AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Earthquake: ನೇಪಾಳದ ಕಠ್ಮಂಡುವಿನಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ

ನೇಪಾಳದ ಕಠ್ಮಂಡುವಿನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆ ದಾಖಲಾಗಿದೆ.

Nepal Earthquake: ನೇಪಾಳದ ಕಠ್ಮಂಡುವಿನಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ
ಪ್ರಾತಿನಿಧಿಕ ಚಿತ್ರ
ನಯನಾ ರಾಜೀವ್
|

Updated on:Oct 22, 2023 | 8:41 AM

Share

ನೇಪಾಳದ ಕಠ್ಮಂಡುವಿನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಧಾಡಿಂಗ್​ನಲ್ಲಿದೆ. ಭೂಕಂಪವು ಬೆಳಗ್ಗೆ 7.39ಕ್ಕೆ ಸಂಭವಿಸಿದೆ. ಬಾಗ್ಮತಿ ಹಾಗೂ ಗಂಡಕಿ ಪ್ರಾಂತ್ಯದ ಜಿಲ್ಲೆಗಳಲ್ಲಿ ಕಂಪನದ ಅನುಭವವಾಗಿದೆ. ಕಂಪನದಿಂದ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಟಿಬೆಟ್ ಹಾಗೂ ಭಾರತೀಯ ಟೆಕ್ಟೋನಿಕ್ ಪ್ಲೇಟ್​ಗಳು ಸಂಧಿಸುವ ಸ್ಥಳದಲ್ಲಿ ಅಪ್ಪಳಿಸಿದೆ. 2015ರಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿ, 9 ಸಾವಿರ ಮಂದಿ ಸಾವ್ನನಪ್ಪಿದ್ದರು. ನೇಪಾಳ ಪ್ರಪಂಚದಲ್ಲಿ 11ನೇ ಅತಿ ಹೆಚ್ಚು ಭೂಕಂಪ ಪೀಡಿತ ರಾಷ್ಟ್ರವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:35 am, Sun, 22 October 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More