Dubai Fire: ದುಬೈನ ಅಪಾರ್ಟ್​ಮೆಂಟ್​ನಲ್ಲಿ ಕಾಣಿಸಿಕೊಂಡ ಬೆಂಕಿ, ನಾಲ್ವರು ಭಾರತೀಯರು ಸೇರಿ 16 ಮಂದಿ ಸಜೀವ ದಹನ, 9 ಮಂದಿಗೆ ಗಾಯ

ದುಬೈನ್​ ಅಪಾರ್ಟ್​ಮೆಂಟ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಾಲ್ವರು ಭಾರತೀಯರು ಸೇರಿ 16 ಮಂದಿ ಸಜೀವ ದಹನವಾಗಿದ್ದು, 9 ಮಂದಿ ಗಾಯಗೊಂಡಿದ್ದಾರೆ.

Dubai Fire: ದುಬೈನ ಅಪಾರ್ಟ್​ಮೆಂಟ್​ನಲ್ಲಿ ಕಾಣಿಸಿಕೊಂಡ ಬೆಂಕಿ, ನಾಲ್ವರು ಭಾರತೀಯರು ಸೇರಿ 16 ಮಂದಿ ಸಜೀವ ದಹನ, 9 ಮಂದಿಗೆ ಗಾಯ
ಅಪಾರ್ಟ್​ಮೆಂಟ್​ನಲ್ಲಿ ಬೆಂಕಿ
Follow us
ನಯನಾ ರಾಜೀವ್
|

Updated on: Apr 16, 2023 | 1:14 PM

ದುಬೈ(Dubai)ನ್​ ಅಪಾರ್ಟ್​ಮೆಂಟ್​ನಲ್ಲಿ ಬೆಂಕಿ(Fire) ಕಾಣಿಸಿಕೊಂಡಿದ್ದು, ನಾಲ್ವರು ಭಾರತೀಯರು ಸೇರಿ 16 ಮಂದಿ ಸಜೀವ ದಹನವಾಗಿದ್ದು, 9 ಮಂದಿ ಗಾಯಗೊಂಡಿದ್ದಾರೆ. ದುಬೈನ ವಸತಿ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶನಿವಾರ ಅಲ್ ರಾಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ದುಬೈ ಸಿವಿಲ್ ಡಿಫೆನ್ಸ್ ವಕ್ತಾರರು ತಿಳಿಸಿದ್ದಾರೆ. ದುಬೈ ಸಿವಿಲ್ ಡಿಫೆನ್ಸ್ ಆಪರೇಷನ್ ರೂಮ್‌ನಲ್ಲಿ ಮಧ್ಯಾಹ್ನ 12.35 ಕ್ಕೆ ಬೆಂಕಿ ಕಾಣಿಸಿಕೊಂಡಿತು. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಐದಾರು ನಿಮಿಷದಲ್ಲಿ ಸ್ಥಳಕ್ಕಾಗಮಿಸಿ ಜನರನ್ನು ತೆರವುಗೊಳಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದರು.

ಪೋರ್ಟ್ ಸೈದ್ ಮತ್ತು ಹಮೀರಿಯಾ ಅಗ್ನಿಶಾಮಕ ಠಾಣೆಗಳ ತಂಡಗಳು ಕಾರ್ಯಾಚರಣೆಗೆ ಬ್ಯಾಕಪ್ ಒದಗಿಸಿದವು. ಮಧ್ಯಾಹ್ನ 2.42ಕ್ಕೆ ಬೆಂಕಿ ಹತೋಟಿಗೆ ಬಂದಿದ್ದು, ಬಳಿಕ ಕೂಲಿಂಗ್ ಕಾರ್ಯ ಆರಂಭಿಸಲಾಯಿತು. ಮೃತರ ಕುಟುಂಬಗಳಿಗೆ ತಮ್ಮ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ ವಕ್ತಾರರು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವ ಜೊತೆಗೆ ಗಾಯಾಳುಗಳಿಗೆ ತಕ್ಷಣದ ಪ್ರಥಮ ಚಿಕಿತ್ಸೆಯನ್ನೂ ನೀಡಿದರು.

ಮತ್ತಷ್ಟು ಓದಿ: ಬೆಂಗಳೂರು: ಪ್ಲಾಸ್ಟಿಕ್ ಪ್ಯಾಕಿಂಗ್ ಕವರ್ ಗೋಡೌನ್​​​​​ಗೆ ಬೆಂಕಿ

ಕಟ್ಟಡವು ಸುರಕ್ಷತಾ ಅವಶ್ಯಕತೆಗಳನ್ನು ಅನುಸರಿಸದಿರುವುದು ಬೆಂಕಿಗೆ ಕಾರಣವಾಯಿತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಈ ಸಂಬಂಧ ವಿಸ್ತೃತ ತನಿಖಾ ವರದಿಯನ್ನು ಶೀಘ್ರ ನೀಡಲಾಗುವುದು ಎಂದು ತಿಳಿಸಿದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಅವರು ಕಟ್ಟಡದಿಂದ ಜ್ವಾಲೆಗಳನ್ನು ನೋಡಿದರು. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊದಲ್ಲಿ, ಅಪಾರ್ಟ್ಮೆಂಟ್ನ ಕಿಟಕಿಯಿಂದ ಕಪ್ಪು ಹೊಗೆ ಹೊರಬರುತ್ತಿರುವುದು ಕಾಣಿಸಿತ್ತು. ಇದರೊಂದಿಗೆ ಹಲವು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿದ್ದವು.

ಅಲ್ಲೇ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಘಟನೆ ಬಗ್ಗೆ ವಿವರಿಸಿದ್ದಾರೆ. ಏನಾಯಿತು ಎಂದು ಆ ಕ್ಷಣದಲ್ಲಿ ಯಾರಿಗೂ ತಿಳಿಯಲಿಲ್ಲ, ಆದರೆ ಕಿಟಕಿಯಿಂದ ಹೊಗೆ ಬರುವುದನ್ನು ನಾವು ನೋಡಿದ್ದೇವೆ. ಕೆಲವರು ಸಹಾಯ ಮಾಡಲು ಕಟ್ಟಡದೊಳಗೆ ಹೋಗಲು ಪ್ರಯತ್ನಿಸಿದರು ಆದರೆ ಹೊಗೆಯಿಂದಾಗಿ ಏನೂ ಮಾಡಲು ಸಾಧ್ಯವಾಗಲಿಲ್ಲ.

ನಾವು ಕಟ್ಟಡದೊಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ, ಆದ್ದರಿಂದ ಪೊಲೀಸರು ಬರುವವರೆಗೆ ಕಾಯುತ್ತಿದ್ದೆವು ಎಂದು ಉದ್ಯೋಗಿ ಹೇಳಿದರು. ಕೆಲವೇ ನಿಮಿಷಗಳಲ್ಲಿ ಅಗ್ನಿಶಾಮಕ ದಳ ಬಂದು ಕ್ರೇನ್‌ಗಳ ಸಹಾಯದಿಂದ ಜನರಿಗೆ ಸಹಾಯ ಮಾಡಲು ಪ್ರಾರಂಭಿಸಿತು ಎಂದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?