AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬೆನ್ನಲ್ಲೇ ದಕ್ಷಿಣ ಆಫ್ರಿಕಾದಲ್ಲಿ ಮತ್ತೆ ಕಾಣಿಸಿಕೊಂಡ ಎಬೋಲಾ: 7 ಪ್ರಕರಣಗಳು ದೃಢ, 3 ಸಾವು

ಕೊನಾಕ್ರಿ ಪ್ರಯೋಗಾಲಯವು ಎಬೋಲಾ ವೈರಸ್ ಇರುವಿಕೆಯನ್ನು ದೃಢಪಡಿಸಿದೆ ಎಂದು ತುರ್ತು ಸಭೆಯ ನಂತರ ಅಧಿಕಾರಿಗಳು ಹೇಳಿದ್ದಾರೆ.

ಕೊರೊನಾ ಬೆನ್ನಲ್ಲೇ ದಕ್ಷಿಣ ಆಫ್ರಿಕಾದಲ್ಲಿ ಮತ್ತೆ ಕಾಣಿಸಿಕೊಂಡ ಎಬೋಲಾ: 7 ಪ್ರಕರಣಗಳು ದೃಢ, 3 ಸಾವು
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 14, 2021 | 9:03 PM

ಕೊರೊನಾ ವೈರಸ್​ ಭೀತಿ ನಿಧಾನವಾಗಿ ಕಡಿಮೆ ಆಗುತ್ತಿದೆ. ಅಗತ್ಯ ಕ್ರಮಗಳನ್ನು ಕೈಗೊಂಡ ಪರಿಣಾಮ, ಕೊರೊನಾ ಹರಡುವಿಕೆ ನಿಧಾನವಾಗಿ ಕಡಿಮೆ ಆಗುತ್ತಿದೆ. ಅಲ್ಲದೆ, ಕೊರೊನಾಗೆ ಲಸಿಕೆ ಕೂಡ ಅನ್ವೇಷಣೆಗೊಂಡಿದ್ದು ಜನರ ಆತ್ಮಸ್ಥೈರ್ಯ ಹೆಚ್ಚಿಸಿದೆ. ಹೀಗಿರುವಾಗಲೇ, ದಕ್ಷಿಣಾ ಆಫ್ರಿಕಾದಲ್ಲಿ ಭೀಕರ ಎಬೋಲಾ ಮತ್ತೆ ಕಾಣಿಸಿಕೊಂಡಿದೆ. 7 ಎಬೋಲಾ ಪ್ರಕರಣಗಳು ಇಂದು ದೃಢವಾಗಿದೆ ಎಂದು ಗಿನಿಯಾ ಆರೋಗ್ಯ ಇಲಾಖೆ ಹೇಳಿದೆ.

ಇಂದು ಬೆಳಗ್ಗೆ, ಕೊನಾಕ್ರಿ ಪ್ರಯೋಗಾಲಯವು ಎಬೋಲಾ ವೈರಸ್ ಇರುವಿಕೆಯನ್ನು ದೃಢಪಡಿಸಿದೆ ಎಂದು ತುರ್ತು ಸಭೆಯ ನಂತರ ಅಧಿಕಾರಿಗಳು ಹೇಳಿದ್ದಾರೆ. ಅಲ್ಲದೆ, ಮೂವರು ಮೃತಪಟ್ಟಿದ್ದು, ಇದಕ್ಕೆ ಎಬೋಲಾ ಕಾರಣ ಎಂದು ಅಧಿಕಾರಿಗಳು ಆತಂಕ ಹೊರಹಾಕಿದ್ದಾರೆ.

ಜನವರಿ ಅಂತ್ಯಕ್ಕೆ ಲಿಬೇರಿಯನ್​ ಗಡಿ ಭಾಗದಲ್ಲಿರುವ ಗೌಕೆಯಲ್ಲಿ ಓರ್ವ ಮೃತಪಟ್ಟಿದ್ದ. ಈತನ ಅಂತ್ಯಕ್ರಿಯೆ ಫೆಬ್ರವರಿ 1ರಂದು ನಡೆದಿತ್ತು. ಈತನ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಅನೇಕರಲ್ಲಿ ಅತಿಸಾರ, ವಾಂತಿ ಜತೆಗೆ ರಕ್ತ ಕಾರಿಕೊಳ್ಳಲು ಆರಂಭಿಸಿದ್ದರು. ಕೆಲ ದಿನ ಬಿಟ್ಟು ಜ್ವರ ಕೂಡ ಕಾಣಿಸಿಕೊಂಡಿತ್ತು. ಇವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೆಲವರಲ್ಲಿ ಎಬೋಲಾ ವೈರಸ್​ ಇರುವ ವಿಚಾರ ಬೆಳಕಿಗೆ ಬಂದಿದೆ. 7 ಪ್ರಕರಣಗಳು ದೃಢವಾಗಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಬೋಲಾ ದಕ್ಷಿಣ ಆಫ್ರಿಕಾವನ್ನು ಭೀಕರವಾಗಿ ಕಾಡಿತ್ತು. ಈ ರೋಗಕ್ಕೆ 11,360 ಜನರು ಮೃತಪಟ್ಟಿದ್ದರು. ಈಗ ಈ ವೈರಸ್​ ಮತ್ತೆ ಕಾಣಿಸಿಕೊಂಡಿರುವುದು ಆತಂಕ ಸೃಷ್ಟಿಸಿದೆ. ಅಲ್ಲದೆ, ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕೂಡ ಎಚ್ಚೆತ್ತುಕೊಂಡಿದ್ದು, ಸಹಾಯ ನೀಡುವ ಭರವಸೆ ನೀಡಿದೆ.

ಇದನ್ನೂ ಓದಿ: Disease X ಬರುತಿದೆ ಎಚ್ಚರವಿರಲಿ.. ಎಬೊಲಾದಷ್ಟೇ ಮಾರಣಾಂತಿಕ, ಪ್ರಸರಣದಲ್ಲಿ ಕೊರೊನಾಕ್ಕಿಂತಲೂ ವೇಗ

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ