AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan Drone Strike: ಪಾಕಿಸ್ತಾನದಲ್ಲಿ ಡ್ರೋನ್ ದಾಳಿ, 22 ಮಂದಿಗೆ ಗಾಯ, ದಾಳಿ ನಡೆಸಿದವರ್ಯಾರು?

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಬುಧವಾರ ಡ್ರೋನ್ ದಾಳಿ ನಡೆದಿದ್ದು, ಘಟನೆಯು ವಾಲಿಬಾಲ್ ಮೈದಾನದಲ್ಲಿ ಸಂಭವಿಸಿದೆ. 22 ಮಂದಿ ಗಾಯಗೊಂಡಿದ್ದು, ಅವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ., ಡ್ರೋನ್ ದಾಳಿ ಯಾರಿಂದ ನಡೆದಿದ್ದು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ, ಆದರೆ ದ್ವೇಷಪ್ರೇರಿತ ದಾಳಿಯ ಸಾಧ್ಯತೆಯನ್ನು ಉಲೇಖಿಸಲಾಗುತ್ತಿದೆ.ಈ ಪ್ರದೇಶದಲ್ಲಿ ಕಳೆದ 2 ವಾರಗಳಲ್ಲಿ ನಡೆದ ಎರಡನೇ ಡ್ರೋನ್ ದಾಳಿ ಇದಾಗಿದೆ. ಪರಿಣಾಮವಾಗಿ ಸ್ಥಳೀಯ ಜನರಲ್ಲಿ ಭಯ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ.

Pakistan Drone Strike: ಪಾಕಿಸ್ತಾನದಲ್ಲಿ ಡ್ರೋನ್ ದಾಳಿ, 22 ಮಂದಿಗೆ ಗಾಯ, ದಾಳಿ ನಡೆಸಿದವರ್ಯಾರು?
ಡ್ರೋನ್ ದಾಳಿ, ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: May 29, 2025 | 9:56 AM

Share

ಇಸ್ಲಾಮಾಬಾದ್, ಮೇ 29: ಪಾಕಿಸ್ತಾನ(Pakistan)ದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಬುಧವಾರ ವಾಲಿಬಾಲ್ ಮೈದಾನದ ಮೇಲೆ ಡ್ರೋನ್ ದಾಳಿ ನಡೆದಿದೆ. ಅಲ್ಲಿ ಭೀತಿ ಸೃಷ್ಟಿಯಾಗಿದೆ. ಘಟನೆಯಲ್ಲಿ 22 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಆದರೆ ಡ್ರೋನ್ ದಾಳಿ ನಡೆಸಿದವರ್ಯಾರು ಪಾಕಿಸ್ತಾನದ ಮೇಲೆ ಇನ್ಯಾರಿಗೆ ದ್ವೇಷವಿದೆ ಎನ್ನುವ ಪ್ರಶ್ನೆಗಳು ಕಾಡುತ್ತಿವೆ. ಕಳೆದ ಎರಡು ವಾರಗಳಲ್ಲಿ ಈ ಪ್ರದೇಶದಲ್ಲಿ ನಡೆದ ಎರಡನೇ ಡ್ರೋನ್ ದಾಳಿ ಇದಾಗಿದ್ದು, ಇದರಿಂದಾಗಿ ಈ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಬರ್ಮಲ್ ತಹಸಿಲ್‌ನ ಅಜಮ್ ವಾರ್ಸಕ್ ಪ್ರದೇಶದಲ್ಲಿರುವ ಕರಮ್ಜಿ ನಿಲ್ದಾಣದ ಬಳಿ ಸ್ಥಳೀಯರು ವಾಲಿಬಾಲ್ ಪಂದ್ಯವನ್ನು ವೀಕ್ಷಿಸುತ್ತಿದ್ದಾಗ ಈ ಘಟನೆ ನಡೆದಿದೆ. ದಾಳಿ ಎಷ್ಟು ಹಠಾತ್ ಮತ್ತು ಭೀಕರವಾಗಿತ್ತೆಂದರೆ, ನೆಲದ ಮೇಲಿದ್ದ ಜನರು ತಮ್ಮ ಜೀವಗಳನ್ನು ಉಳಿಸಿಕೊಳ್ಳಲು ಭಯಭೀತರಾಗಿ ಓಡಲು ಪ್ರಾರಂಭಿಸಿದರು.

ಗಾಯಾಳುಗಳನ್ನು ತಕ್ಷಣ ವಾನಾದ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯ ಮೂಲಗಳ ಪ್ರಕಾರ, ಅನೇಕ ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ. ಅವರಲ್ಲಿ 13 ವರ್ಷದ ಮಗು ಮತ್ತು ಯುವಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಡಾನ್ ಪತ್ರಿಕೆಯ ವರದಿಯ ಪ್ರಕಾರ, 15, 18 ಮತ್ತು 19 ವರ್ಷ ವಯಸ್ಸಿನ ಮೂವರು ಯುವಕರು ಗಂಭೀರ ಗಾಯಗಳಿಂದ ಬಳಲುತ್ತಿದ್ದಾರೆ. ಉಳಿದ 13 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಲ್ಲಿ ಇಬ್ಬರನ್ನು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ
Image
ಮೇ 29-30ರಂದು ಈ ನಾಲ್ಕು ರಾಜ್ಯಗಳಿಗೆ ಪ್ರಧಾನಿ ಮೋದಿ ಭೇಟಿ
Image
ಅಮೆರಿಕದ ಅಧೀನ ಕಾರ್ಯದರ್ಶಿ ಜೆಫ್ರಿಯನ್ನು ಭೇಟಿಯಾದ ವಿಕ್ರಮ್ ಮಿಸ್ರಿ
Image
ವೀಸಾ ರದ್ದು; ಭಾರತೀಯ, ವಿದೇಶಿ ವಿದ್ಯಾರ್ಥಿಗಳಿಗೆ ಅಮೆರಿಕ ಎಚ್ಚರಿಕೆ
Image
ಶ್ರೀಲಂಕಾದಲ್ಲಿ ಉಪ್ಪಿನ ಬಿಕ್ಕಟ್ಟು; ದ್ವೀಪ ರಾಷ್ಟ್ರಕ್ಕೆ ಭಾರತದ ಸಹಾಯಹಸ್ತ

ಮತ್ತಷ್ಟು ಓದಿ: ಈ ಜೋಕರ್‌ಗಳು ಭಾರತದ ವಿರುದ್ಧ ಸ್ಪರ್ಧಿಸುತ್ತಾರಂತೆ; ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ

ದಕ್ಷಿಣ ವಜೀರಿಸ್ತಾನದ ರಾಷ್ಟ್ರೀಯ ಅಸೆಂಬ್ಲಿ ಸದಸ್ಯ ಜುಬೈರ್ ಖಾನ್ ಈ ದಾಳಿಯನ್ನು ಬಲವಾಗಿ ಖಂಡಿಸಿದರು, ಇದನ್ನು ಅನಾಗರಿಕತೆಯ ಪರಮಾವಧಿ ಎಂದು ಕರೆದರು. ಡ್ರೋನ್ ದಾಳಿಯ ನಂತರ, ಆ ಪ್ರದೇಶದಲ್ಲಿ ಭಾರೀ ಗುಂಡಿನ ಚಕಮಕಿ ಪ್ರಾರಂಭವಾಯಿತು ಎಂದು ಅವರು ಹೇಳಿದರು. ಇದರಿಂದಾಗಿ ಮೈದಾನದಲ್ಲಿ ನೆರೆದಿದ್ದ ಜನರಲ್ಲಿ ಕಾಲ್ತುಳಿತ ಉಂಟಾಯಿತು ಮತ್ತು ಅನೇಕ ಜನರು ನೆಲಕ್ಕೆ ಬಿದ್ದರು.

ಈ ಪ್ರದೇಶದಲ್ಲಿ ಈಗಾಗಲೇ ಸಂಘರ್ಷ ಮತ್ತು ಉದ್ವಿಗ್ನತೆಯ ಪರಿಸ್ಥಿತಿ ಇರುವ ಸಮಯದಲ್ಲಿ ಈ ದಾಳಿ ನಡೆದಿದೆ. ಭದ್ರತಾ ಪಡೆಗಳು ಮತ್ತು ನಿಷೇಧಿತ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಎರಡೂ ಕ್ವಾಡ್‌ಕಾಪ್ಟರ್ ಡ್ರೋನ್‌ಗಳ ಉಪಸ್ಥಿತಿಯ ಬಗ್ಗೆ ಈ ಹಿಂದೆಯೂ ಮಾಹಿತಿ ಬಂದಿತ್ತು.

ಕೆಲವೇ ದಿನಗಳ ಹಿಂದೆ, ಮೇ 19 ರಂದು, ಉತ್ತರ ವಜೀರಿಸ್ತಾನದ ಮಿರ್ ಅಲಿ ಪ್ರದೇಶದಲ್ಲಿ ನಡೆದ ಮತ್ತೊಂದು ಶಂಕಿತ ಡ್ರೋನ್ ದಾಳಿಯಲ್ಲಿ ಒಂದೇ ಕುಟುಂಬದ ನಾಲ್ವರು ಮಕ್ಕಳು ಸಾವನ್ನಪ್ಪಿದ್ದರು. ಮತ್ತು ಐದು ಜನರು ಗಾಯಗೊಂಡಿದ್ದರು. ಈ ಘಟನೆಯ ನಂತರ, ಕೋಪಗೊಂಡ ಸ್ಥಳೀಯ ಜನರು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದರು.

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯ, ವಿಶೇಷವಾಗಿ ಉತ್ತರ ಮತ್ತು ದಕ್ಷಿಣ ವಜೀರಿಸ್ತಾನ್, ಬಹಳ ಹಿಂದಿನಿಂದಲೂ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಮತ್ತು ಇತರ ಭಯೋತ್ಪಾದಕ ಸಂಘಟನೆಗಳ ಭದ್ರಕೋಟೆಯಾಗಿದೆ ಎಂಬುದು ಗಮನಾರ್ಹ. ಇತ್ತೀಚಿನ ತಿಂಗಳುಗಳಲ್ಲಿ, ಟಿಟಿಪಿ ಇಲ್ಲಿ ತನ್ನ ಚಟುವಟಿಕೆಗಳು ಮತ್ತು ದಾಳಿಗಳನ್ನು ತೀವ್ರಗೊಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು