AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Japan Earthquake: ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ.

Japan Earthquake: ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ
ಭೂಕಂಪ
ನಯನಾ ರಾಜೀವ್
| Edited By: ರಶ್ಮಿ ಕಲ್ಲಕಟ್ಟ|

Updated on:Jan 01, 2024 | 8:44 PM

Share

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ. ಸುನಾಮಿ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ, ಬೇಗ ಇಶಿಕಾವಾ, ನಿಗಾಟಾ, ಟೊಯಾಮಾ ಮತ್ತು ಯಮಗಾಟಾ ಪ್ರಾಂತ್ಯಗಳ ಕರಾವಳಿ ಪ್ರದೇಶಗಳನ್ನು ತೊರೆಯುವಂತೆ ಜನರಿಗೆ ಕೇಳಲಾಗಿದೆ. 5 ಮೀಟರ್ (16 ಅಡಿ) ಎತ್ತರದವರೆಗೆ ಅಲೆಗಳು ಬರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತದೆ. ಕರಾವಳಿ ಪ್ರದೇಶದಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ಟೋಕಿಯೊ ಮತ್ತು ಇಡೀ ಕಾಂಟೊ ಪ್ರದೇಶದಲ್ಲಿ ಕಂಪನಗಳು ಸಂಭವಿಸಿವೆ. 2011 ರಲ್ಲಿ ಭೂಕಂಪದ ನಂತರ ಸುನಾಮಿಯಿಂದಾಗಿ 16 ಸಾವಿರ ಮಂದಿ ಸಾವನ್ನಪ್ಪಿದ್ದರು. ಮಾರ್ಚ್ 2011 ರಲ್ಲಿ, 9 ತೀವ್ರತೆಯ ವಿನಾಶಕಾರಿ ಸುನಾಮಿ ಸಂಭವಿಸಿದೆ. ಆಗ ಎದ್ದ ಸುನಾಮಿ ಅಲೆಗಳು ಫುಕುಶಿಮಾ ಪರಮಾಣು ಸ್ಥಾವರವನ್ನು ನಾಶಪಡಿಸಿದ್ದವು.

ಪರಿಸರ ಹಾನಿಯ ದೃಷ್ಟಿಯಿಂದ ಇದೊಂದು ಪ್ರಮುಖ ಘಟನೆ ಎಂದು ಪರಿಗಣಿಸಲಾಗಿದೆ. ನಂತರ ಸಮುದ್ರದಲ್ಲಿ 10 ಮೀಟರ್ ಎತ್ತರದ ಅಲೆಗಳು ಅನೇಕ ನಗರಗಳಲ್ಲಿ ವಿನಾಶವನ್ನು ಉಂಟುಮಾಡಿದವು. ಇದರಲ್ಲಿ ಸುಮಾರು 16 ಸಾವಿರ ಜನರು ಸಾವನ್ನಪ್ಪಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಫಿಲಿಪೈನ್ಸ್‌ನಲ್ಲಿ ಭೂಕಂಪ ಸಂಭವಿಸಿತ್ತು, ಇದಕ್ಕೂ ಮೊದಲು ಕಳೆದ ವರ್ಷ ಡಿಸೆಂಬರ್‌ನಲ್ಲಿ ಫಿಲಿಪ್ಪೀನ್ಸ್‌ನಲ್ಲಿ ಭೂಕಂಪನದ ಅನುಭವವಾಗಿತ್ತು. ಇದರ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 6.8 ಎಂದು ಅಳೆಯಲಾಯಿತು. ಇದರ ಕೇಂದ್ರವು 82 ಕಿಮೀ ಆಳದಲ್ಲಿ ಮಿಂಡಾನಾವೊದಲ್ಲಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:06 pm, Mon, 1 January 24

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ