Sign In

By signing in or creating an account, you agree with Associated Broadcasting Company's Terms & Conditions and Privacy Policy.

Dubai Expo 2020: ಜಾಗತಿಕ ಮಟ್ಟದಲ್ಲಿ ಭಾರತೀಯ ಮಾಧ್ಯಮ, ಮನೋರಂಜನಾ ಕ್ಷೇತ್ರ; ಅನುರಾಗ್ ಠಾಕೂರ್, ರಣವೀರ್ ಸಿಂಗ್ ಮಾತುಕತೆ

ಭಾರತೀಯ ಚಿತ್ರರಂಗದ ಬೆಳವಣಿಗೆ, ಭಾರತೀಯ ಚಿತ್ರರಂಗದ ಹೆಸರು, ಭಾರತೀಯ ಚಿತ್ರರಂಗ ವಿದೇಶಗಳಲ್ಲಿ ಪಸರಿಸುತ್ತಿದೆ ಎಂದು ಹೇಳಿದರು. ಚಿತ್ರೋದ್ಯಮದಿಂದ ಸಾಕಷ್ಟು ಮಂದಿ ಉದ್ಯೋಗ ಪಡೆದಿದ್ದಾರೆ ಎಂದು ಸಚಿವರು ತಿಳಿಸಿದರು.

Dubai Expo 2020: ಜಾಗತಿಕ ಮಟ್ಟದಲ್ಲಿ ಭಾರತೀಯ ಮಾಧ್ಯಮ, ಮನೋರಂಜನಾ ಕ್ಷೇತ್ರ; ಅನುರಾಗ್ ಠಾಕೂರ್, ರಣವೀರ್ ಸಿಂಗ್ ಮಾತುಕತೆ
ರಣವೀರ್ ಸಿಂಗ್, ಅನುರಾಗ್ ಠಾಕೂರ್
Follow us
TV9 Web
| Updated By: ganapathi bhat

Updated on:Mar 29, 2022 | 9:25 AM

Dubai Expo 2020: ದುಬೈ ಎಕ್ಸ್‌ಪೋ 2020ರ (Dubai Expo 2020) ಭಾಗವಾಗಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ನಟ ರಣವೀರ್ ಸಿಂಗ್ ವಿಶೇಷ ಆಕರ್ಷಣೆಯಾಗಿ ಕಂಡುಬಂದರು. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಸೋಮವಾರ ತಮ್ಮ ದುಬೈ ಭೇಟಿಯ ಭಾಗವಾಗಿ ದುಬೈ ಎಕ್ಸ್‌ಪೋ 2020ರಲ್ಲಿ ಭಾಗವಹಿಸಿದರು. ಇಂಡಿಯಾ ಪೆವಿಲಿಯನ್‌ನಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ರಣವೀರ್ ಸಿಂಗ್ ಅವರೊಂದಿಗೆ ‘ದಿ ಗ್ಲೋಬಲ್ ರೀಚ್ ಆಫ್ ಇಂಡಿಯನ್ ಮೀಡಿಯಾ ಮತ್ತು ಎಂಟರ್‌ಟೈನ್‌ಮೆಂಟ್ ಇಂಡಸ್ಟ್ರಿ’ ಕುರಿತು ವಿಶೇಷ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವ ಅನುರಾಗ್ ಮಾತನಾಡಿ, ಭಾರತೀಯ ಚಿತ್ರರಂಗದ ಬೆಳವಣಿಗೆ, ಭಾರತೀಯ ಚಿತ್ರರಂಗದ ಹೆಸರು, ಭಾರತೀಯ ಚಿತ್ರರಂಗ ವಿದೇಶಗಳಲ್ಲಿ ಪಸರಿಸುತ್ತಿದೆ ಎಂದು ಹೇಳಿದರು. ಚಿತ್ರೋದ್ಯಮದಿಂದ ಸಾಕಷ್ಟು ಮಂದಿ ಉದ್ಯೋಗ ಪಡೆದಿದ್ದಾರೆ ಎಂದು ಸಚಿವರು ತಿಳಿಸಿದರು.

ಸಚಿವ ಅನುರಾಗ್ ಠಾಕೂರ್ ಮಾತನಾಡಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ದೇಶ ಮಾತ್ರವಲ್ಲದೆ ವಿದೇಶಗಳಲ್ಲೂ ಸಂಭ್ರಮಾಚರಣೆ ನಡೆಸಲಾಗುತ್ತಿದೆ. ಚಿತ್ರೋದ್ಯಮವು ವಿದೇಶಿಯರ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ. ಭಾರತವನ್ನು ವಿಶ್ವದಲ್ಲಿಯೇ ಅತ್ಯುನ್ನತ ರಾಷ್ಟ್ರವನ್ನಾಗಿ ಮಾಡುವುದು ತಮ್ಮ ಗುರಿಯಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಚಿವರು ರಣವೀರ್ ಸಿಂಗ್ ನಟನೆಯ ಪ್ರತಿಭೆಯನ್ನು ಶ್ಲಾಘಿಸಿದರು.

ಭಾರತೀಯ ಸಿನಿಮಾ ಗಡಿಗಳನ್ನು ಮೀರಿ ಬೇರೆ ದೇಶಗಳ ಪ್ರೇಕ್ಷಕರನ್ನೂ ಆಕರ್ಷಿಸುತ್ತಿದೆ. ಭಾರತದ ಚಿತ್ರರಂಗ ಜಗತ್ತಿನಾದ್ಯಂತ ಪ್ರಸಿದ್ಧಿ ಪಡೆದಿದೆ ಎಂದು ರಣವೀರ್ ಸಿಂಗ್ ಸಂತಸ ವ್ಯಕ್ತಪಡಿಸಿದರು. ದೇಶ ವಿದೇಶಗಳಲ್ಲಿ ಭಾರತೀಯ ಚಿತ್ರೋದ್ಯಮ ಅಭಿವೃದ್ಧಿಯಾಗುತ್ತಿದೆ ಎಂದು ತಿಳಿಸಿದರು. ಸಭೆಯ ಮೊದಲು, ಸಚಿವ ಅನುರಾಗ್ ಠಾಕೂರ್ ಅವರು ರಣವೀರ್ ಸಿಂಗ್ ಅವರೊಂದಿಗೆ ದುಬೈ ಎಕ್ಸ್‌ಪೋ 2020 ರಲ್ಲಿ ಇಂಡಿಯಾ ಪೆವಿಲಿಯನ್‌ಗೆ ಭೇಟಿ ನೀಡಿದರು. ಇಂಡಿಯಾ ಪೆವಿಲಿಯನ್ 1.7 ಮಿಲಿಯನ್ ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ ಎಂದು ಹೇಳಲಾಗಿದೆ.

ಇದಕ್ಕೂ ಮುನ್ನ ಸಚಿವ ಅನುರಾಗ್ ಅವರು ದುಬೈ ಕಾರ್ಪೊರೇಷನ್ ಫಾರ್ ಟೂರಿಸಂ ಮತ್ತು ಕಾಮರ್ಸ್ ಮಾರ್ಕೆಟಿಂಗ್ ಸಿಇಒ ಇಸಾಮ್ ಕಾಜಿಮ್ ಅವರೊಂದಿಗೆ ವಿಶೇಷ ಸಭೆ ನಡೆಸಿದರು. ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ದುಬೈ ಅನುಸರಿಸುತ್ತಿರುವ ವಿವಿಧ ಕಾರ್ಯತಂತ್ರಗಳ ಕುರಿತು ಚರ್ಚಿಸಿದರು. ಇದಲ್ಲದೆ, ಪ್ರವಾಸೋದ್ಯಮ, ಮಾಧ್ಯಮ ಮತ್ತು ಮನರಂಜನಾ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರದ ಕುರಿತು ಚರ್ಚೆಗಾಗಿ ಅನುರಾಗ್ ಠಾಕೂರ್ ಕಾಜಿಮ್ ಅವರನ್ನು ಭಾರತಕ್ಕೆ ಆಹ್ವಾನಿಸಿದರು.

ಇದನ್ನೂ ಓದಿ: ದುಬೈನಲ್ಲಿ ಅಂತಾರಾಷ್ಟ್ರೀಯ ಫ್ಯಾಷನ್ ಸ್ಪರ್ಧೆ; ಕನ್ನಡಿಗ​ ಫಾರೆವರ್​ ನವೀನ್​ಕುಮಾರ್​ಗೆ ಸಿಕ್ತು ಹೊಸ ಟೈಟಲ್

ಇದನ್ನೂ ಓದಿ: ಕೇಂದ್ರ ಸಚಿವ ಅನುರಾಗ್ ಠಾಕೂರ್ ಉತ್ತರ ಪ್ರದೇಶದಲ್ಲಿ ‘ಮಿಷನ್ ಬಿಜೆಪಿ’ ಮೂಲಕ ಕಾರ್ಯಕರ್ತರಲ್ಲಿ ಚೈತನ್ಯ ತುಂಬಿದ್ದು ಹೀಗೆ

Published On - 9:23 am, Tue, 29 March 22

ಫ್ರೀಡ್​​ಮ್ಯಾನ್ ಪೋಡ್​ಕ್ಯಾಸ್ಟ್​​​: ಆಡಳಿತ ಸುಧಾರಣೆ ಬಗ್ಗೆ ಮೋದಿ ಮಾತು
ಫ್ರೀಡ್​​ಮ್ಯಾನ್ ಪೋಡ್​ಕ್ಯಾಸ್ಟ್​​​: ಆಡಳಿತ ಸುಧಾರಣೆ ಬಗ್ಗೆ ಮೋದಿ ಮಾತು
ಹೊಸ ನಟರು ಬಂದರೂ ಪುನೀತ್ ಫ್ಯಾನ್ಸ್ ನಿಯತ್ತು ಬದಲಾಗಲ್ಲ: ರಮ್ಯಾ ಮೆಚ್ಚುಗೆ
ಹೊಸ ನಟರು ಬಂದರೂ ಪುನೀತ್ ಫ್ಯಾನ್ಸ್ ನಿಯತ್ತು ಬದಲಾಗಲ್ಲ: ರಮ್ಯಾ ಮೆಚ್ಚುಗೆ
ಹಾಸನ: ಸತತ ನಾಲ್ಕು ಗಂಟೆಗಳ ಬಳಿಕ ಕಾಡಾನೆ ಸೆರೆ
ಹಾಸನ: ಸತತ ನಾಲ್ಕು ಗಂಟೆಗಳ ಬಳಿಕ ಕಾಡಾನೆ ಸೆರೆ
ಅಂಬಿ ಮೊಮ್ಮಗನ ನಾಮಕರಣ: ವಿಶೇಷ ಗಿಫ್ಟ್ ನೀಡಿದ ಕಿಚ್ಚ ಸುದೀಪ್
ಅಂಬಿ ಮೊಮ್ಮಗನ ನಾಮಕರಣ: ವಿಶೇಷ ಗಿಫ್ಟ್ ನೀಡಿದ ಕಿಚ್ಚ ಸುದೀಪ್
ಮಹಾರಾಷ್ಟ್ರ: ಚಾಲಕನಿಗೆ ಹೃದಯಾಘಾತ, 10 ವಾಹನಗಳಿಗೆ ಡಿಕ್ಕಿ ಹೊಡೆದ ಕಾರು
ಮಹಾರಾಷ್ಟ್ರ: ಚಾಲಕನಿಗೆ ಹೃದಯಾಘಾತ, 10 ವಾಹನಗಳಿಗೆ ಡಿಕ್ಕಿ ಹೊಡೆದ ಕಾರು
ಮಲ್ಲಿಕಾರ್ಜುನ ಖರ್ಗೆ ಜತೆ ಡಿಕೆ ಶಿವಕುಮಾರ್ ದಿಢೀರ್ ಪಯಣ!
ಮಲ್ಲಿಕಾರ್ಜುನ ಖರ್ಗೆ ಜತೆ ಡಿಕೆ ಶಿವಕುಮಾರ್ ದಿಢೀರ್ ಪಯಣ!
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಗಣೇಶ್ ಆಚಾರ್ಯ ಮಾತು
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಗಣೇಶ್ ಆಚಾರ್ಯ ಮಾತು
ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಅಗ್ನಿ ಅವಘಡ
ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಅಗ್ನಿ ಅವಘಡ
ಒಂದೇ ಓವರ್​ನಲ್ಲಿ 6 ಸಿಕ್ಸ್​: ಏಕದಿನ ಕ್ರಿಕೆಟ್​ನ ಮೊದಲ ವಿಶ್ವ ದಾಖಲೆ
ಒಂದೇ ಓವರ್​ನಲ್ಲಿ 6 ಸಿಕ್ಸ್​: ಏಕದಿನ ಕ್ರಿಕೆಟ್​ನ ಮೊದಲ ವಿಶ್ವ ದಾಖಲೆ
Video: ಮಹಾರಾಷ್ಟ್ರದ ಸೆಂಟ್ರಲ್​ ಬ್ಯಾಂಕ್​ನಲ್ಲಿ ಭಾರಿ ಅಗ್ನಿ ಅವಘಡ
Video: ಮಹಾರಾಷ್ಟ್ರದ ಸೆಂಟ್ರಲ್​ ಬ್ಯಾಂಕ್​ನಲ್ಲಿ ಭಾರಿ ಅಗ್ನಿ ಅವಘಡ