ಎರಡನೇ ಹತ್ಯೆ ಯತ್ನದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ರ‍್ಯಾಲಿ ಬಳಿ ಕಾರಿನಲ್ಲಿ ಸ್ಫೋಟಕಗಳು ಪತ್ತೆ

ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆಯ 2ನೇ ಬಾರಿಯ ಯತ್ನದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರ ರ‍್ಯಾಲಿಯ ಸ್ಥಳದ ಬಳಿ ಕಾರಿನಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ಈ ಘಟನೆಯು ಮತ್ತೊಂದು ಆತಂಕಕಾರಿ ಭದ್ರತಾ ಉಲ್ಲಂಘನೆಯನ್ನು ಪ್ರತಿನಿಧಿಸುತ್ತದೆ. ಇತ್ತೀಚೆಗಷ್ಟೇ ಡೊನಾಲ್ಡ್ ಟ್ರಂಪ್ ಅವರ ಹತ್ಯೆಯ ಪ್ರಯತ್ನ ಮಾಡಲಾಗಿತ್ತು.

ಎರಡನೇ ಹತ್ಯೆ ಯತ್ನದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ರ‍್ಯಾಲಿ ಬಳಿ ಕಾರಿನಲ್ಲಿ ಸ್ಫೋಟಕಗಳು ಪತ್ತೆ
ಡೊನಾಲ್ಡ್ ಟ್ರಂಪ್
Follow us
|

Updated on:Sep 18, 2024 | 9:21 PM

ವಾಷಿಂಗ್ಟನ್: ಲಾಂಗ್ ಐಲ್ಯಾಂಡ್‌ನಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಂದು ಭಾಷಣ ಮಾಡುವ ಮುನ್ನ ಅವರ ರ‍್ಯಾಲಿಯ ಸ್ಥಳದ ಬಳಿ ಕಾರಿನಲ್ಲಿ ಸ್ಫೋಟಕಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಇಂದು ರಾತ್ರಿ 7 ಗಂಟೆಗೆ ಟ್ರಂಪ್ ನ್ಯೂಯಾರ್ಕ್​ನಲ್ಲಿ ಪ್ರಚಾರ ಸಭೆ ನಡೆಸಿದ್ದರು. ಈ ಘಟನೆಯು ಮತ್ತೊಂದು ಆತಂಕಕಾರಿ ಭದ್ರತಾ ಉಲ್ಲಂಘನೆಯನ್ನು ಪ್ರತಿನಿಧಿಸುತ್ತದೆ.

ಡೈಲಿ ಮೇಲ್ ವರದಿಯ ಪ್ರಕಾರ, ಫ್ಲೋರಿಡಾದ ಪಾಮ್ ಬೀಚ್ ಗಾಲ್ಫ್ ಕ್ಲಬ್‌ನಲ್ಲಿ ಶಂಕಿತನನ್ನು ಬಂಧಿಸಲು ಕಾರಣವಾದ ಹತ್ಯೆಯ ಪ್ರಯತ್ನದ 3 ದಿನಗಳ ನಂತರ ಈ ಘಟನೆ ಸಂಭವಿಸಿದೆ. ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ಟ್ರಂಪ್ ಅವರ ಗಾಲ್ಫ್ ಕೋರ್ಸ್‌ನಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ನಂತರ ಸ್ಥಳೀಯ ಪೊಲೀಸರು ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು.

ಇದನ್ನೂ ಓದಿ: ಡೊನಾಲ್ಡ್​ ಟ್ರಂಪ್​ ಮೇಲೆ ಗುಂಡಿನ ದಾಳಿ ನಡೆಸಿರುವ ರಿಯಾನ್ ಉಕ್ರೇನ್​ ಬೆಂಬಲಿಗ

ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಆಡುತ್ತಿದ್ದ ವೆಸ್ಟ್ ಪಾಮ್ ಬೀಚ್‌ನಲ್ಲಿರುವ 27-ಹೋಲ್ ಟ್ರಂಪ್ ಇಂಟರ್​ನ್ಯಾಷನಲ್ ಗಾಲ್ಫ್ ಕೋರ್ಸ್‌ನ ಹೊರಗೆ ರೈಫಲ್‌ನಿಂದ ಗುಂಡು ಹಾರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅದರ ಬೆನ್ನಲ್ಲೇ ಇಂದು ಸ್ಫೋಟಕಗಳು ಪತ್ತೆಯಾಗಿವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:17 pm, Wed, 18 September 24