AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia Earthquake: ರಷ್ಯಾದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ, ಭಯಾನಕ ವಿಡಿಯೋಗಳು ಇಲ್ಲಿವೆ

ರಷ್ಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಸಾಕಷ್ಟು ಆಸ್ತಿಪಾಸ್ತಿಗಳಿಗೆ ಹಾನಿಯುಂಟಾಗಿದೆ. ಭೂಕಂಪದ ತೀವ್ರತೆ 8.8ರಷ್ಟಿದೆ. ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿ ಸಂಭವಿಸಿದ ಪ್ರಬಲ ಭೂಕಂಪದ ನಂತರ ಸುನಾಮಿಯ ಸಾಧ್ಯತೆಯ ಬಗ್ಗೆ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಅಮೆರಿಕದಲ್ಲಿರುವ ಭಾರತೀಯ ನಾಗರಿಕರಿಗೆ ಸುರಕ್ಷತಾ ಎಚ್ಚರಿಕೆ ನೀಡಿದೆ.

Russia Earthquake: ರಷ್ಯಾದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ, ಭಯಾನಕ ವಿಡಿಯೋಗಳು ಇಲ್ಲಿವೆ
ಭೂಕಂಪ
ನಯನಾ ರಾಜೀವ್
|

Updated on: Jul 30, 2025 | 9:41 AM

Share

ಮಾಸ್ಕೋ, ಜುಲೈ 30: ರಷ್ಯಾದ ಕಮ್ಚಟ್ಕಾ ದ್ವೀಪದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ(Earthquake) ಸಂಭವಿಸಿದೆ. ಭೂಕಂಪದ ನಂತರ, ಸಾಗರದಲ್ಲಿ ಭಾರಿ ಸುನಾಮಿ ಎದ್ದಿದ್ದು, ಇದರಿಂದಾಗಿ ಜನರು ಕರಾವಳಿ ಪ್ರದೇಶಗಳಿಂದ ಸ್ಥಳಾಂತರಗೊಳ್ಳಬೇಕಾಯಿತು. ಕಮ್ಚಟ್ಕಾಕ್ಕೆ ಹೊಂದಿಕೊಂಡಿರುವ ಕರಾವಳಿ ಪ್ರದೇಶವನ್ನು ನೀರು ತಲುಪಿದೆ.ಕರಾವಳಿಯಲ್ಲಿ ಕಟ್ಟಡಗಳು ಮುಳುಗಿರುವ ಮತ್ತು ನೆಲದ ಮೇಲೆ ಅಪಾರ ಪ್ರಮಾಣದ ನೀರು ಕಾಣುವ ಚಿತ್ರಗಳು ಮತ್ತು ವೀಡಿಯೊಗಳು ಕಾಣಿಸಿಕೊಂಡಿವೆ. ಪೆಸಿಫಿಕ್ ಸುನಾಮಿ ಕೇಂದ್ರವು ಜಪಾನ್ ಮತ್ತು ಅಮೆರಿಕದ ಹವಾಯಿಗೆ ಸುನಾಮಿ ಎಚ್ಚರಿಕೆ ನೀಡಿದೆ.

ಅಮೆರಿಕದ ಕರಾವಳಿ ಪ್ರದೇಶಗಳಲ್ಲಿರುವ ಭಾರತೀಯರಿಗೆ ಎಚ್ಚರಿಕೆ ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿ ಸಂಭವಿಸಿದ ಪ್ರಬಲ ಭೂಕಂಪದ ನಂತರ ಸುನಾಮಿಯ ಸಾಧ್ಯತೆಯ ಬಗ್ಗೆ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಅಮೆರಿಕದಲ್ಲಿರುವ ಭಾರತೀಯ ನಾಗರಿಕರಿಗೆ ಸುರಕ್ಷತಾ ಎಚ್ಚರಿಕೆ ನೀಡಿದೆ. ಕ್ಯಾಲಿಫೋರ್ನಿಯಾ, ಅಮೆರಿಕದ ಇತರ ಪಶ್ಚಿಮ ಕರಾವಳಿ ರಾಜ್ಯಗಳು ಮತ್ತು ಹವಾಯಿಯಲ್ಲಿ ವಾಸಿಸುವ ಭಾರತೀಯ ನಾಗರಿಕರಿಗೆ ಈ ಎಚ್ಚರಿಕೆ ನೀಡಲಾಗಿದೆ.

ಜಪಾನ್ ಕರಾವಳಿಗೆ ಅಪ್ಪಳಿಸಿದ 1.3 ಅಡಿ ಎತ್ತರದ ಸುನಾಮಿ ದೇಶದ ಉತ್ತರದ ಪ್ರಮುಖ ದ್ವೀಪವಾದ ಹೊಕ್ಕೈಡೊದ ದಕ್ಷಿಣ ಕರಾವಳಿಯಲ್ಲಿರುವ ಟೊಕಾಚಿಯಲ್ಲಿ 1.3 ಅಡಿ ಎತ್ತರದ ಸುನಾಮಿ ಅಲೆಗಳು ಅಪ್ಪಳಿಸಿದವು ಎಂದು ಜಪಾನ್ ಹವಾಮಾನ ಸಂಸ್ಥೆ ವರದಿ ಮಾಡಿದೆ. ಕಮ್ಚಟ್ಕಾ ಪರ್ಯಾಯ ದ್ವೀಪದ ಭೂಕಂಪದ ಕೇಂದ್ರಬಿಂದುವಿಗೆ ಹತ್ತಿರವಿರುವ ರಷ್ಯಾದ ಪ್ರದೇಶಗಳಲ್ಲಿ ಹಾನಿ ಮತ್ತು ಸ್ಥಳಾಂತರಿಸುವಿಕೆ ವರದಿಯಾಗಿದೆ. ಆದಾಗ್ಯೂ, ಯಾವುದೇ ಗಂಭೀರ ಗಾಯಗಳು ವರದಿಯಾಗಿಲ್ಲ.

ಭೂಕಂಪ ವಿಡಿಯೋ

ಕುರಿಲ್ ದ್ವೀಪಗಳಲ್ಲಿರುವ ಜನರನ್ನು ಎತ್ತರದ ಸ್ಥಳಗಳಿಗೆ ಕಳುಹಿಸಲಾಗಿದೆ ಸುನಾಮಿಯ ಮೊದಲ ಅಲೆಯು ಪೆಸಿಫಿಕ್ ಮಹಾಸಾಗರದಲ್ಲಿರುವ ರಷ್ಯಾದ ಕುರಿಲ್ ದ್ವೀಪಗಳ ಮುಖ್ಯ ವಸಾಹತು ಸೆವೆರೊ-ಕುರಿಲ್ಸ್ಕ್ ಕರಾವಳಿ ಪ್ರದೇಶವನ್ನು ಅಪ್ಪಳಿಸಿದೆ. ನಿವಾಸಿಗಳು ಸುರಕ್ಷಿತವಾಗಿದ್ದಾರೆ ಮತ್ತು ಮತ್ತೊಂದು ಅಲೆಯ ಬೆದರಿಕೆ ಹಾದುಹೋಗುವವರೆಗೆ ಎತ್ತರದ ಸ್ಥಳಗಳಲ್ಲಿಯೇ ಇರುತ್ತಾರೆ ಎಂದು ಸ್ಥಳೀಯ ಗವರ್ನರ್ ವ್ಯಾಲೆರಿ ಲಿಮರೆಂಕೊ ಅವರು ಹೇಳಿದರು.

ಭೂಕಂಪದ ಮತ್ತೊಂದು ವಿಡಿಯೋ

ಹೊನೊಲುಲುವಿನಲ್ಲಿ ಸುನಾಮಿ ಎಚ್ಚರಿಕೆ ಹೊನೊಲುಲುವಿನಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದ್ದು, ಜನರು ಎತ್ತರದ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುವಂತೆ ಒತ್ತಾಯಿಸಲಾಗಿದೆ. ಜೀವ ಮತ್ತು ಆಸ್ತಿಯನ್ನು ರಕ್ಷಿಸಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಎಚ್ಚರಿಕೆಯಲ್ಲಿ ತಿಳಿಸಲಾಗಿದೆ.

ಜಪಾನ್‌ನ ಫುಕುಶಿಮಾ ಪರಮಾಣು ಸ್ಥಾವರದಿಂದ ಕಾರ್ಮಿಕರನ್ನು ಸ್ಥಳಾಂತರ ಸುನಾಮಿ ಎಚ್ಚರಿಕೆಯ ನಂತರ, ಮುನ್ನೆಚ್ಚರಿಕೆಯಾಗಿ ಫುಕುಶಿಮಾ ಪರಮಾಣು ಸ್ಥಾವರದ ಕಾರ್ಮಿಕರನ್ನು ಸ್ಥಳಾಂತರಿಸಲಾಯಿತು. ಆದಾಗ್ಯೂ, ಜಪಾನ್‌ನ ಮುಖ್ಯ ಕ್ಯಾಬಿನೆಟ್ ಕಾರ್ಯದರ್ಶಿ ಯೋಶಿಮಾಸಾ ಹಯಾಶಿ ಅವರು ಇಲ್ಲಿಯವರೆಗೆ ಯಾವುದೇ ಪರಮಾಣು ಸ್ಥಾವರದಲ್ಲಿ ಯಾವುದೇ ಅನಾಹುತದ ವರದಿಯಾಗಿಲ್ಲ.

ಮತ್ತಷ್ಟು ಓದಿ: ದೆಹಲಿ-ಎನ್‌ಸಿಆರ್‌ನಲ್ಲಿ 2 ದಿನಗಳಲ್ಲಿ ಇಂದು ಎರಡನೇ ಬಾರಿ ಭೂಕಂಪ

ರಷ್ಯಾ ಮತ್ತು ಜಪಾನ್‌ನ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸಿದ ಸುನಾಮಿ ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದ ಬಳಿ 8.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ ನಂತರ, ರಷ್ಯಾದ ಕುರಿಲ್ ದ್ವೀಪಗಳು ಮತ್ತು ಜಪಾನ್‌ನ ಉತ್ತರ ದ್ವೀಪ ಹೊಕ್ಕೈಡೊದ ಕರಾವಳಿ ಪ್ರದೇಶಗಳಿಗೆ ಸುನಾಮಿ ಅಪ್ಪಳಿಸಿದೆ ಎಂದು ಸುದ್ದಿ ಸಂಸ್ಥೆ ಎಪಿ ವರದಿ ಮಾಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ