AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈ ರಸ್ತೆ ಅಪಘಾತ ಸಂತ್ರಸ್ತರಿಗೆ ನೆರವಾದ ಅನಿವಾಸಿ ಭಾರತೀಯ ಉದ್ಯಮಿ: 2.6 ಕೋಟಿ ರೂ. ನೆರವು ಘೋಷಿಸಿದ ಡಾ. ಶಂಶೀರ್ ವಯಾಲಿಲ್

ದುಬೈ ಎಮಿರೇಟ್ಸ್ ರಸ್ತೆ ಅಪಘಾತದ ಸಂತ್ರಸ್ತರ ಕುಟುಂಬಗಳಿಗೆ ಬುರ್ಜೀಲ್ ಹೋಲ್ಡಿಂಗ್ಸ್ ಚೇರ್ಮನ್, ಸಿಇಒ ಡಾ. ಶಂಶೀರ್ ವಯಾಲಿಲ್ 2.6 ಕೋಟಿ ರೂ. ಪರಿಹಾರದ ಪ್ಯಾಕೇಜ್ ಘೋಷಿಸಿದ್ದಾರೆ. ಈ ಧನಸಹಾಯವು ಮೃತರ ಕುಟುಂಬಗಳಿಗೆ ತಲಾ 26 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸೆ ಮತ್ತು ಮಕ್ಕಳ ಶಿಕ್ಷಣಕ್ಕೆ ಆಸರೆಯಾಗಲಿದೆ.

ದುಬೈ ರಸ್ತೆ ಅಪಘಾತ ಸಂತ್ರಸ್ತರಿಗೆ ನೆರವಾದ ಅನಿವಾಸಿ ಭಾರತೀಯ ಉದ್ಯಮಿ: 2.6 ಕೋಟಿ ರೂ. ನೆರವು ಘೋಷಿಸಿದ ಡಾ. ಶಂಶೀರ್ ವಯಾಲಿಲ್
ದುಬೈನ ಎಮಿರೇಟ್ಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ಚಿತ್ರImage Credit source: tv9
ಗಣಪತಿ ಶರ್ಮಾ
|

Updated on: Jun 13, 2026 | 10:17 AM

Share

ದುಬೈ, ಜೂನ್ 13: ದುಬೈನ ಎಮಿರೇಟ್ಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಹಾಗೂ ಗಾಯಗೊಂಡ ಕಾರ್ಮಿಕರ ಕುಟುಂಬಗಳಿಗೆ ನೆರವಾಗಲು ಪ್ರಮುಖ ಅನಿವಾಸಿ ಭಾರತೀಯ ಉದ್ಯಮಿ, ಬುರ್ಜೀಲ್ ಹೋಲ್ಡಿಂಗ್ಸ್ ಸಂಸ್ಥೆಯ ಚೇರ್ಮನ್ ಹಾಗೂ ಸಿಇಒ ಡಾ. ಶಂಶೀರ್ ವಯಾಲಿಲ್ 2.6 ಕೋಟಿ ರೂ. ಮೊತ್ತದ ಬೃಹತ್ ಪರಿಹಾರದ ಪ್ಯಾಕೇಜ್ ಘೋಷಿಸಿದ್ದಾರೆ. ಈ ಅಪಘಾತದಲ್ಲಿ ಮೃತಪಟ್ಟ ಏಳು ಕಾರ್ಮಿಕರ ಕುಟುಂಬಗಳು ಹಾಗೂ ಗಾಯಗೊಂಡ ಒಂಬತ್ತು ಮಂದಿಗೆ ಆರ್ಥಿಕ ಚೇತರಿಕೆ, ತುರ್ತು ಪ್ರಯಾಣ ಮತ್ತು ಮಕ್ಕಳ ಶಿಕ್ಷಣಕ್ಕಾಗಿ ಈ ನೆರವು ಒದಗಿಸಲಾಗುತ್ತಿದೆ.

ಮುಖ್ಯಾಂಶಗಳು

  • ಸಂತ್ರಸ್ತರ ಕುಟುಂಬಗಳಿಗೆ ಭಾರಿ ಆರ್ಥಿಕ ನೆರವು.
  • ಮೃತರ ಕುಟುಂಬಕ್ಕೆ ತಲಾ 26 ಲಕ್ಷ ರೂ.
  • ಗಾಯಾಳುಗಳ ವೈದ್ಯಕೀಯ ಚಿಕಿತ್ಸೆಗೆ ವಿಶೇಷ ಧನಸಹಾಯ.

ಯಾರಿಗೆ ಎಷ್ಟೆಷ್ಟು ಆರ್ಥಿಕ ಸಹಾಯ?

ಡಾ. ಶಂಶೀರ್ ವಯಾಲಿಲ್ ಅವರ ಈ ಮಾನವೀಯ ಕಾರ್ಯಕ್ರಮದ ಅಡಿಯಲ್ಲಿ, ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಏಳು ಸಂತ್ರಸ್ತರ ಕುಟುಂಬಗಳಿಗೆ ತಲಾ 26 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು. ಇನ್ನು ತೀವ್ರವಾಗಿ ಗಾಯಗೊಂಡಿರುವ ಒಂಬತ್ತು ಮಂದಿ ಬದುಕುಳಿದವರ ವೈದ್ಯಕೀಯ ಮತ್ತು ಚಿಕಿತ್ಸೆ ಅಗತ್ಯತೆಗಳ ಆಧಾರದ ಮೇಲೆ ಒಟ್ಟು 47 ಲಕ್ಷ ರೂ. ಹಣವನ್ನು ಹಂಚಿಕೆ ಮಾಡಲಾಗಿದೆ. ಇದರೊಂದಿಗೆ, ಸಂತ್ರಸ್ತರ ಕುಟುಂಬಸ್ಥರ ತುರ್ತು ದುಬೈ ಪ್ರಯಾಣ ಮತ್ತು ವಸತಿ ಸೌಕರ್ಯಕ್ಕಾಗಿ 18 ಲಕ್ಷ ರೂ. ಹಾಗೂ ಅಪಘಾತದಿಂದ ಆಧಾರ ಕಳೆದುಕೊಂಡ ಕುಟುಂಬಗಳ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕಾಗಿ 13 ಲಕ್ಷ ರೂ. ನೆರವನ್ನು ಮೀಸಲಿಡಲಾಗಿದೆ.

ಅಪಘಾತದ ಹಿನ್ನೆಲೆ ಮತ್ತು ಸಂತ್ರಸ್ತರ ವಿವರ

ದುಬೈ ಮೂಲದ ಕಂಪನಿಯೊಂದರ ಉದ್ಯೋಗಿಗಳನ್ನು ಹೊತ್ತೊಯ್ಯುತ್ತಿದ್ದ ಮಿನಿಬಸ್, ತಾಂತ್ರಿಕ ದೋಷದಿಂದ ರಸ್ತೆಯಲ್ಲಿ ನಿಂತಿದ್ದ ಟ್ರಕ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಾಗ ಈ ದುರಂತ ಸಂಭವಿಸಿತ್ತು. ಅಪಘಾತಕ್ಕೊಳಗಾದವರಲ್ಲಿ ಭಾರತ, ಶ್ರೀಲಂಕಾ ಮತ್ತು ನೇಪಾಳದ ಕಾರ್ಮಿಕರಿದ್ದಾರೆ. ಮೃತಪಟ್ಟ ಏಳು ಜನರಲ್ಲಿ ಆರು ಮಂದಿ ಭಾರತೀಯರು (ಮೂವರು ಉತ್ತರ ಪ್ರದೇಶ ಹಾಗೂ ಮೂವರು ತೆಲಂಗಾಣದವರು) ಮತ್ತು ಒಬ್ಬರು ಶ್ರೀಲಂಕಾದ ಪ್ರಜೆಯಾಗಿದ್ದಾರೆ. ಗಾಯಗೊಂಡ ಒಂಬತ್ತು ಜನರಲ್ಲಿ ಎಂಟು ಮಂದಿ ಭಾರತೀಯರಾಗಿದ್ದು (ಇಬ್ಬರು ಕೇರಳದವರು), ಒಬ್ಬರು ನೇಪಾಳದವರಾಗಿದ್ದಾರೆ. ಗಾಯಾಳುಗಳ ಪೈಕಿ ಐವರು ಈಗಾಗಲೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಮೂವರು ಭಾರತೀಯರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತೀಯ ರಾಯಭಾರ ಕಚೇರಿ ಜೊತೆ ಸಮನ್ವಯ

ಈ ಆರ್ಥಿಕ ಸಹಾಯವನ್ನು ಅರ್ಹ ಕುಟುಂಬಗಳಿಗೆ ಸಮರ್ಪಕವಾಗಿ ತಲುಪಿಸಲು ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ (Indian Consulate) ಸಮನ್ವಯ ಸಾಧಿಸಲಾಗುತ್ತಿದೆ. ‘ನಾವು ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದು, ಮಾನವೀಯತೆಯ ದೃಷ್ಟಿಯಿಂದ ಈ ಅಪಘಾತದಿಂದ ತೊಂದರೆಗೊಳಗಾದ ಎಲ್ಲಾ ದೇಶಗಳ ಸಂತ್ರಸ್ತರಿಗೂ ನೆರವು ವಿಸ್ತರಿಸಲಾಗುವುದು’ ಎಂದು ಡಾ. ಶಂಶೀರ್ ತಿಳಿಸಿದ್ದಾರೆ.

Dr Shamsheer Vayalil

ಬುರ್ಜೀಲ್ ಹೋಲ್ಡಿಂಗ್ಸ್ ಸಂಸ್ಥೆಯ ಚೇರ್ಮನ್ ಹಾಗೂ ಸಿಇಒ ಡಾ. ಶಂಶೀರ್ ವಯಾಲಿಲ್

ಈ ಹಿಂದೆಯೂ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟ ವೈದ್ಯಕೀಯ ವಿದ್ಯಾರ್ಥಿಗಳ ಕುಟುಂಬಗಳಿಗೆ ಡಾ. ಶಂಶೀರ್ 6 ಕೋಟಿ ರೂ. ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
ಅಯೋಧ್ಯೆ ರಾಮಮಂದಿರ ದೇಣಿಗೆ ಲೆಕ್ಕ ಬಹಿರಂಗ
ಅಯೋಧ್ಯೆ ರಾಮಮಂದಿರ ದೇಣಿಗೆ ಲೆಕ್ಕ ಬಹಿರಂಗ