ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಭೂಕಂಪ: ಸಾವಿನ ಸಂಖ್ಯೆ 4 ಸಾವಿರಕ್ಕೆ ಏರಿಕೆ

ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಶನಿವಾರ (ಅ.7) ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 4 ಸಾವಿರ ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 6.2 ತೀವ್ರತೆಯ ಎರಡು ಭೂಕಂಪಗಳಲ್ಲಿ ಸುಮಾರು 2,000 ಮನೆಗಳು ನೆಲಸಮವಾಗಿದೆ ಎಂದು ಅಫ್ಘಾನಿಸ್ತಾನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ANDMA) ತಿಳಿಸಿದೆ.

ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಭೂಕಂಪ: ಸಾವಿನ ಸಂಖ್ಯೆ 4 ಸಾವಿರಕ್ಕೆ ಏರಿಕೆ
ಸಾಂದರ್ಭಿಕ ಚಿತ್ರ

Updated on: Oct 10, 2023 | 11:59 AM

ಪಶ್ಚಿಮ ಅಫ್ಘಾನಿಸ್ತಾನದಲ್ಲಿ (Western Afghanistan) ಶನಿವಾರ (ಅ.7) ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 4 ಸಾವಿರ ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 6.2 ತೀವ್ರತೆಯ ಎರಡು ಭೂಕಂಪಗಳಲ್ಲಿ ಸುಮಾರು 2,000 ಮನೆಗಳು ನೆಲಸಮವಾಗಿದೆ ಎಂದು ಅಫ್ಘಾನಿಸ್ತಾನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ANDMA) ತಿಳಿಸಿದೆ. ಅಂಕಿಅಂಶಗಳ ಪ್ರಕಾರ ಇಲ್ಲಿಯವರೆಗೆ ಸಾವು -ನೋವಿನ ಸಂಖ್ಯೆ 4 ಸಾವಿರಕ್ಕೆ ಏರಿಕೆಯಾಗಿದೆ ಎಂದು ಎಎನ್​​​ಡಿಎಮ್​​​ಎ ಹೇಳಿದೆ.

ಸೋಮವಾರ ನೀಡಿದ ವರದಿಗಳ ಪ್ರಕಾರ 2,400 ಜನ ಸಾವನ್ನಪ್ಪಿದರು ಎಂದು ಹೇಳಲಾಗಿತ್ತು. ಹೆರಾತ್‌ನ ಜಿಂದಾ ಜನ್ ಜಿಲ್ಲೆಯ 13 ಹಳ್ಳಿಗಳಲ್ಲಿ ವಾಸಿಸುತ್ತಿದ್ದವರು ಹೆಚ್ಚಿನ ಮಂದಿ ಭೂಕಂಪಕ್ಕೆ ಬಲಿಯಾಗಿದ್ದಾರೆ. 1,320 ಮನೆಗಳು ನಾಶವಾಗಿವೆ ಎಂದು ವರದಿ ಹೇಳಿತ್ತು. ಇನ್ನು ANDMA ಹೇಳಿರುವ ಪ್ರಕಾರ ದಿನದಿಂದ ದಿನಕ್ಕೆ ಭೂಕಂಪದಿಂದ ಸಾವನ್ನಪ್ಪಿರುವವ ಸಂಖ್ಯೆ ಹೆಚ್ಚುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ:  ಅಫ್ಘಾನಿಸ್ತಾನದ ಸರಣಿ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 2,400ಕ್ಕೆ ಏರಿಕೆ

ಗಾಯಗೊಂಡವರನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದ್ದು. ಇದಕ್ಕೆ 12 ಆಂಬ್ಯುಲೆನ್ಸ್‌ಗಳನ್ನು ಕಳುಹಿಸಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿತ್ತು. ಅಫ್ಘಾನಿಸ್ತಾನದ ಹಂಗಾಮಿ ಪ್ರಧಾನಿ ಮೊಹಮ್ಮದ್ ಹಸನ್ ಅಖುಂಡ್ ಅವರು ಸೋಮವಾರ ಹೆರಾತ್ ಪ್ರಾಂತ್ಯದ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲು ಅಧಿಕಾರಿಗಳಿಗೆ ಹೇಳಿದ್ದರು. ಇನ್ನು ಚೀನಾ ಭಾನುವಾರ ಅಫ್ಘಾನ್ ರೆಡ್ ಕ್ರೆಸೆಂಟ್‌ಗೆ 200,000 US (1,66,49,480.00) ಡಾಲರ್‌ಗಳನ್ನು ತುರ್ತು ಮಾನವೀಯ ನರೆವು ನೀಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us