ಡೊನಾಲ್ಡ್ ಟ್ರಂಪ್ ಮಗನ X ಖಾತೆ ಹ್ಯಾಕ್, ತಂದೆ ಸತ್ತಿಲ್ಲ ಎಂದು ಸ್ಪಷ್ಟನೆ ನೀಡಿದ ಡೊನಾಲ್ಡ್ ಟ್ರಂಪ್ ಜೂನಿಯರ್
Donald Trump: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಗ ಡೊನಾಲ್ಡ್ ಟ್ರಂಪ್ ಜೂನಿಯರ್ ಅವರ X ಖಾತೆಯನ್ನು (ಈ ಹಿಂದಿನ ಟ್ವಿಟರ್) ಹ್ಯಾಕ್ ಮಾಡಲಾಗಿದೆ. ಡೊನಾಲ್ಡ್ ಟ್ರಂಪ್ ಜೂನಿಯರ್ ಅವರ ಖಾತೆಯಿಂದ ತಮ್ಮ ತಂದೆ ಅಂದರೆ ಡೊನಾಲ್ಡ್ ಟ್ರಂಪ್ ನಿಧನರಾಗಿದ್ದಾರೆ ಎಂಬ ಆಕ್ಷೇಪಾರ್ಹ ಟ್ವೀಟ್ ಮಾಡಲಾಗಿದೆ.
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಗ ಡೊನಾಲ್ಡ್ ಟ್ರಂಪ್ ಜೂನಿಯರ್ ಅವರ X ಖಾತೆಯನ್ನು (ಈ ಹಿಂದಿನ ಟ್ವಿಟರ್) ಹ್ಯಾಕ್ ಮಾಡಲಾಗಿದೆ. ಡೊನಾಲ್ಡ್ ಟ್ರಂಪ್ ಜೂನಿಯರ್ ಅವರ ಖಾತೆಯಿಂದ ತಮ್ಮ ತಂದೆ ಅಂದರೆ ಡೊನಾಲ್ಡ್ ಟ್ರಂಪ್ ನಿಧನರಾಗಿದ್ದಾರೆ ಎಂಬ ಆಕ್ಷೇಪಾರ್ಹ ಟ್ವೀಟ್ ಮಾಡಲಾಗಿದೆ. ಬುಧವಾರ ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಡೊನಾಲ್ಡ್ ಟ್ರಂಪ್ ಜೂನಿಯರ್ ಅವರ X ಖಾತೆಯನ್ನು ಹ್ಯಾಕ್ ಮಾಡಿ ತನ್ನ ತಂದೆ ಸಾವಿನ್ನಪ್ಪಿದ್ದಾರೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸಲಾಗಿದೆ. ಇದರಿಂದ Xನಲ್ಲಿ ಭಾರೀ ಚರ್ಚೆಗಳು ನಡೆದಿತ್ತು.
ಈ ಟ್ವೀಟ್ನಲ್ಲಿ ನನ್ನ ತಂದೆ ಡೊನಾಲ್ಡ್ ಟ್ರಂಪ್ ನಿಧನರಾಗಿದ್ದಾರೆ. ನಾನು 2024ರ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದೇನೆ ಎಂದು ಘೋಷಿಸಲು ನನಗೆ ದುಃಖವಾಗಿದೆ ಎಂದು ಹೇಳಿದ್ದಾರೆ. ಇನ್ನು ಈ ಸಂದೇಶಕ್ಕೆ X ಬಳಕೆದಾರರೂ ಹಿಗ್ಗಮುಗ್ಗ ಕಮೆಂಟ್ ಮಾಡಿದ್ದಾರೆ.
X ಬಳಕೆದಾರರೂ ಇದು ಸುಳ್ಳು ಸುದ್ದಿ, ಈ ಹಿಂದೆ ಇಂತಹದೇ ಸುಳ್ಳು ಸುದ್ದಿ ಉತ್ತರ ಕೊರಿಯಾ ಸರ್ವಾಧಿಕಾರಿ ಸಾವನ್ನಪ್ಪಿದ್ದರು ಎಂದು ಹೇಳಲಾಗಿತ್ತು. ಇದನ್ನು ಯಾರಿಗೂ ನಂಬಲು ಸಾಧ್ಯವಿಲ್ಲ ಎಂದು ಹೇಳಲಾಗಿತ್ತು. ಜತೆಗೆ ಇದು ಅನೇಕರಲ್ಲಿ ಗೊಂದಲವನ್ನು ಸೃಷ್ಟಿಸಿತ್ತು.
ಇದನ್ನೂ ಓದಿ: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ
ಈ ನಕಲಿ ಸುದ್ದಿಯ ಬಗ್ಗೆ ತಿಳಿದು ಡೊನಾಲ್ಡ್ ಟ್ರಂಪ್ ಅವರು ತನ್ನ ಅಧಿಕೃತ ಮಾಧ್ಯಮದಲ್ಲಿ, ನಾನು ಜೀವಂತವಾಗಿದ್ದೇನೆ ಮತ್ತು ಆರೋಗ್ಯವಾಗಿದ್ದು ಎಂದು ಹೇಳಿದ್ದಾರೆ. ಇನ್ನು ಈ ಹ್ಯಾಕ್ ಬಗ್ಗೆ ಮೊದಲು ನ್ಯಾಷನಲ್ ಪಲ್ಸ್‌ನ ರಹೀಂ ಕಸಮ್ ಅವರು ಟ್ರಂಪ್ ಅವರ ಸಾಮಾಜಿಕ ಜಾಲತಾಣ ತಂಡಕ್ಕೆ ತಿಳಿಸಿದರು. ನಂತರ ಆ ತಂಡ ಈ ಬಗ್ಗೆ ಸ್ಪಷ್ಟನೆಯನ್ನು ಪಡೆದುಕೊಂಡಿದ್ದು, ಇದು ಸುಳ್ಳು ಸುದ್ದಿ ಎಂದು ಹೇಳಿದೆ. ಈ ಹ್ಯಾಕ್ ಆಗಿರುವ X ಖಾತೆಯಲ್ಲಿ ಎಲೋನ್ ಮಸ್ಕ್ ಮತ್ತು ಅಮೆರಿಕದ ಅಧ್ಯಕ್ಷ ಜೋ ಬಿಡನ್ ಬಗ್ಗೆ ಅವಹೇಳನಕಾರಿ ಕಾಮೆಂಟ್‌ಗಳು ಬಂದಿದೆ. ಇನ್ನು ಹ್ಯಾಕ್ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಾಗುವುದು ಎಂದು ಅಮೆರಿಕದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ