Himalaya Earthquake: ಹಿಮಾಲಯ ಪ್ರದೇಶಗಳಲ್ಲಿ ಯಾವಾಗ ಬೇಕಾದರೂ ಸಂಭವಿಸಬಹುದು ಭಾರಿ ಭೂಕಂಪ

ಹಿಮಾಲಯ ಪ್ರದೇಶಗಳಲ್ಲಿ ಯಾವಾಗ ಬೇಕಾದರೂ ಭಾರಿ ಭೂಕಂಪ ಸಂಭವಿಸಬಹುದು ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಉತ್ತರ ಅಫ್ಘಾನಿಸ್ತಾನ ಪ್ರದೇಶದಲ್ಲಿ 6.6 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ಮಂಗಳವಾರ ಸಂಜೆ ದೆಹಲಿ-ಎನ್‌ಸಿಆರ್ ಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಭೂಮಿ ಕಂಪಿಸಿದೆ.

Himalaya Earthquake: ಹಿಮಾಲಯ ಪ್ರದೇಶಗಳಲ್ಲಿ ಯಾವಾಗ ಬೇಕಾದರೂ ಸಂಭವಿಸಬಹುದು ಭಾರಿ ಭೂಕಂಪ
ಭೂಕಂಪ
Follow us
ನಯನಾ ರಾಜೀವ್
|

Updated on: Mar 23, 2023 | 11:36 AM

ಹಿಮಾಲಯ ಪ್ರದೇಶಗಳಲ್ಲಿ ಯಾವಾಗ ಬೇಕಾದರೂ ಭಾರಿ ಭೂಕಂಪ ಸಂಭವಿಸಬಹುದು ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಉತ್ತರ ಅಫ್ಘಾನಿಸ್ತಾನ ಪ್ರದೇಶದಲ್ಲಿ 6.6 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ಮಂಗಳವಾರ ಸಂಜೆ ದೆಹಲಿ-ಎನ್‌ಸಿಆರ್ ಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಭೂಮಿ ಕಂಪಿಸಿದೆ. ಭೂಕಂಪದ ತೀವ್ರತೆಯಿಂದಾಗಿ ಭಾರತ, ಪಾಕಿಸ್ತಾನ, ಕಝಾಕಿಸ್ತಾನ್, ತುರ್ಕಮೆನಿಸ್ತಾನ್, ತಜಕಿಸ್ತಾನ್, ಉಜ್ಬೇಕಿಸ್ತಾನ್, ಚೀನಾ, ಅಫ್ಘಾನಿಸ್ತಾನ ಮತ್ತು ಕಿರ್ಗಿಸ್ತಾನ್‌ನಲ್ಲಿ ಬಲವಾದ ಕಂಪನಗಳು ಸಂಭವಿಸಿವೆ. ದೆಹಲಿ-ಎನ್‌ಸಿಆರ್ ಹೊರತುಪಡಿಸಿ, ಉತ್ತರಾಖಂಡ, ಪಂಜಾಬ್ ಮತ್ತು ಕಾಶ್ಮೀರ ಸೇರಿದಂತೆ ಹಲವಾರು ಉತ್ತರದ ರಾಜ್ಯಗಳು ಜನರು ತಮ್ಮ ಮನೆಗಳಿಂದ ಹೊರಗೆ ಧಾವಿಸುವುದರೊಂದಿಗೆ ಭೀತಿಯಂತಹ ಪರಿಸ್ಥಿತಿಯನ್ನು ಕಂಡಿವೆ.

ವಿಜ್ಞಾನಿಗಳು ಹಿಮಾಲಯ ಪ್ರದೇಶದಲ್ಲಿ ಶೀಘ್ರದಲ್ಲಿಯೇ ಭಾರಿ ಭೂಕಂಪ ಸಂಭವಿಸಬಹುದು ಎಂದು ಹೇಳಿದ್ದಾರೆ. ಭೂಕಂಪದ ತೀವ್ರತೆಯು ಗಣನೀಯವಾಗಿರಬಹು. ಆದರೆ, ಕಟ್ಟಡಗಳನ್ನು ಬಲಪಡಿಸುವ ಮೂಲಕ ಜೀವ ಮತ್ತು ಆಸ್ತಿ ನಷ್ಟವನ್ನು ಕಡಿಮೆ ಮಾಡಬಹುದು.

ಮತ್ತಷ್ಟು ಓದಿ: New Zealand Earthquake: ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ 6.1 ತೀವ್ರತೆಯ ಭೂಕಂಪ

ನೇಪಾಳ ಮತ್ತು ಉತ್ತರಾಖಂಡದ ಪಶ್ಚಿಮ ಭಾಗದಲ್ಲಿ ಭೂಕಂಪ ಸಂಭವಿಸಬಹುದು. ಈ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 8ರಷ್ಟಿರಬಹುದು ಎಂದು ಡಾ.ರಾವ್ ತಿಳಿಸಿದ್ದರು.

ಮತ್ತಷ್ಟು ಓದಿ: Delhi Earthquake: ದೆಹಲಿ ಸೇರಿ ಉತ್ತರ ಭಾರತದ ಕೆಲವೆಡೆ ಭೂಕಂಪ; ನಿಮಿಷಗಳ ಕಾಲ ಕಂಪಿಸಿದ ಭೂಮಿ

ಭೂಕಂಪವನ್ನು ತಡೆಯಲು ನಮ್ಮಿಂದ ಸಾಧ್ಯವಿಲ್ಲ ಆದರೆ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ಬಲವಾದ ಕಟ್ಟಡಗಳನ್ನು ನಿರ್ಮಿಸಬೇಕು ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ