ಸಿರಿಯಾ-ಜೋರ್ಡಾನ್ ಗಡಿಯಲ್ಲಿ ಅಮೆರಿಕ ಸೇನೆ ಮೇಲೆ ಡ್ರೋನ್ ದಾಳಿ ನಡೆದಿದೆ. ಇದು ಇರಾನ್ ಬೆಂಬಲಿತ ಉಗ್ರಗಾಮಿಗಳದ್ದೇ ಕೈವಾಡ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್(Joe Biden) ಆರೋಪಿಸಿದ್ದಾರೆ. ಈ ದಾಳಿಯಲ್ಲಿ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ. ಕಳೆದ ರಾತ್ರಿ ಸಿರಿಯಾ ಗಡಿ ಸಮೀಪವಿರುವ ಈಶಾನ್ಯ ಜೋರ್ಡಾನ್ನಲ್ಲಿ ನಮ್ಮ ಪಡೆಗಳ ಮೇಲೆ ದಾಳಿ ನಡೆದಿದೆ, ಮೂವರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಬೈಡನ್ ಹೇಳಿಕೊಂಡಿದ್ದಾರೆ. ಹಾಗೆಯೇ ಇದಕ್ಕೆ ತಕ್ಕ ಉತ್ತರವನ್ನು ಅಮೆರಿಕ ನೀಡಲಿದೆ ಎಂದೂ ಹೇಳಿದ್ದಾರೆ.
ಹಮಾಸ್ನೊಂದಿಗೆ ಇಸ್ರೇಲ್ನಲ್ಲಿ ಯುದ್ಧ ಪ್ರಾರಂಭವಾದ ಬಳಿಕ ಇದೇ ಮೊದಲ ಬಾರಿಗೆ ಮಧ್ಯಪ್ರಾಚ್ಯದಲ್ಲಿ ಯುಎಸ್ ಮಿಲಿಟರಿ ಸಿಬ್ಬಂದಿಯನ್ನು ನೇರವಾಗಿ ಗುರಿಯಾಗಿಸಲಾಗಿದೆ. ಹಮಾಸ್ ವಕ್ತಾರ ಸಮಿ ಅಬು ಝಹ್ರಿ ಮಾತನಾಡಿ, ಈ ದಾಳಿಯು ಅಮೆರಿಕದ ಆಡಳಿತಕ್ಕೆ ಸಂದೇಶ ಎಂದಿದ್ದಾರೆ.
ಈ ತಿಂಗಳ ಆರಂಭದಲ್ಲಿ ಯುಎಸ್ ಮತ್ತು ಯುಕೆ ಯೆಮೆನ್‌ನಲ್ಲಿ ಇರಾನ್ ಬೆಂಬಲಿತ ಹೌತಿಗಳ ಮೇಲೆ ಹಲವಾರು ದಾಳಿಗಳನ್ನು ನಡೆಸಿದ್ದರಿಂದ ಇದು ಸಂಭವಿಸುತ್ತದೆ. ಅಕ್ಟೋಬರ್ 17 ರಿಂದ ಇರಾಕ್ ಮತ್ತು ಸಿರಿಯಾದಲ್ಲಿ ಯುಎಸ್ ಶಿಬಿರಗಳ ಮೇಲೆ 150 ಕ್ಕೂ ಹೆಚ್ಚು ಬಾರಿ ದಾಳಿ ಮಾಡಲಾಗಿದೆ.
ಮತ್ತಷ್ಟು ಓದಿ: ಇಸ್ರೇಲ್ನಿಂದ ವೈಮಾನಿಕ ದಾಳಿ, 8 ಸಿರಿಯಾ ಸೈನಿಕರು ಸಾವು
ಇರಾಕ್ ಮತ್ತು ಸಿರಿಯಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಇರಾನಿನ ಬೆಂಬಲಿತ ಸೇನಾಪಡೆಗಳ ಒಕ್ಕೂಟವಾದ ಇಸ್ಲಾಮಿಕ್ ರೆಸಿಸ್ಟೆನ್ಸ್ ಇನ್ ಇರಾಕ್, ಇತ್ತೀಚಿನ ಏಕಮುಖ ಆತ್ಮಹತ್ಯಾ ಡ್ರೋನ್ ದಾಳಿಯ ಜವಾಬ್ದಾರಿಯನ್ನು ಅಧಿಕೃತವಾಗಿ ವಹಿಸಿಕೊಂಡಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:04 am, Mon, 29 January 24