AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಸ್ಪರ ಅನ್​ಫಾಲೋ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿಯೇ ಪತಿಗೆ ತಲಾಖ್ ನೀಡಿದ ದುಬೈ ರಾಜಕುಮಾರಿ

ದುಬೈ ರಾಜಕುಮಾರಿ ಶೈಖಾ ಮಹ್ರಾ ಮೊಹಮ್ಮದ್ ರಶೆದ್ ಅಲ್ ಮಕ್ತೂಮ್ಅ ವರು ತಮ್ಮ ಪತಿ ಶೇಖ್ ಮನ ಬಿನ್ ಮೊಹಮ್ಮದ್ ಬಿನ್ ರಶೀದ್ ಬಿನ್ ಮನಾ ಅಲ್ ಮಕ್ತೌಮ್‌ಗೆ ಇನ್‌ಸ್ಟಾಗ್ರಾಮ್‌ನಲ್ಲಿ 'ವಿವಾಹ ವಿಚ್ಛೇದನ' ನೀಡಿದ್ದಾರೆ. ಜುಲೈ 16 ರಂದು ರಾಜಕುಮಾರಿ ತಾನು ವಿಚ್ಛೇದನ ನೀಡುತ್ತಿರುವುದಾಗಿ ಇನ್‌ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿದ್ದಾರೆ.

ಪರಸ್ಪರ ಅನ್​ಫಾಲೋ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿಯೇ ಪತಿಗೆ ತಲಾಖ್ ನೀಡಿದ ದುಬೈ ರಾಜಕುಮಾರಿ
ಶೈಖಾ ಮಹ್ರಾ ಮೊಹಮ್ಮದ್ ರಶೆದ್ ಅಲ್ ಮಕ್ತೂಮ್
ರಶ್ಮಿ ಕಲ್ಲಕಟ್ಟ
|

Updated on: Jul 17, 2024 | 7:33 PM

Share

ದುಬೈ ಜುಲೈ 17: ದಂಪತಿಗಳು ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ ಎರಡು ತಿಂಗಳ ನಂತರ, ದುಬೈ (Dubai) ರಾಜಕುಮಾರಿ ಶೈಖಾ ಮಹ್ರಾ ಮೊಹಮ್ಮದ್ ರಶೆದ್ ಅಲ್ ಮಕ್ತೂಮ್ (Shaikha Mahra Mohammed Rashed Al Maktoum) ಅವರು ತಮ್ಮ ಪತಿ ಶೇಖ್ ಮನ ಬಿನ್ ಮೊಹಮ್ಮದ್ ಬಿನ್ ರಶೀದ್ ಬಿನ್ ಮನಾ ಅಲ್ ಮಕ್ತೌಮ್‌ಗೆ ಇನ್‌ಸ್ಟಾಗ್ರಾಮ್‌ನಲ್ಲಿ ‘ವಿವಾಹ ವಿಚ್ಛೇದನ’ ನೀಡಿದ್ದಾರೆ. ಜುಲೈ 16 ರಂದು ರಾಜಕುಮಾರಿ ತಮ್ಮ ಇನ್‌ಸ್ಟಾಗ್ರಾಮ್‌ (Instagram) ಪೋಸ್ಟ್‌ನಲ್ಲಿ, ತನ್ನ ಪತಿ ನನಗೆ ದ್ರೋಹವೆಸಗಿದ ಕಾರಣ ವಿಚ್ಛೇದನ ನೀಡುತ್ತಿರುವುದಾಗಿ ಹೇಳಿದ್ದಾರೆ. “ಪ್ರೀತಿಯ ಗಂಡ, ನೀವು ಇತರ ಸಂಗಾತಿಯೊಂದಿಗೆ ನಿರತರಾಗಿರುವ ಹೊತ್ತಲ್ಲೇ ನಾನು ಈ ಮೂಲಕ ನಮ್ಮ ವಿಚ್ಛೇದನವನ್ನು ಘೋಷಿಸುತ್ತೇನೆ. ನಾನು ನಿಮಗೆ ವಿಚ್ಛೇದನ ನೀಡುತ್ತಿದ್ದೇನೆ. ಕಾಳಜಿ ವಹಿಸಿ. ನಿಮ್ಮ ಮಾಜಿ ಪತ್ನಿ,” ಎಂದು ರಾಜಕುಮಾರಿ ಪೋಸ್ಟ್ ಮಾಡಿದ್ದಾರೆ.

ಇಸ್ಲಾಮಿಕ್ ಕಾನೂನಿನಲ್ಲಿ, ತ್ವರಿತ ವಿಚ್ಛೇದನದ ಪ್ರಕ್ರಿಯೆಯನ್ನು  “ತಲಾಕ್-ಎ-ಬಿದ್ದತ್” ಎಂದು ಕರೆಯಲಾಗುತ್ತದೆ. ಅಲ್ಲಿ ಪತಿ ತಕ್ಷಣವೇ ಮದುವೆಯನ್ನು ರದ್ದು ಮಾಡಲು “ತಲಾಕ್” ಅನ್ನು ಮೂರು ಬಾರಿ ಹೇಳುತ್ತಾರೆ. ಸಾಂಪ್ರದಾಯಿಕವಾಗಿ, ಇಸ್ಲಾಮಿಕ್ ಕಾನೂನಿನ ಅನೇಕ ವ್ಯಾಖ್ಯಾನಗಳಲ್ಲಿ ಪುರುಷರು ಮಾತ್ರ ತಲಾಖ್ ಹೇಳಬಹುದು. ಮತ್ತೊಂದೆಡೆ, ಮಹಿಳೆಯರು “ಖುಲಾ” ಎಂದು ಕರೆಯಲ್ಪಡುವ ವಿಭಿನ್ನ ಪ್ರಕ್ರಿಯೆಯ ಮೂಲಕ ವಿಚ್ಛೇದನವನ್ನು ಪಡೆಯುವ ಆಯ್ಕೆಯನ್ನು ಹೊಂದಿದ್ದಾರೆ. ಅಲ್ಲಿ ಅವರು ತಮ್ಮ ಪತಿ ಅಥವಾ ನ್ಯಾಯಾಲಯದಿಂದ ವಿಚ್ಛೇದನವನ್ನು ಕೋರುತ್ತಾರೆ. ಕೆಲವು ನ್ಯಾಯವ್ಯಾಪ್ತಿಗಳಲ್ಲಿ, ಮಹಿಳೆಯರು ತಮ್ಮ ವಿವಾಹ ಒಪ್ಪಂದದಲ್ಲಿ (ನಿಕಾಹ್ ನಾಮಾ) ತಲಾಖ್ ಹೇಳುವ  ಹಕ್ಕನ್ನು ನೀಡುವ ಷರತ್ತನ್ನು ಸಹ ಸೇರಿಸಬಹುದು.

ಶೈಖಾ ಮಹ್ರಾ ತಲಾಖ್ ಪೋಸ್ಟ್

ಏತನ್ಮಧ್ಯೆ, ರಾಜಕುಮಾರಿಯ ಪೋಸ್ಟ್‌ಗೆ ಅವರ ಹಿತೈಷಿಗಳು ಕಾಮೆಂಟ್ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಆಕೆ ಪತಿಯೊಂದಿಗೆ ಇದ್ದ ಚಿತ್ರಗಳನ್ನ ಡಿಲೀಟ್ ಮಾಡಿದ್ದು ಅವರಿಬ್ಬರೂ ಸಹ ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿದ್ದಾರೆ.

ಶೈಖಾ ಮಹ್ರಾ ಅವರು ಕೈಗಾರಿಕೋದ್ಯಮಿ ಶೇಖ್ ಮನ ಬಿನ್ ಮೊಹಮ್ಮದ್ ಬಿನ್ ರಶೀದ್ ಬಿನ್ ಮನ ಅಲ್ ಮಕ್ತೌಮ್ ಅವರನ್ನು ಮೇ 2023 ರಲ್ಲಿ ವಿವಾಹವಾದರು. ಮದುವೆ ಆಗಿ ಒಂದು ವರ್ಷದ ನಂತರ ಮಗಳು ಜನಿಸಿದ್ದಳು.

ಇದನ್ನೂ ಓದಿ: ಯುಕೆಯ ಲೇಬರ್​ ಪಾರ್ಟಿಯ ಕಾರ್ಯಕಾರಿ ಸಮಿತಿಗೆ ಆಯ್ಕೆಯಾದ ಕನ್ನಡಿಗ ಡಾ. ನೀರಜ್ ಪಾಟೀಲ್

ಜೂನ್‌ನಲ್ಲಿ ಶೈಖಾ ಮಹ್ರಾ ಅವರು ತಮ್ಮ ಮಗುವನ್ನು ಅಪ್ಪಿಕೊಂಡಿರುವ ಪೋಸ್ಟ್ ಅನ್ನು Instagram ನಲ್ಲಿ ಹಂಚಿಕೊಂಡಿದ್ದರು. “ನಾವಿಬ್ಬರು ಮಾತ್ರ, ಎಂದು ಆ ಪೋಸ್ಟ್​ಗೆ ಅವರು ಶೀರ್ಷಿಕೆ ನೀಡಿದ್ದರು. ಶೇಖ್ ಮಹ್ರಾ ಮೊಹಮ್ಮದ್ ರಶೆದ್ ಅಲ್ ಮಕ್ತೌಮ್ ಅವರು ಪ್ರಸ್ತುತ ದುಬೈ ಆಡಳಿತಗಾರರಾಗಿರುವ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರ ಪುತ್ರಿ. ಇವರು ಉಪಾಧ್ಯಕ್ಷರು ಮತ್ತು ಪ್ರಧಾನ ಮಂತ್ರಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ