ಅಫ್ಘಾನಿಸ್ತಾನ(Afghanistan)ದಲ್ಲಿ ಮತ್ತೆ ಭೂಕಂಪ(Earthquake) ಸಂಭವಿಸಿದೆ, ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3 ದಾಖಲಾಗಿದೆ. ಅಫ್ಘಾನಿಸ್ತಾನದಲ್ಲಿ ಅಕ್ಟೋಬರ್ ತಿಂಗಳಲ್ಲಿ ಸಂಭವಿಸಿದ 4ನೇ ಭೂಕಂಪ ಇದಾಗಿದೆ. ಕಳೆದ ವಾರವಷ್ಟೇ ಹೆರಾತ್ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ ಸಂಭವಿಸಿ 4 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು, ನೂರಾರು ಮಂದಿ ಗಾಯಗೊಂಡಿದ್ದರು. ಅಫ್ಘಾನ್ ಜನತೆ ಸರಣಿ ಭೂಕಂಪಗಳಿಂದಾಗಿ ತತ್ತರಿಸಿದೆ.
ಗುರುವಾರ ಮುಂಜಾನೆ ಅಫ್ಘಾನಿಸ್ತಾನದ ಕೆಲವು ಭಾಗಗಳಲ್ಲಿ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಬೆಳಗಿನ ಜಾವ 1.10ರ ಸುಮಾರಿಗೆ ಭೂಕಂಪ ಸಂಭವಿಸಿದ್ದು, 150 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ. ಯಾವುದೇ ಹಾನಿ ಅಥವಾ ಸಾವು ನೋವುಗಳ ವರದಿಯಾಗಿಲ್ಲ.
6.3 ತೀವ್ರತೆಯ ಭೂಕಂಪವು ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಕನಿಷ್ಠ 4,000 ಜನರನ್ನು ಬಲಿತೆಗೆದುಕೊಂಡಿತು , ಇದು ಎರಡು ದಶಕಗಳಲ್ಲಿ ದೇಶವನ್ನು ಅಪ್ಪಳಿಸಿದ ಅತ್ಯಂತ ಭೀಕರ ಭೂಕಂಪಗಳಲ್ಲಿ ಒಂದಾಗಿದೆ.
ಈ ಹಿಂದೆ ಅಕ್ಟೋಬರ್ 15 ರಂದು ರಿಕ್ಟರ್ ಮಾಪಕದಲ್ಲಿ 5.4 ರ ತೀವ್ರತೆಯ ಭೂಕಂಪವು ಅಫ್ಘಾನಿಸ್ತಾನವನ್ನು ತಲ್ಲಣಗೊಳಿಸಿತು. ಅದಕ್ಕೂ ಮೊದಲು, ಅಕ್ಟೋಬರ್ 13 ರಂದು ಅಫ್ಘಾನಿಸ್ತಾನದಲ್ಲಿ 4.6 ರ ತೀವ್ರತೆಯ ಭೂಕಂಪ ಸಂಭವಿಸಿದೆ.
ಮತ್ತಷ್ಟು ಓದಿ: Afghanistan Earthquake: ಅಫ್ಘಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ, 6.3 ತೀವ್ರತೆ ದಾಖಲು
ಅಕ್ಟೋಬರ್ 11 ರಂದು ರಿಕ್ಟರ್ ಮಾಪಕದಲ್ಲಿ 6.1 ರ ತೀವ್ರತೆಯ ಮತ್ತೊಂದು ಭೂಕಂಪವು ದೇಶವನ್ನು ಆತಂಕಕ್ಕೆ ತಳ್ಳಿತ್ತು. ಹೆರಾತ್ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮತ್ತು ಗಾಯಗಳ ಸಂಖ್ಯೆಯನ್ನು ತಾಲಿಬಾನ್ ಇನ್ನೂ ನೀಡಿಲ್ಲ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ