AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದ ಟ್ರಂಪ್; ಅಮೆರಿಕದ ಸುಂಕ ಮತ್ತೆ ಶೇ. 15ಕ್ಕೆ ಹೆಚ್ಚಳ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕ್ಯಾಬಿನೆಟ್ ಒಪ್ಪಿಗೆಯಿಲ್ಲದೆ ಏಕಪಕ್ಷೀಯವಾಗಿ ಸುಂಕವನ್ನು ವಿಧಿಸುವಂತಿಲ್ಲ ಎಂದು ಅಮೆರಿಕದ ಸುಪ್ರೀಂ ಕೋರ್ಟ್‌ ಆದೇಶ ನೀಡಿತ್ತು. ಈ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಸೆಡ್ಡು ಹೊಡೆದಿದ್ದಾರೆ. ನಿನ್ನೆ ಜಾಗತಿಕ ವ್ಯಾಪಾರ ಸುಂಕವನ್ನು ಶೇ. 10ಕ್ಕೆ ಇಳಿಸಿದ್ದ ಟ್ರಂಪ್ ಇಂದು ಮತ್ತೆ ಸುಂಕವನ್ನು ಶೇ. 15ಕ್ಕೆ ಹೆಚ್ಚಿಸಿದ್ದಾರೆ. ಎಲ್ಲಾ ದೇಶಗಳಿಗೆ ಅನ್ವಯವಾಗುವಂತೆ ಸುಂಕ ಹೆಚ್ಚಿಸಿರುವ ಟ್ರಂಪ್‌ ಈ ನೂತನ ಸುಂಕ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಘೋಷಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದ ಟ್ರಂಪ್; ಅಮೆರಿಕದ ಸುಂಕ ಮತ್ತೆ ಶೇ. 15ಕ್ಕೆ ಹೆಚ್ಚಳ
Donald Trump
ಸುಷ್ಮಾ ಚಕ್ರೆ
|

Updated on:Feb 21, 2026 | 10:50 PM

Share

ವಾಷಿಂಗ್ಟನ್, ಫೆಬ್ರವರಿ 21: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ತಕ್ಷಣವೇ ಜಾರಿಗೆ ಬರುವಂತೆ ಜಾಗತಿಕ ಸುಂಕವನ್ನು ಶೇ. 10ರಿಂದ ಶೇ. 15ಕ್ಕೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಡೊನಾಲ್ಡ್ ಟ್ರಂಪ್ ವಿಧಿಸಿದ್ದ ಸುಂಕವನ್ನು ಅಮೆರಿಕದ ಸುಪ್ರೀಂ ಕೋರ್ಟ್​ ರದ್ದುಗೊಳಿಸಿದ ಬೆನ್ನಲ್ಲೇ ಇಂದು ಮತ್ತೆ ಟ್ರಂಪ್ ಹೊಸ ಸುಂಕ ಘೋಷಣೆ ಮಾಡಿದ್ದಾರೆ. “ನಾನು, ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕದ ಅಧ್ಯಕ್ಷನಾಗಿ, ತಕ್ಷಣವೇ ಜಾರಿಗೆ ಬರುವಂತೆ ಜಗತ್ತಿನ ಎಲ್ಲ ದೇಶಗಳ ಮೇಲಿನ ಶೇ. 10ರಷ್ಟು ಸುಂಕವನ್ನು ಕಾನೂನುಬದ್ಧವಾಗಿಯೇ ಶೇ. 15ಕ್ಕೆ ಹೆಚ್ಚಿಸಿದ್ದೇನೆ” ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಟ್ರಂಪ್ ಘೋಷಣೆ ಮಾಡಿದ್ದಾರೆ.

“ಅಮೆರಿಕವನ್ನು ಮತ್ತೊಮ್ಮೆ ಹಿಂದೆಂದಿಗಿಂತಲೂ ಶ್ರೇಷ್ಠವಾಗಿಸುವುದು ಈ ನೂತನ ಸುಂಕದ ಗುರಿ” ಎಂದು ಟ್ರಂಪ್ ಘೋಷಿಸಿದ್ದಾರೆ. ಈ ನೂತನ ಸುಂಕ ತಕ್ಷಣದಿಂದಲೇ ಜಾರಿಗೆ ಬರಲಿದೆ. ಈ ಸುಂಕ ಎಲ್ಲ ದೇಶಗಳಿಗೂ ಅನ್ವಯವಾಗಲಿದೆ. ಈ ಸುಂಕ ಅಮೆರಿಕದಲ್ಲಿ ಬೃಹತ್ ಆದಾಯ ಮತ್ತು ಕೈಗಾರಿಕಾ ಪುನರುಜ್ಜೀವನವನ್ನು ಬಿಂಬಿಸುತ್ತದೆ. ಮಿತ್ರರಾಷ್ಟ್ರಗಳಿಂದ ವಿರೋಧಿಗಳವರೆಗೆ ರಾಷ್ಟ್ರಗಳು ಎಲ್ಲ ದೇಶಗಳೂ ಇಂದಿನಿಂದಲೇ ಈ ಹೊಸ ಸುಂಕವನ್ನು ಎದುರಿಸಲಿವೆ.

ಇದನ್ನೂ ಓದಿ: ಟ್ರಂಪ್ ಸೊಕ್ಕು ಮುರಿದ ಅಮೆರಿಕ ಸುಪ್ರೀಂ ಕೋರ್ಟ್: ಭಾರತದ ಉತ್ಪನ್ನಗಳ ಮೇಲಿನ ತೆರಿಗೆಯೂ ಶೇ 10ಕ್ಕೆ ಇಳಿಕೆ!

ಈ ನಡುವೆ, ನಿನ್ನೆ ಅಮೆರಿಕದ ಸುಪ್ರೀಂ ಕೋರ್ಟ್​ ಟ್ರಂಪ್​ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು. ಕ್ಯಾಬಿನೆಟ್ ಗಮನಕ್ಕೆ ತಾರದೆ ಟ್ರಂಪ್ ಏಕಪಕ್ಷೀಯವಾಗಿ ಸುಂಕವನ್ನು ವಿಧಿಸಲು ಸಾಧ್ಯವಿಲ್ಲ, ಇದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಟ್ರಂಪ್ ಈಗಾಗಲೇ ವಿಧಿಸಿದ ಸುಂಕ ನೀತಿಯನ್ನು ಕೋರ್ಟ್ ರದ್ದುಗೊಳಿಸಿತ್ತು. ಇದಾದ ಬಳಿಕ ಟ್ರಂಪ್ ಜಾಗತಿಕ ಸುಂಕವನ್ನು ಶೇ. 10ಕ್ಕೆ ಇಳಿಕೆ ಮಾಡಿ ಹೊಸ ಆದೇಶ ಹೊರಡಿಸಿದ್ದರು. ಇದರಿಂದ ಭಾರತ ಸೇರಿದಂತೆ ಬೇರೆ ದೇಶಗಳ ಸರ್ಕಾರಗಳಿಗೆ ಗೊಂದಲ ಉಂಟಾಗಿತ್ತು. ಇದೀಗ ಮತ್ತೆ ಸುಂಕವನ್ನು ಟ್ರಂಪ್ ಶೇ. 15ಕ್ಕೆ ಹೆಚ್ಚಿಸಿದ್ದಾರೆ. ಹಾಗೇ, ಯುಎಸ್ ಸುಪ್ರೀಂ ಕೋರ್ಟ್ ತೀರ್ಪನ್ನು ತೀವ್ರವಾಗಿ ಟೀಕಿಸಿರುವ ಟ್ರಂಪ್ ಅದನ್ನು “ಅಮೆರಿಕನ್ ವಿರೋಧಿ” ಎಂದು ಕರೆದಿದ್ದಾರೆ.

Hbsoo4ibkaadsp3

trump post

ಇಂದು ಸಾಮಾಜಿಕ ಮಾಧ್ಯಮ ವೇದಿಕೆ ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್‌ನಲ್ಲಿ, ಟ್ರಂಪ್ ಹೆಚ್ಚಿನ ಸುಂಕವು ತಕ್ಷಣವೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಹಲವಾರು ದೇಶಗಳು ದಶಕಗಳಿಂದ ಅಮೆರಿಕವನ್ನು ಶೋಷಿಸುತ್ತಿವೆ ಎಂದು ಅವರು ಆರೋಪಿಸಿದ್ದು, ಪರಿಷ್ಕೃತ ದರವು ಕಾನೂನುಬದ್ಧವಾಗಿ ಸರಿಯಾಗಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 10:28 pm, Sat, 21 February 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ