Japan Earthquake: ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ.

Japan Earthquake: ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ
ಭೂಕಂಪ
Edited By: ರಶ್ಮಿ ಕಲ್ಲಕಟ್ಟ

Updated on: Jan 01, 2024 | 8:44 PM

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ. ಸುನಾಮಿ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ, ಬೇಗ ಇಶಿಕಾವಾ, ನಿಗಾಟಾ, ಟೊಯಾಮಾ ಮತ್ತು ಯಮಗಾಟಾ ಪ್ರಾಂತ್ಯಗಳ ಕರಾವಳಿ ಪ್ರದೇಶಗಳನ್ನು ತೊರೆಯುವಂತೆ ಜನರಿಗೆ ಕೇಳಲಾಗಿದೆ.
5 ಮೀಟರ್ (16 ಅಡಿ) ಎತ್ತರದವರೆಗೆ ಅಲೆಗಳು ಬರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತದೆ. ಕರಾವಳಿ ಪ್ರದೇಶದಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ಟೋಕಿಯೊ ಮತ್ತು ಇಡೀ ಕಾಂಟೊ ಪ್ರದೇಶದಲ್ಲಿ ಕಂಪನಗಳು ಸಂಭವಿಸಿವೆ. 2011 ರಲ್ಲಿ ಭೂಕಂಪದ ನಂತರ ಸುನಾಮಿಯಿಂದಾಗಿ 16 ಸಾವಿರ ಮಂದಿ ಸಾವನ್ನಪ್ಪಿದ್ದರು. ಮಾರ್ಚ್ 2011 ರಲ್ಲಿ, 9 ತೀವ್ರತೆಯ ವಿನಾಶಕಾರಿ ಸುನಾಮಿ ಸಂಭವಿಸಿದೆ. ಆಗ ಎದ್ದ ಸುನಾಮಿ ಅಲೆಗಳು ಫುಕುಶಿಮಾ ಪರಮಾಣು ಸ್ಥಾವರವನ್ನು ನಾಶಪಡಿಸಿದ್ದವು.


ಪರಿಸರ ಹಾನಿಯ ದೃಷ್ಟಿಯಿಂದ ಇದೊಂದು ಪ್ರಮುಖ ಘಟನೆ ಎಂದು ಪರಿಗಣಿಸಲಾಗಿದೆ. ನಂತರ ಸಮುದ್ರದಲ್ಲಿ 10 ಮೀಟರ್ ಎತ್ತರದ ಅಲೆಗಳು ಅನೇಕ ನಗರಗಳಲ್ಲಿ ವಿನಾಶವನ್ನು ಉಂಟುಮಾಡಿದವು. ಇದರಲ್ಲಿ ಸುಮಾರು 16 ಸಾವಿರ ಜನರು ಸಾವನ್ನಪ್ಪಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಫಿಲಿಪೈನ್ಸ್‌ನಲ್ಲಿ ಭೂಕಂಪ ಸಂಭವಿಸಿತ್ತು, ಇದಕ್ಕೂ ಮೊದಲು ಕಳೆದ ವರ್ಷ ಡಿಸೆಂಬರ್‌ನಲ್ಲಿ ಫಿಲಿಪ್ಪೀನ್ಸ್‌ನಲ್ಲಿ ಭೂಕಂಪನದ ಅನುಭವವಾಗಿತ್ತು. ಇದರ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 6.8 ಎಂದು ಅಳೆಯಲಾಯಿತು. ಇದರ ಕೇಂದ್ರವು 82 ಕಿಮೀ ಆಳದಲ್ಲಿ ಮಿಂಡಾನಾವೊದಲ್ಲಿತ್ತು.

 

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:06 pm, Mon, 1 January 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us