ಇಂಧನ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿರುವ ಮೋದಿ ಸರ್ಕಾರದ ನಿರ್ಧಾರ ಶ್ಲಾಘಿಸಿದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್
ಕ್ವಾಡ್‌ನ ಭಾಗವಾಗಿದ್ದರೂ, ಭಾರತವು ಅಮೆರಿಕದ ಒತ್ತಡವನ್ನು ತಡೆದುಕೊಂಡಿತು ಮತ್ತು ತನ್ನ ಜನರಿಗೆ ಅನುಕೂಲವಾಗುವಂತೆ ರಷ್ಯಾದಿಂದ ಅಗ್ಗದ ತೈಲವನ್ನು ಖರೀದಿಸಿತು. ನಮ್ಮ ಸರ್ಕಾರ ಸ್ವತಂತ್ರ ವಿದೇಶಾಂಗ ನೀತಿಯ ಮೂಲಕ ಇದನ್ನು ಸಾಧಿಸಲು ಪ್ರಯತ್ನಿಸುತ್ತಿದೆ...
ಇಸ್ಲಾಮಾಬಾದ್: ಪೆಟ್ರೋಲ್ (petrol) ಮತ್ತು ಡೀಸೆಲ್ (diesel) ಬೆಲೆಗಳ ಮೇಲಿನ ಅಬಕಾರಿ ಸುಂಕವನ್ನು(excise duty) ಕಡಿತಗೊಳಿಸುವುದಾಗಿ ಕೇಂದ್ರವು ಘೋಷಿಸಿದ ನಂತರ, ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan), ಅಮೆರಿಕದ ಒತ್ತಡದ ಹೊರತಾಗಿಯೂ ರಷ್ಯಾದಿಂದ ಅಗ್ಗದ ತೈಲವನ್ನು ಖರೀದಿಸುವ ನರೇಂದ್ರ ಮೋದಿ (Narendra Modi) ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ್ದಾರೆ. “ಕ್ವಾಡ್‌ನ ಭಾಗವಾಗಿದ್ದರೂ, ಭಾರತವು ಅಮೆರಿಕದ ಒತ್ತಡವನ್ನು ತಡೆದುಕೊಂಡಿತು ಮತ್ತು ತನ್ನ ಜನರಿಗೆ ಅನುಕೂಲವಾಗುವಂತೆ ರಷ್ಯಾದಿಂದ ಅಗ್ಗದ ತೈಲವನ್ನು ಖರೀದಿಸಿತು. ನಮ್ಮ ಸರ್ಕಾರ ಸ್ವತಂತ್ರ ವಿದೇಶಾಂಗ ನೀತಿಯ ಮೂಲಕ ಇದನ್ನು ಸಾಧಿಸಲು ಪ್ರಯತ್ನಿಸುತ್ತಿದೆ ಎಂದು ಇಮ್ರಾನ್ ಖಾನ್ ಶನಿವಾರ ಟ್ವೀಟ್ ಮಾಡಿದ್ದಾರೆ. ಅವಿಶ್ವಾಸ ಮತದ ನಂತರ ಪಾಕಿಸ್ತಾನದ ಪ್ರಧಾನ ಮಂತ್ರಿಯಾಗಿ ಅವರನ್ನು ಪದಚ್ಯುತಗೊಳಿಸಿದ ವಾರಗಳ ನಂತರ ಈ ಸರ್ಕಾರವು “ಜನಸಾಮಾನ್ಯರಿಗೆ ಪರಿಹಾರವನ್ನು ಒದಗಿಸಲು” ರಿಯಾಯಿತಿ ದರದಲ್ಲಿ ರಷ್ಯಾದ ತೈಲವನ್ನು ಖರೀದಿಸಲು ಕೆಲಸ ಮಾಡುತ್ತಿದೆ ಎಂದು ಖಾನ್ ಹೇಳಿದ್ದಾರೆ. “ಸ್ವತಂತ್ರ ವಿದೇಶಾಂಗ ನೀತಿಯ ಸಹಾಯದಿಂದ ನಮ್ಮ ಸರ್ಕಾರವು ಇದನ್ನು ಸಾಧಿಸಲು ಕೆಲಸ ಮಾಡುತ್ತಿದೆ” ಎಂದು ಅವರು ಬರೆದಿದ್ದಾರೆ. ಚಿಲ್ಲರೆ ಹಣದುಬ್ಬರವು ಈ ತಿಂಗಳು ಎಂಟು ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿದ ನಂತರ, ಕೇಂದ್ರವು ಶನಿವಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ ಮತ್ತು ಡೀಸೆಲ್ ಮೇಲೆ ಲೀಟರ್‌ಗೆ 6 ರೂ ಕಡಿತಗೊಳಿಸುವುದಾಗಿ ಘೋಷಿಸಿದೆ.
Quad کا حصہ ہونے کے باوجود بھارت نے امریکی دباؤ برداشت کیا اور اپنے عوام کو سہولت فراہم کرنے کیلئے روس سے سستا تیل خریدا۔ ایک آزاد خارجہ پالیسی کے ذریعے ہماری حکومت بھی اسی کے حصول کیلئے کوشاں تھی۔ pic.twitter.com/sMyYMN66WA
ಇದನ್ನೂ ಓದಿ— Imran Khan (@ImranKhanPTI) May 21, 2022
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುವುದರಿಂದ ಕೇಂದ್ರ ಸರ್ಕಾರಕ್ಕೆ ವಾರ್ಷಿಕವಾಗಿ ₹1 ಲಕ್ಷ ಕೋಟಿ ವರಮಾನ ನಷ್ಟ ಅಂದಾಜು ಮಾಡಲಾಗಿದೆ’ ಎಂದು ಹೇಳಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಹ ಟ್ವೀಟ್ ಮಾಡಿದ್ದು ಈ ಬೆಲೆ ಇಳಿಕೆಯಿಂದ ಜನರು ಜೀವನ ನಡೆಸುವುದು ಸುಲಭವಾಗುತ್ತದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ನಮಗೆ ಯಾವಾಗಲೂ ಜನರೇ ಮೊದಲು. ಇಂದಿನ ನಿರ್ಧಾರಗಳು ಸಕಾರಾತ್ಮಕ ಪರಿಣಾಮ ಬೀರುತ್ತವೆ. ವಿಶೇಷವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ನಿರ್ಧಾರವು ವಿವಿಧ ಕ್ಷೇತ್ರಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಇದರಿಂದ ಜನರು ಜೀವನ ನಡೆಸುವುದು ಸುಲಭವಾಗುತ್ತದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ಅದೇ ವೇಳೆ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಿಲಿಂಡರ್ ಬಳಸುವವರಿಗೂ ಗುಡ್ ನ್ಯೂಸ್ ನೀಡಿದೆ ಕೇಂದ್ರ ಸರ್ಕಾರ. ಆದರೆ ಇದು ಉಜ್ವಲ ಯೋಜನೆಯಡಿ ಸಿಲಿಂಡರ್ ಬಳಸುವವರಿಗೆ ಮಾತ್ರ ಅನ್ವಯವಾಗಲಿದೆ. ಅದರಂತೆ ಪ್ರತಿ ಅಡುಗೆ ಅನಿಲ ಸಿಲಿಂಡರ್‌ಗೆ 200 ರೂಪಾಯಿ ಸಹಾಯಧನ ದೊರೆಯಲಿದೆ. ಪ್ರಸಕ್ತ ವರ್ಷ ಗರಿಷ್ಠ 12 ಸಿಲಿಂಡರ್‌ಗಳಿಗೆ 200 ರೂಪಾಯಿ ಸಹಾಯಧನ ಸಂದಾಯವಾಗಲಿದೆ.
ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ