AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Earthquake: ನೇಪಾಳದಲ್ಲಿ ಪ್ರಬಲ ಭೂಕಂಪಕ್ಕೆ 6 ಮಂದಿ ಸಾವು, ದೆಹಲಿ ಸುತ್ತಮುತ್ತಲೂ ಭೂಕಂಪದ ಅನುಭವ

ಭೂಕಂಪದಿಂದ ಆಘಾತಕ್ಕೊಳಗಾದ ಜನರು ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ. ಸುಮಾರು 10 ಸೆಕೆಂಡ್​ಗಳ ಕಾಲ ಭೂಕಂಪದ ಅನುಭವವಾಯಿತು ಎಂದು ವರದಿಯಾಗಿದೆ.

Nepal Earthquake: ನೇಪಾಳದಲ್ಲಿ ಪ್ರಬಲ ಭೂಕಂಪಕ್ಕೆ 6 ಮಂದಿ ಸಾವು, ದೆಹಲಿ ಸುತ್ತಮುತ್ತಲೂ ಭೂಕಂಪದ ಅನುಭವ
ನೇಪಾಳ ಭೂಕಂಪ
TV9 Web
| Edited By: |

Updated on:Nov 09, 2022 | 7:18 AM

Share

ದೆಹಲಿ / ಕಠ್ಮಂಡು: ನೇಪಾಳದ ದೋಟಿ ಜಿಲ್ಲೆಯಲ್ಲಿ ಬುಧವಾರ ನಸುಕಿನಲ್ಲಿ (ನ 9) ಪ್ರಬಲ ಭೂಕಂಪ  (Nepal Earthquake) ಸಂಭವಿಸಿದ್ದು, ಹಲವು ಮನೆಗಳು ಕುಸಿದಿವೆ. ಸತ್ತವರ ನಿಖರ ಸಂಖ್ಯೆ ಇನ್ನೂ ವರದಿಯಾಗಬೇಕಿದ್ದು, ಸುದ್ದಿಸಂಸ್ಥೆಗಳು ನೀಡಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ ಈವರೆಗೆ ಆರು ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ನೇಪಾಳದ ಭೂಕಂಪದ ಉತ್ತರಕಂಪನಗಳು (Strong Tremors) ದೆಹಲಿ, ರಾಷ್ಟ್ರ ರಾಜಧಾನಿ ಪ್ರದೇಶ, ನೋಯ್ಡಾ ಸೇರಿದಂತೆ ಹಲವೆಡೆ ಜನರ ಅನುಭವಕ್ಕೆ ಬಂದಿವೆ. ಭೂಕಂಪದಿಂದ ಆಘಾತಕ್ಕೊಳಗಾದ ಜನರು ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ. ಸುಮಾರು 10 ಸೆಕೆಂಡ್​ಗಳ ಕಾಲ ಭೂಕಂಪದ ಅನುಭವವಾಯಿತು ಎಂದು ವರದಿಯಾಗಿದೆ.

ನೇಪಾಳದಲ್ಲಿ ಮಂಗಳವಾರ (ನ 8) ರಾತ್ರಿ 8.52ಕ್ಕೆ ಮೊದಲ ಬಾರಿಗೆ ಭೂಮಿಯು ಕಂಪಿಸಿದ ಅನುಭವವಾಯಿತು. ಮೊದಲ ಭೂಕಂಪನದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 4.9 ಎಂದು ದಾಖಲಾಗಿತ್ತು. ಬುಧವಾರ (ನ 9) ನಸುಕಿನ 1.57ಕ್ಕೆ ಎರಡನೇ ಬಾರಿಗೆ ಭೂಮಿಯು ಕಂಪಿಸಿತು. ಇದರ ತೀವ್ರತೆಯು 6.3ರಷ್ಟು ಇತ್ತು. ನೇಪಾಳದ ಎರಡನೇ ಭೂಕಂಪನದ ಅಲೆಗಳು ಭಾರತದ ದೆಹಲಿ, ಗಾಜಿಯಾಬಾದ್, ನೋಯ್ಡಾ, ಗುರುಗ್ರಾಮ ಮತ್ತು ಲಖನೌ ನಗರಗಳನ್ನೂ ನಡುಗಿಸಿತು.

‘ಭೂಕಂಪವು ಭೂಮಿಯ 10 ಕಿಮೀ ಆಳದಲ್ಲಿ ಸಂಭವಿಸಿದೆ. ರಾತ್ರಿಯಿಂದೀಚೆಗೆ ಯಾವುದೇ ತುರ್ತುಕರೆ ಬಂದಿಲ್ಲ. ನೇಪಾಳದಲ್ಲಿ ಭೂಕಂಪನದ ಕೇಂದ್ರವಿತ್ತು’ ಎಂದು ‘ನ್ಯಾಷನಲ್ ಸೆಂಟರ್ ಫಾರ್ ಸೆಸ್​ಮೊಲಜಿ’ ಕಚೇರಿಯು ಟ್ವೀಟ್ ಮಾಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಜನರು ಭೂಕಂಪನದ ಅನುಭವವನ್ನು ಹಂಚಿಕೊಂಡಿದ್ದಾರೆ. ಭೂಕಂಪ ಸಂಭವಿಸಿದ ಕೇವಲ ಅರ್ಧಗಂಟೆಯ ಅವಧಿಯಲ್ಲಿ ಟ್ವಿಟರ್​ನಲ್ಲಿ #earthquake ಹ್ಯಾಷ್​ಟ್ಯಾಗ್ ಟ್ರೆಂಡ್ ಆಗಿತ್ತು. ಭಾರತದಲ್ಲಿ ಭೂಕಂಪದಿಂದ ಜೀವಹಾನಿ ಅಥವಾ ಆಸ್ತಿಹಾನಿಯಾದ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Published On - 7:15 am, Wed, 9 November 22

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ