ಬ್ರೆಜಿಲ್: ಆಗ್ನೇಯ ಬ್ರೆಜಿಲ್‌ನ (Brazil) ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಿಂದ ಭೂಕುಸಿತದಿಂದ (Landslides) ಮಣ್ಣಿನ ಗುಡ್ಡ ಕುಸಿದು 24 ಜನ ಸಾವನ್ನಪ್ಪಿದ್ದಾರೆ. ತೆರವು ಕಾರ್ಯಾಚರಣೆ ನಡೆದಿದ್ದು, ಮಣ್ಣಿನ ಅಡಿಯಲ್ಲಿ ಸಿಲುಕಿದವರನ್ನು ಹೊರ ತೆಗೆಯಲಾಗುತ್ತಿದೆ. ಗುಡ್ಡ ಕುಸಿತದಿಂದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಸಂಚಾರಕ್ಕೆ ನಿರ್ಭಂದಿಸಲಾಗಿದೆ. ಇನ್ನು ಬ್ರೆಜಿಲ್‌ನ ಕಾರನಿವಲ್ ಸಂಭ್ರಮಾಚರಣೆಗೆ ತೆರಳುತ್ತಿದ್ದವರು ಇದರಲ್ಲಿ ಸಿಲುಕಿರುವ ಸಾಧ್ಯತೆ ಇದ್ದು, ಅವರನ್ನು ಸಂಪರ್ಕಿಸಲಾಗುತ್ತಿದೆ.
ಬ್ರೆಜಿಲ್‌ನ ಶ್ರೀಮಂತ ರಾಜ್ಯ ಸಾವ್ ಪಾಲೊ ಸರ್ಕಾರದ ಪ್ರಕಾರ 19 ಜನರು ಸಾವನ್ನಪ್ಪಿದ್ದಾರೆ. ಮತ್ತು 566 ಜನ ನಿರಾಶ್ರಿತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದಾರೆ. ಇನ್ನು ಈ ಬಾರಿ 600 ಮಿಲಿಮೀಟರ್ ಕ್ಕಿಂತಲೂ ಅಧಿಕ ಮಳೆಯಾಗಿದೆ ಎಂದು ಸರ್ಕಾರ ಹೇಳಿದೆ.
ಹವಾಮಾನ ಇಲಾಖೆ ವರದಿ ಪ್ರಕಾರ ಸಾವ್ ಪಾಲೊ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಳೆಯಾಗಲಿದ್ದು, ಇದರಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಲಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಸರ್ಕಾರ ಈಗಾಗಲೆ ನಿರಾಶ್ರಿತರ ಮತ್ತು ಮೃತ ಹೊಂದಿದವರ ಕುಟಂಬದವರ ಸಂಪರ್ಕದಲ್ಲಿದ್ದು, ತನ್ನ ಸಚಿವರನ್ನು ಸ್ಥಳಕ್ಕೆ ಕಳುಹಿಸಿದೆ. ಈಗಾಗಲೆ ನಗರ ಮರು ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದೆ.
ಮತ್ತಷ್ಟು ಅಂತರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ