್ ಕ್ಯಾಪಿಟಲ್ ಮೇಲಿನ ದಾಳಿ, ವೈರ್ ವಂಚನೆ, ಜಾರ್ಜಿಯಾ ಚುನಾವಣಾ ಟ್ಯಾಂಪರಿಂಗ್ ಸೇರಿದಂತೆ ಹಲವು ವಿಚಾರಗಳಲ್ಲಿ ಕಾನೂನು ಸಮಸ್ಯೆಯನ್ನು ಅವರು ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಗಂಡನಿಂದ ಕಿರುಕುಳಕ್ಕೊಳಗಾಗಿ, ಆತ್ಮಹತ್ಯೆ ಮೂಲಕ ಸಾವನ್ನಪ್ಪಿರುವ ಅಮೆರಿಕಾದಲ್ಲಿದ್ದ ಭಾರತೀಯ ಮಹಿಳೆಯ ವಿಡಿಯೋ ಕೋಲಾಹಲವನ್ನೆಬ್ಬಿಸಿದೆ!

ಟ್ರಂಪ್ ನಿವಾಸ ಮಾರ್-ಎ-ಲಾಗೊದ ಹೊರಗಿನ ವೈಮಾನಿಕ ದೃಶ್ಯಾವಳಿಗಳು ವೈರಲ್ ಆಗಿದ್ದು, ಇದರಲ್ಲಿ ಅವರ ಮನೆಯ ಹೊರಗೆ ಪೊಲೀಸ್ ಕಾರುಗಳು ನಿಂತಿರುವುದನ್ನು ನೋಡಬಹುದು. ಅಮೆರಿಕಾದ ಮಾಜಿ ಅಧ್ಯಕ್ಷ ಟ್ರಂಪ್​ನ ಬೆಂಬಲಿಗರು ಅವರ ಮನೆಯ ಹೊರಗೆ ಜಮಾಯಿಸಿದ್ದಾರೆ. ಟ್ರಂಪ್ ಹೆಸರಿನ ಬ್ಯಾನರ್ ಅಥವಾ ಅವರ ಫೋಟೋಗಳನ್ನು ಹಿಡಿದುಕೊಂಡು, ಅಮೆರಿಕನ್ ಧ್ವಜಗಳನ್ನು ಬೀಸುತ್ತಿರುವ ದೃಶ್ಯ ಕಂಡುಬಂದಿತು.

ನ್ಯಾಷನಲ್ ಆರ್ಕೈವ್ಸ್ ಫೆಬ್ರವರಿಯಲ್ಲಿ ಟ್ರಂಪ್ ಅವರ ಫ್ಲೋರಿಡಾ ಎಸ್ಟೇಟ್‌ನಿಂದ 15 ಬಾಕ್ಸ್‌ಗಳಷ್ಟು ದಾಖಲೆಗಳನ್ನು ವಶಪಡಿಸಿಕೊಂಡಿದೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿತ್ತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್