Pakistan Earthquake: ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ 9 ಸಾವು, 150ಕ್ಕೂ ಹೆಚ್ಚು ಜನರಿಗೆ ಗಾಯ

ಪಾಕಿಸ್ತಾನದಲ್ಲಿ ಹಲವೆಡೆ ಪ್ರಬಲ ಭೂಕಂಪ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, 6 ಜನರು ಗಾಯಗೊಂಡಿದ್ದಾರೆ.

Pakistan Earthquake: ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ 9 ಸಾವು, 150ಕ್ಕೂ ಹೆಚ್ಚು ಜನರಿಗೆ ಗಾಯ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Mar 22, 2023 | 7:24 AM

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ (Pakistan) ಹಲವೆಡೆ ಪ್ರಬಲ ಭೂಕಂಪ (Earthquake) ಸಂಭವಿಸಿ 9 ಜನರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಂಗಳವಾರ (ಮಾ.21) ರಾಜಧಾನಿ ಇಸ್ಲಾಮಾಬಾದ್​​ (Islamabad) , ಲಾಹೋರ್ (Lahore), ಪೇಶಾವರ, ರಾವಲ್ಪಿಂಡಿ ಸೇರಿ ಹಲವು ನಗರಗಳಲ್ಲಿ ಭೂಮಿ ಕಂಪಿಸಿದ ಅನುಭವಾಗಿದೆ. ಭೂಮಿಯ 180 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟೆರ್​ ಮಾಪಕದಲ್ಲಿ ತೀರ್ವತೆ 6.8ರಷ್ಟಿದೆ. ಗುಜ್ರಾನ್‌ವಾಲಾ, ಗುಜರಾತ್‌, ಸಿಯಾಲ್‌ಕೋಟ್‌, ಕೋಟ್‌ ಮೊಮಿನ್‌, ಮಧ್‌ ರಂಝಾ, ಚಕ್ವಾಲ್‌, ಕೊಹತ್‌ ಮತ್ತು ಗಿಲ್ಗಿಟ್‌-ಬಾಲ್ಟಿಸ್ತಾನ್‌ ಪ್ರದೇಶಗಳಲ್ಲಿಯೂ ಪ್ರಬಲ ಕಂಪನ ಸಂಭವಿಸಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕಂಪನದಿಂದ ಹಲವು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡಿದ್ದಾರೆ. ಸ್ವಾತ್ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರೇ ಮತ್ತು 150 ಮಂದಿ ಗಾಯಗೊಂಡಿದ್ದಾರೆ, ಅವರನ್ನು ಚಿಕಿತ್ಸೆಗಾಗಿ ಸೈದು ಬೋಧನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಭೂಕಂಪದ ಸಮಯದಲ್ಲಿ, ರಾವಲ್ಪಿಂಡಿಯ ಮಾರುಕಟ್ಟೆಗಳಲ್ಲಿ ಕಾಲ್ತುಳಿತ ಸಂಭವಿಸಿದೆ.

ಇದನ್ನೂ ಓದಿ: ದೆಹಲಿ ಸೇರಿ ಉತ್ತರ ಭಾರತದ ಕೆಲವೆಡೆ ಭೂಕಂಪ; ನಿಮಿಷಗಳ ಕಾಲ ಕಂಪಿಸಿದ ಭೂಮಿ

ಪಾಕಿಸ್ತಾನ ಹೊರತಾಗಿ, ಭಾರತ, ಅಫ್ಘಾನಿಸ್ತಾನ, ತುರ್ಕಮೆನಿಸ್ತಾನ್, ಕಜಕಿಸ್ತಾನ್, ತಜಕಿಸ್ತಾನ್, ಉಜ್ಬೇಕಿಸ್ತಾನ್, ಚೀನಾ ಮತ್ತು ಕಿರ್ಗಿಸ್ತಾನ್‌ನಲ್ಲಿಯೂ ಕಂಪನದ ಅನುಭವವಾಗಿದೆ ಅಂತರಾಷ್ಟ್ರೀಯ ಭೂಕಂಪನ ಕೇಂದ್ರ ಹೇಳಿದೆ. ಈ ವರ್ಷಜನವರಿಯಲ್ಲಿ ಇಸ್ಲಾಮಾಬಾದ್‌ನಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಮತ್ತಷ್ಟು ಅಂತರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ