ಸಿರಿಯಾದ ಮಿಲಿಟರಿ ಅಕಾಡೆಮಿ ಮೇಲೆ ಡ್ರೋನ್ ದಾಳಿ, ಉಗ್ರರ ಅಟ್ಟಹಾಸಕ್ಕೆ 100ಕ್ಕೂ ಅಧಿಕ ಮಂದಿ ಬಲಿ

ಸಿರಿಯಾದಲ್ಲಿ ಉಗ್ರರ ಅಟ್ಟಹಾಸಕ್ಕೆ 100ಕ್ಕೂ ಅಧಿಕ ಮಂದಿ ಬಲಿಯಾಗಿದ್ದು, 125 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿರಿಯಾದ ಮಿಲಿಟರಿ ಅಕಾಡೆಮಿ ಮೇಲೆ ಸ್ಫೋಟಕಗಳನ್ನು ಹೊತ್ತಿದ್ದ ಡ್ರೋನ್ ದಾಳಿಯಲ್ಲಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಪದವೀಧರ ವಿದ್ಯಾರ್ಥಿಗಳ ಘಟಿಕೋತ್ಸವ ಸಮಾರಂಭದ ವೇಳೆ ಈ ದಾಳಿ ನಡೆದಿದೆ. ಘಟನೆಯಲ್ಲಿ ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಹಲವು ಮಂದಿ ಸಾವನ್ನಪ್ಪಿದ್ದಾರೆ.

ಸಿರಿಯಾದ ಮಿಲಿಟರಿ ಅಕಾಡೆಮಿ ಮೇಲೆ ಡ್ರೋನ್ ದಾಳಿ, ಉಗ್ರರ ಅಟ್ಟಹಾಸಕ್ಕೆ 100ಕ್ಕೂ ಅಧಿಕ ಮಂದಿ ಬಲಿ
ಸಿರಿಯಾ
Follow us
ನಯನಾ ರಾಜೀವ್
|

Updated on: Oct 06, 2023 | 7:40 AM

ಸಿರಿಯಾ(Syria)ದಲ್ಲಿ ಉಗ್ರರ ಅಟ್ಟಹಾಸಕ್ಕೆ 100ಕ್ಕೂ ಅಧಿಕ ಮಂದಿ ಬಲಿಯಾಗಿದ್ದು, 125 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿರಿಯಾದ ಮಿಲಿಟರಿ ಅಕಾಡೆಮಿ ಮೇಲೆ ಸ್ಫೋಟಕಗಳನ್ನು ಹೊತ್ತಿದ್ದ ಡ್ರೋನ್ ದಾಳಿ(Drone Attack)ಯಲ್ಲಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಪದವೀಧರ ವಿದ್ಯಾರ್ಥಿಗಳ ಘಟಿಕೋತ್ಸವ ಸಮಾರಂಭದ ವೇಳೆ ಈ ದಾಳಿ ನಡೆದಿದೆ. ಘಟನೆಯಲ್ಲಿ ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಹಲವು ಮಂದಿ ಸಾವನ್ನಪ್ಪಿದ್ದಾರೆ.

ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಯುದ್ಧದ ಕರಿನೆರಳನ್ನು ಎದುರಿಸುತ್ತಿರುವ ಸಿರಿಯಾದಲ್ಲಿ ಗುರುವಾರ ಮತ್ತೊಮ್ಮೆ ಭಾರೀ ದಾಳಿ ನಡೆದಿದ್ದು, 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಡಜನ್‌ಗಟ್ಟಲೆ ಮಂದಿ ಗಾಯಗೊಂಡಿದ್ದಾರೆ.

ಮಿಲಿಟರಿ ಸಮಾರಂಭದಿಂದ ಸಿರಿಯಾದ ರಕ್ಷಣಾ ಸಚಿವರು ನಿರ್ಗಮಿಸಿದ ಸ್ವಲ್ಪ ಸಮಯದ ನಂತರ, ಡ್ರೋನ್‌ಗಳಿಂದ ಬಾಂಬ್‌ಗಳ ಮಳೆ ಸುರಿಯಲಾರಂಭಿಸಿತು ಎಂದು ಹೇಳಲಾಗುತ್ತಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಸಿರಿಯನ್ ಸೇನೆಯ ಮೇಲೆ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಒಂದಾಗಿದೆ. ಕಳೆದ ಹದಿಮೂರು ವರ್ಷಗಳಿಂದ ಸಿರಿಯಾದಲ್ಲಿ ಸಂಘರ್ಷ ನಡೆಯುತ್ತಿದೆ.

ಮತ್ತಷ್ಟು ಓದಿ: ರಷ್ಯಾದ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ, 4 ವಿಮಾನಗಳಿಗೆ ಹಾನಿ

ಹಲವರ ಸ್ಥಿತಿ ಗಂಭೀರವಾಗಿದ್ದು, ಸಿರಿಯಾದ ಮೂರನೇ ಅತಿ ದೊಡ್ಡ ನಗರವಾದ ಹೋಮ್ಸ್‌ನ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಲ್-ಅಟಾಸ್ಸಿ ಹೇಳಿದ್ದಾರೆ.

ದಾಳಿಯ ಹೊಣೆಯನ್ನು ಇದುವರೆಗೂ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಶುಕ್ರವಾರದಿಂದ ಮೂರು ದಿನಗಳ ಶೋಕಾಚರಣೆಯನ್ನು ಸರ್ಕಾರ ಘೋಷಿಸಿದೆ ಎಂದು ಸಿರಿಯನ್ ರಾಜ್ಯ ದೂರದರ್ಶನ ತಿಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ