Afghanistan Earthquake: ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ

|

Updated on: Dec 12, 2023 | 8:32 AM

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆ ದಾಖಲಾಗಿದೆ.

Afghanistan Earthquake: ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ
ಭೂಕಂಪ
Follow us on

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ(Earthquake) ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆ ದಾಖಲಾಗಿದೆ. ಒಂದು ದಿನದ ಹಿಂದಷ್ಟೇ ಅಫ್ಘಾನಿಸ್ತಾನದ ಫೈಜಾಬಾದ್​ನಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ. ಫೈಜಾಬಾದ್‌ನ ಆಗ್ನೇಯಕ್ಕೆ ಸುಮಾರು 180 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದಿಂದ ಉಂಟಾದ ಹಾನಿಯ ವಿವರಗಳನ್ನು ಬಹಿರಂಗಪಡಿಸಿಲ್ಲ. ಈಗ ಸಂಭವಿಸಿರುವ ಭೂಕಂಪದ ಬಗ್ಗೆಯೂ ಸಾಕಷ್ಟು ಮಾಹಿತಿ ಲಭ್ಯವಾಗಿಲ್ಲ.

ಅಫ್ಘಾನಿಸ್ತಾನದಲ್ಲಿ ಅಕ್ಟೋಬರ್​ನಲ್ಲಿ ಸಂಭವಿಸಿದ ಸರಣಿ ಭೂಕಂಪದಲ್ಲಿ 4 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. 2 ಸಾವಿರಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿತ್ತು.

ಅಫ್ಘಾನಿಸ್ತಾನದ ಜನರು ಒಂದರ ನಂತರ ಒಂದರಂತೆ ಭೂಕಂಪನದ ಪ್ರಬಲ ಕಂಪನವನ್ನು ಅನುಭವಿಸುತ್ತಿದ್ದಾರೆ. ಇದುವರೆಗೆ 4 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಸಿರಿಯಾ ಮತ್ತು ಟರ್ಕಿಯಲ್ಲಿ ಸಂಭವಿಸಿದ ಭೂಕಂಪಕ್ಕಿಂತ ಅಫ್ಘಾನಿಸ್ತಾನದ ಭೂಕಂಪವು ಹೆಚ್ಚು ಭಯಾನಕವಾಗಿದೆ ಎಂದು ನಂಬಲಾಗಿತ್ತು.

ಮತ್ತಷ್ಟು ಓದಿ:Afghanistan Earthquake: ಅಫ್ಘಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ, 6.3 ತೀವ್ರತೆ ದಾಖಲು

ವಿಶ್ವಸಂಸ್ಥೆಯ ಮಾನವೀಯ ಕಚೇರಿಯು ಭೂಕಂಪಕ್ಕೆ ಸ್ಪಂದಿಸಲು 5 ಮಿಲಿಯನ್ ಡಾಲರ್​ ನೆರವು ಘೋಷಿಸಿತ್ತು. ಈ ದುರಂತದಲ್ಲಿ ಬದುಕುಳಿದವರಿಗೆ ಆಶ್ರಯ, ಆಹಾರ ಮತ್ತು ವೈದ್ಯಕೀಯ ಸೌಲಭ್ಯಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿತ್ತು.

 

 

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:24 am, Tue, 12 December 23