AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Syria Drone Attack:ಸಿರಿಯಾದಲ್ಲಿ ಅಮೆರಿಕ ಸೇನೆ ಮೇಲೆ ಡ್ರೋನ್ ದಾಳಿ, ಮೂವರು ಸಾವು

ಸಿರಿಯಾ-ಜೋರ್ಡಾನ್ ಗಡಿಯಲ್ಲಿ ಅಮೆರಿಕ ಸೇನೆ ಮೇಲೆ ಡ್ರೋನ್ ದಾಳಿ ನಡೆದಿದೆ. ಇದು ಇರಾನ್ ಬೆಂಬಲಿತ ಉಗ್ರಗಾಮಿಗಳದ್ದೇ ಕೈವಾಡ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್(Joe Biden) ಆರೋಪಿಸಿದ್ದಾರೆ. ಈ ದಾಳಿಯಲ್ಲಿ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ. ಕಳೆದ ರಾತ್ರಿ ಸಿರಿಯಾ ಗಡಿ ಸಮೀಪವಿರುವ ಈಶಾನ್ಯ ಜೋರ್ಡಾನ್​ನಲ್ಲಿ ನಮ್ಮ ಪಡೆಗಳ ಮೇಲೆ ದಾಳಿ ನಡೆದಿದೆ, ಮೂವರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಬೈಡನ್ ಹೇಳಿಕೊಂಡಿದ್ದಾರೆ. ಹಾಗೆಯೇ ಇದಕ್ಕೆ ತಕ್ಕ ಉತ್ತರವನ್ನು ಅಮೆರಿಕ ನೀಡಲಿದೆ ಎಂದೂ ಹೇಳಿದ್ದಾರೆ.

ಡ್ರೋನ್ ದಾಳಿImage Credit source: India TV
ನಯನಾ ರಾಜೀವ್
|

Updated on:Jan 29, 2024 | 10:30 AM

Share

ಸಿರಿಯಾ-ಜೋರ್ಡಾನ್ ಗಡಿಯಲ್ಲಿ ಅಮೆರಿಕ ಸೇನೆ ಮೇಲೆ ಡ್ರೋನ್ ದಾಳಿ ನಡೆದಿದೆ. ಇದು ಇರಾನ್ ಬೆಂಬಲಿತ ಉಗ್ರಗಾಮಿಗಳದ್ದೇ ಕೈವಾಡ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್(Joe Biden) ಆರೋಪಿಸಿದ್ದಾರೆ. ಈ ದಾಳಿಯಲ್ಲಿ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ. ಕಳೆದ ರಾತ್ರಿ ಸಿರಿಯಾ ಗಡಿ ಸಮೀಪವಿರುವ ಈಶಾನ್ಯ ಜೋರ್ಡಾನ್​ನಲ್ಲಿ ನಮ್ಮ ಪಡೆಗಳ ಮೇಲೆ ದಾಳಿ ನಡೆದಿದೆ, ಮೂವರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಬೈಡನ್ ಹೇಳಿಕೊಂಡಿದ್ದಾರೆ. ಹಾಗೆಯೇ ಇದಕ್ಕೆ ತಕ್ಕ ಉತ್ತರವನ್ನು ಅಮೆರಿಕ ನೀಡಲಿದೆ ಎಂದೂ ಹೇಳಿದ್ದಾರೆ.

ಹಮಾಸ್​ನೊಂದಿಗೆ ಇಸ್ರೇಲ್​ನಲ್ಲಿ ಯುದ್ಧ ಪ್ರಾರಂಭವಾದ ಬಳಿಕ ಇದೇ ಮೊದಲ ಬಾರಿಗೆ ಮಧ್ಯಪ್ರಾಚ್ಯದಲ್ಲಿ ಯುಎಸ್​ ಮಿಲಿಟರಿ ಸಿಬ್ಬಂದಿಯನ್ನು ನೇರವಾಗಿ ಗುರಿಯಾಗಿಸಲಾಗಿದೆ. ಹಮಾಸ್ ವಕ್ತಾರ ಸಮಿ ಅಬು ಝಹ್ರಿ ಮಾತನಾಡಿ, ಈ ದಾಳಿಯು ಅಮೆರಿಕದ ಆಡಳಿತಕ್ಕೆ ಸಂದೇಶ ಎಂದಿದ್ದಾರೆ.

ಈ ತಿಂಗಳ ಆರಂಭದಲ್ಲಿ ಯುಎಸ್ ಮತ್ತು ಯುಕೆ ಯೆಮೆನ್‌ನಲ್ಲಿ ಇರಾನ್ ಬೆಂಬಲಿತ ಹೌತಿಗಳ ಮೇಲೆ ಹಲವಾರು ದಾಳಿಗಳನ್ನು ನಡೆಸಿದ್ದರಿಂದ ಇದು ಸಂಭವಿಸುತ್ತದೆ. ಅಕ್ಟೋಬರ್ 17 ರಿಂದ ಇರಾಕ್ ಮತ್ತು ಸಿರಿಯಾದಲ್ಲಿ ಯುಎಸ್ ಶಿಬಿರಗಳ ಮೇಲೆ 150 ಕ್ಕೂ ಹೆಚ್ಚು ಬಾರಿ ದಾಳಿ ಮಾಡಲಾಗಿದೆ.

ಮತ್ತಷ್ಟು ಓದಿ: ಇಸ್ರೇಲ್​ನಿಂದ ವೈಮಾನಿಕ ದಾಳಿ, 8 ಸಿರಿಯಾ ಸೈನಿಕರು ಸಾವು

ಇರಾಕ್ ಮತ್ತು ಸಿರಿಯಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಇರಾನಿನ ಬೆಂಬಲಿತ ಸೇನಾಪಡೆಗಳ ಒಕ್ಕೂಟವಾದ ಇಸ್ಲಾಮಿಕ್ ರೆಸಿಸ್ಟೆನ್ಸ್ ಇನ್ ಇರಾಕ್, ಇತ್ತೀಚಿನ ಏಕಮುಖ ಆತ್ಮಹತ್ಯಾ ಡ್ರೋನ್ ದಾಳಿಯ ಜವಾಬ್ದಾರಿಯನ್ನು ಅಧಿಕೃತವಾಗಿ ವಹಿಸಿಕೊಂಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:04 am, Mon, 29 January 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ