AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srinivas Mukkamala: ಅಮೆರಿಕನ್ ಮೆಡಿಕಲ್ ಅಸೋಸಿಯೇಷನ್ ಅಧ್ಯಕ್ಷರಾಗಿ ಭಾರತ ಮೂಲದ ಶ್ರೀನಿವಾಸ್ ಮುಕ್ಕಾಮಲ ನೇಮಕ

ಅಮೆರಿಕನ್ ಮೆಡಿಕಲ್ ಅಸೋಸಿಯೇಷನ್(AMA)ಯ 179 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತ ಮೂಲದ ವ್ಯಕ್ತಿಯೊಬ್ಬರು ಸಂಸ್ಥೆಯ ಆಡಳಿತವನ್ನು ವಹಿಸಿಕೊಂಡಿದ್ದಾರೆ. ಡಾ. ಶ್ರೀನಿವಾಸ್ ಮುಕ್ಕಾಮಲ ಅಮೆರಿಕನ್ ಮೆಡಿಕಲ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜನರು ಅವರನ್ನು ಪ್ರೀತಿಯಿಂದ ಬಾಬಿ ಮುಕ್ಕಮಲ ಎಂದು ಕರೆಯುತ್ತಾರೆ. MD ಆಗುವುದರ ಜೊತೆಗೆ, ಅವರು ಕಿವಿ ಗಂಟಲು ತಜ್ಞ.

Srinivas Mukkamala: ಅಮೆರಿಕನ್ ಮೆಡಿಕಲ್ ಅಸೋಸಿಯೇಷನ್ ಅಧ್ಯಕ್ಷರಾಗಿ ಭಾರತ ಮೂಲದ ಶ್ರೀನಿವಾಸ್ ಮುಕ್ಕಾಮಲ ನೇಮಕ
ಶ್ರೀನಿವಾಸ್
ನಯನಾ ರಾಜೀವ್
| Edited By: |

Updated on:Jul 03, 2026 | 12:59 PM

Share

ವಾಷಿಂಗ್ಟನ್, ಜೂನ್ 12: ಅಮೆರಿಕನ್ ಮೆಡಿಕಲ್ ಅಸೋಸಿಯೇಷನ್(AMA)ನ 179 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತ ಮೂಲದ ವ್ಯಕ್ತಿಯೊಬ್ಬರು ಸಂಸ್ಥೆಯ ಆಡಳಿತವನ್ನು ವಹಿಸಿಕೊಂಡಿದ್ದಾರೆ. ಡಾ. ಶ್ರೀನಿವಾಸ್ ಮುಕ್ಕಾಮಲ ಅಮೆರಿಕನ್ ಮೆಡಿಕಲ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜನರು ಅವರನ್ನು ಪ್ರೀತಿಯಿಂದ ಬಾಬಿ ಮುಕ್ಕಾಮಲ ಎಂದು ಕರೆಯುತ್ತಾರೆ. MD ಆಗುವುದರ ಜೊತೆಗೆ, ಅವರು ಕಿವಿ ಗಂಟಲು ತಜ್ಞ.

ಅಮೆರಿಕನ್ ಮೆಡಿಕಲ್ ಅಸೋಸಿಯೇಷನ್ ​​ವೆಬ್‌ಸೈಟ್ ಪ್ರಕಾರ, ಜೂನ್ 10 ರಂದು ರಾತ್ರಿ ಹಯಾತ್ ರೀಜೆನ್ಸಿ ಚಿಕಾಗೋದಲ್ಲಿ ನಡೆದ  ಸಮಾರಂಭದಲ್ಲಿ ಶ್ರೀನಿವಾಸ್ ಮುಕ್ಕಾಮಲ ಅವರು 180 ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಇದು ತಮಗೆ ಭಾವನಾತ್ಮಕ ಕ್ಷಣ ಅದನ್ನು ವ್ಯಕ್ತಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.ಕಳೆದ ವರ್ಷ ನವೆಂಬರ್‌ನಲ್ಲಿ, 53 ವರ್ಷದ ಡಾ. ಬಾಬಿ ಮುಕ್ಕಾಮಲ ಅವರ ಮೆದುಳಿನ ಎಡಭಾಗದಲ್ಲಿ 8 ಸೆಂ.ಮೀ. ಉದ್ದದ ಟೆಂಪೊರಲ್ ಲೋಬ್ ಗೆಡ್ಡೆ ಇರುವುದು ಪತ್ತೆಯಾಗಿತ್ತು.

ಮೂರು ವಾರಗಳ ನಂತರ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಯಿತು. ಶೇಕಡ 90 ರಷ್ಟು ಗೆಡ್ಡೆಯನ್ನು ತೆಗೆದುಹಾಕಲಾಯಿತು. ಇದು ಅವರಿಗೆ ವಿಕಿರಣ ಮತ್ತು ಕೀಮೋಥೆರಪಿಯನ್ನು ತಪ್ಪಿಸಲು ಸಹಾಯ ಮಾಡಿತು. ಅವರು 20 ವರ್ಷಗಳ ಕಾಲ ಬದುಕಬಹುದೆಂದು ಅವರ ವೈದ್ಯರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಶಸ್ತ್ರಚಿಕಿತ್ಸೆಯ ಕ್ಷಣಗಳನ್ನು ನೆನಪಿಸಿಕೊಂಡರು.

ಮತ್ತಷ್ಟು ಓದಿ: Indians in US: ಅಮೆರಿಕದಲ್ಲಿ ಭಾರತೀಯರು ಕೆಲಸ ಮಾಡ್ತಾರೆ, ದೊಂಬಿ ಮಾಡಲ್ಲ: ವೈರಲ್ ಆದ ಎಕ್ಸ್ ಪೋಸ್ಟ್

ಡಾ.ಮುಕ್ಕಾಮಲ ತಮ್ಮ ಕುಟುಂಬದೊಂದಿಗೆ ಮಿಚಿಗನ್‌ನ ಫ್ಲಿಂಟ್‌ನಲ್ಲಿ ವಾಸಿಸುತ್ತಿದ್ದಾರೆ. ಅವರು ದಶಕಗಳ ಕಾಲ ಬಡವರಿಗೆ ಉಚಿತವಾಗಿ ಚಿಕಿತ್ಸೆ ನೀಡಿದ್ದಾರೆ.ಅವರ ಪತ್ನಿ ನೀತಾ ಕುಲಕರ್ಣಿ ಒಬ್ಬ ಪ್ರಸೂತಿ-ಸ್ತ್ರೀರೋಗತಜ್ಞೆ. AMA ಹೌಸ್ ಆಫ್ ಡೆಲಿಗೇಟ್ಸ್ ಸಭೆ ಜೂನ್ 6 ರಿಂದ ಜೂನ್ 11 ರವರೆಗೆ ನಡೆಯಿತು.

ಅಮೆರಿಕನ್ ಮೆಡಿಕಲ್ ಅಸೋಸಿಯೇಷನ್ ​​ಅಮೆರಿಕದ ಅತಿದೊಡ್ಡ ಮತ್ತು ಅತ್ಯಂತ ಪ್ರಭಾವಶಾಲಿ ವೈದ್ಯಕೀಯ ಸಂಸ್ಥೆಯಾಗಿದೆ.ಶ್ರೀನಿವಾಸ್ ಮುಕ್ಕಾಮಲ ಅವರು ಇಎನ್‌ಟಿ ತಜ್ಞರಾಗಿದ್ದಾರೆ. ಕೆಲವು ತಿಂಗಳ ಹಿಂದೆ ನಾನು ಇಂದು ಇಲ್ಲಿ ಇರುತ್ತೇನೆಯೇ ಅಥವಾ ಇಲ್ಲವೇ ಎಂದು ನನಗೆ ತಿಳಿದಿರಲಿಲ್ಲ ಆದರೆ ಇಂದು ಇಲ್ಲಿ ನಿಂತಿದ್ದೀನಿ, ಇದು ಕನಸಂತೆ ಅನಿಸುತ್ತಿದೆ ಎಂದರು.

ಡಾ. ಮುಕ್ಕಾಮಲ ಮಿಚಿಗನ್ ವಿಶ್ವವಿದ್ಯಾಲಯದ ಮಿಚಿಗನ್ ವೈದ್ಯಕೀಯ ಶಾಲೆಯಲ್ಲಿ ವೈದ್ಯಕೀಯ ಪದವಿ ಪಡೆದರು, ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದು, ಅವರಲ್ಲಿ ನಿಖಿಲ್ ಬಯೋಮೆಡಿಕಲ್ ಎಂಜಿನಿಯರ್ ಆಗಿದ್ದರೆ, ಮತ್ತೊಬ್ಬ ಮಗ ದೇವನ್ ರಾಜ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪದವಿ ಪಡೆಯುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:19 am, Thu, 12 June 25

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ