Donald Trump: ಅಮೆರಿಕಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ, ಬಳಿಕ ಶ್ಯೂರಿಟಿ ಮೇಲೆ ರಿಲೀಸ್

Ex-US President Donald Trump: ಅಧ್ಯಕ್ಷೀಯ ಚುನಾವಣೆ ವೇಳೆ ಅಧಿಕಾರ ದುರ್ಬಳಕೆ, ಅಕ್ರಮ ಆರೋಪ ಮೇಲೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸಿ ಬಳಿಕ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಲಾಗಿದೆ. ಟ್ರಂಪ್ ಈಗಾಗಲೇ ತಮ್ಮ ವಿರುದ್ಧ ಇದ್ದ ಹಲವು ಪ್ರಕರಣಗಳನ್ನ ಎದುರಿಸಿದ್ದಾರೆ.

Donald Trump: ಅಮೆರಿಕಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ, ಬಳಿಕ ಶ್ಯೂರಿಟಿ ಮೇಲೆ ರಿಲೀಸ್
ಡೊನಾಲ್ಡ್​ ಟ್ರಂಪ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Aug 25, 2023 | 7:14 AM

ವಾಷಿಂಗ್ಟನ್, (ಆಗಸ್ಟ್ 25): 2020ರ ಚುನಾವಣೆಯಲ್ಲಿ ಅಧಿಕಾರ ದುರ್ಬಳಕೆ, ಅಕ್ರಮ ಆರೋಪ ಮೇಲೆ ಅಮೆರಿಕದ(America) ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರನ್ನು ಬಂಧಿಸಲಾಗಿದ್ದು, ಬಳಿಕ  ಕೆಲವೇ ಹೊತ್ತಿನಲ್ಲಿ ಶ್ಯೂರಿಟಿ ಮೇಲೆ ಬಿಡುಗಡೆ ಮಾಡಲಾಗಿದೆ. 2020ರ ಅಧ್ಯಕ್ಷೀಯ ಚುನಾವಣೆ ವೇಳೆ ಅಧಿಕಾರ ದುರ್ಬಳಕೆ ಆರೋಪ ಕೇಳಿಬಂದಿತ್ತು. ಪಿತೂರಿ, ವಂಚನೆ ಯತ್ನ ಸೇರಿದಂತೆ 13 ಪ್ರಕರಣಗಳು ದಾಖಲಾಗಿದ್ದವು. ಈ ಆರೋಪಗಳ ಮೇರೆಗೆ ಜಾರ್ಜಿಯಾ ಪೊಲೀಸರು, ಔಪಚಾರಿಕವಾಗಿ ಟ್ರಂಪ್​ರನ್ನು​​​​​​ ಬಂಧಿಸಿ ಅಟ್ಲಾಂಟಾದ ಫುಲ್ಟನ್ ಕೌಂಟಿ ಜೈಲಿನಲ್ಲಿದ್ದರು. 200,000 ಡಾಲರ್ ಮೌಲ್ಯದ​​ ಬಾಂಡ್​​​ ಶ್ಯೂರಿಟಿ ನೀಡಿದ ಬಳಿಕ ಜಾಮೀನಿನ ಮೇಲೆ ಡೊನಾಲ್ಡ್ ಟ್ರಂಪ್​​​​ ಅವರನ್ನು ಅಟ್ಲಾಂಟಾದ ಫುಲ್ಟನ್ ಕೌಂಟಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

2020ರ ಜಾರ್ಜಿಯಾ ಚುನಾವಣೆ ಫಲಿತಾಂಶ ಸಂಬಂಧಿಸಿ, ಅಮೆರಿಕ ಮಾಜಿ ಅಧ್ಯಕ್ಷ ಟ್ರಂಪ್ ಸೇರಿ 18 ಜನರ ವಿರುದ್ಧ ಫುಲ್ಟನ್ ಕೌಂಟಿ ಕೋರ್ಟ್ ದೋಷಾರೋಪ ಹೊರಿಸಿತ್ತು. ಫಲಿತಾಂಶ ಕಾನೂನು ಬಾಹೀರವಾಗಿ ಟ್ರಂಪ್ ಪರ ಬದಲಿಸಲು ನಡೆದ ಪಿತೂರಿ ಜೊತೆ ಉದ್ದೇಶಪೂರ್ವಕ ಮತ್ತು ಪ್ರಜ್ಞಾಪೂರ್ವಕವಾಗಿ ಇತರರು ಕೈಜೋಡಿಸಿದ್ದರು ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿತ್ತು.

ಇದನ್ನೂ ಓದಿ: ಅಮೆರಿಕ ಅಧ್ಯಕ್ಷ ಜೋ ಬೈಡನ್​​ಗೆ ಕೊಕೇನ್ ಕೊಟ್ಟು ಭಾಷಣ ಮಾಡಿಸುತ್ತಾರೆ: ಡೊನಾಲ್ಡ್ ಟ್ರಂಪ್ 

ದಕ್ಷಿಣ ಪ್ರಾಂತ್ಯದ ರಾಜ್ಯಗಳ ಚುನಾವಣಾ ಫಲಿತಾಂಶ ರದ್ದತಿಗೆ ಸಂಚು, ಪಿತೂರಿ, ವಂಚನೆ ಯತ್ನ ಸೇರಿದಂತೆ ಒಟ್ಟು 13 ಪ್ರಕರಣಗಳು ಜಾರ್ಜಿಯಾ ಠಾಣೆಯಲ್ಲಿ ದಾಖಲಾಗಿದ್ದವು. ಈ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಟ್ರಂಪ್​ರನ್ನು ಜಾರ್ಜಿಯಾ ಪೊಲೀಸರು ಬಂಧಿಸಿದ್ದರು.

ಸರ್ಕಾರದ ದಾಖಲೆಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜೂನ್​ ತಿಂಗಳಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ರನ್ನು ಬಂಧಿಸಲಾಗಿತ್ತು. ಪ್ರಕರಣ ಸಂಬಂಧ ಮಿಯಾಮಿ ಕೋರ್ಟ್​ ಎದುರು ಟ್ರಂಪ್ ಶರಣಾಗಿದ್ದ ಈ ವೇಳೆ ಪೊಲೀಸರು ಅವರನ್ನು ಅರೆಸ್ಟ್ ಮಾಡಿದ್ದರು. ಈಗಾಗಲೇ ಟ್ರಂಪ್ ಬೇರೆ-ಬೇರೆ ಪ್ರಕರಣಗಳಲ್ಲಿ ರಿಲೀಫ್ ಪಡೆದಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:45 am, Fri, 25 August 23

ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ