AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅತ್ಯಂತ ಅಪಾಯಕಾರಿ ಹೆಜ್ಜೆ’; ಇಸ್ರೇಲ್-ಇರಾನ್ ಯುದ್ಧದಲ್ಲಿ ಮಿಲಿಟರಿ ಹಸ್ತಕ್ಷೇಪದ ವಿರುದ್ಧ ಅಮೆರಿಕಕ್ಕೆ ರಷ್ಯಾ ಎಚ್ಚರಿಕೆ

Israel-Iran conflict: ಇಸ್ರೇಲ್-ಇರಾನ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಪರವಾಗಿ ಕಣಕ್ಕಿಳಿಯಲು ಅಮೆರಿಕ ಪ್ರವೇಶಿಸಲು ಯೋಚಿಸುತ್ತಿದೆ ಎಂದು ವರದಿಗಳು ಸೂಚಿಸಿವೆ. ಆದರೆ, ಇರಾನ್-ಇಸ್ರೇಲ್ ಯುದ್ಧದಲ್ಲಿ ಅಮೆರಿಕದ ಮಿಲಿಟರಿ ಹಸ್ತಕ್ಷೇಪದ ವಿರುದ್ಧ ರಷ್ಯಾ ಇಂದು ಟ್ರಂಪ್​ಗೆ ಎಚ್ಚರಿಕೆ ನೀಡಿದೆ. ಇದರಿಂದ ಗಂಭೀರವಾದ ನೆಗೆಟಿವ್ ಪರಿಣಾಮಗಳನ್ನು ಎದುರಿಸಬೇಕಾದೀತು ರಷ್ಯಾ ಅಮೆರಿಕಕ್ಕೆ ಎಚ್ಚರಿಸಿದೆ ಎಂದು ವರದಿಗಳು ತಿಳಿಸಿವೆ.

'ಅತ್ಯಂತ ಅಪಾಯಕಾರಿ ಹೆಜ್ಜೆ'; ಇಸ್ರೇಲ್-ಇರಾನ್ ಯುದ್ಧದಲ್ಲಿ ಮಿಲಿಟರಿ ಹಸ್ತಕ್ಷೇಪದ ವಿರುದ್ಧ ಅಮೆರಿಕಕ್ಕೆ ರಷ್ಯಾ ಎಚ್ಚರಿಕೆ
Putin Trump
ಸುಷ್ಮಾ ಚಕ್ರೆ
|

Updated on:Jun 19, 2025 | 6:55 PM

Share

ನವದೆಹಲಿ, ಜೂನ್ 19: ಇರಾನ್ (Iran) ವಿರುದ್ಧ ಇಸ್ರೇಲ್ ಜೊತೆಗೆ ಸಂಘರ್ಷಕ್ಕೆ ಪ್ರವೇಶಿಸಲು ಅಮೆರಿಕ ಚಿಂತಿಸುತ್ತಿದೆ ಎಂಬ ಊಹಾಪೋಹಗಳ ನಡುವೆ ರಷ್ಯಾ (Russia) ಖಡಕ್ ಎಚ್ಚರಿಕೆಯೊಂದನ್ನು ನೀಡಿದೆ. ಒಂದುವೇಳೆ ಇರಾನ್ ವಿರುದ್ಧ ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಮಿಲಿಟರಿ ಕ್ರಮ ಕೈಗೊಂಡರೆ ಅದು ಅಪಾಯಕಾರಿ ಹೆಜ್ಜೆಯಾಗಲಿದೆ ಎಂದು ರಷ್ಯಾದ ವಿದೇಶಾಂಗ ಸಚಿವಾಲಯ ಇಂದು ಎಚ್ಚರಿಸಿದೆ. “ಈ ಪರಿಸ್ಥಿತಿಯಲ್ಲಿ ಮಿಲಿಟರಿ ಹಸ್ತಕ್ಷೇಪದ ವಿರುದ್ಧ ನಾವು ವಾಷಿಂಗ್ಟನ್‌ಗೆ ನಿರ್ದಿಷ್ಟವಾಗಿ ಎಚ್ಚರಿಕೆ ನೀಡಲು ಬಯಸುತ್ತೇವೆ. ಇದು ನಿಜವಾಗಿಯೂ ಅನಿರೀಕ್ಷಿತ ನೆಗೆಟಿವ್ ಪರಿಣಾಮಗಳನ್ನು ಹೊಂದಿರುವ ಅತ್ಯಂತ ಅಪಾಯಕಾರಿ ಹೆಜ್ಜೆಯಾಗಲಿದೆ” ಎಂದು ರಷ್ಯಾದ ವಿದೇಶಾಂಗ ಸಚಿವಾಲಯದ ವಕ್ತಾರೆ ಮಾರಿಯಾ ಜಖರೋವಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಬುಶೆಹರ್ ಪರಮಾಣು ಸ್ಥಾವರದಲ್ಲಿ ರಷ್ಯಾದ ತಜ್ಞರು ಕೆಲಸ ಮಾಡುತ್ತಿರುವುದರಿಂದ ಅದರ ಮೇಲಿನ ವೈಮಾನಿಕ ದಾಳಿಗಳನ್ನು ನಿಲ್ಲಿಸುವಂತೆ ಮಾಸ್ಕೋ ಇಸ್ರೇಲ್ ಅನ್ನು ಒತ್ತಾಯಿಸಿದೆ. ಬುಶೆಹರ್ ಇರಾನ್‌ನ ಏಕೈಕ ಕಾರ್ಯಾಚರಣಾ ಪರಮಾಣು ವಿದ್ಯುತ್ ಸ್ಥಾವರವಾಗಿದ್ದು, ಇದು ರಷ್ಯಾದ ಇಂಧನವನ್ನು ಬಳಸುತ್ತದೆ. ಬುಧವಾರ ಯುಎಇ ಜೊತೆಗೆ ರಷ್ಯಾ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವನ್ನು ತಕ್ಷಣವೇ ನಿಲ್ಲಿಸುವಂತೆ ಕರೆ ನೀಡಿತ್ತು. ಟೆಹ್ರಾನ್‌ನ ಪರಮಾಣು ಸಮಸ್ಯೆಗೆ ರಾಜತಾಂತ್ರಿಕ ಮತ್ತು ರಾಜಕೀಯ ಪರಿಹಾರವನ್ನು ಸೂಚಿಸಿತ್ತು. ಆದರೂ ಎರಡೂ ದೇಶಗಳು ಇದಕ್ಕೆ ಒಪ್ಪಿರಲಿಲ್ಲ.

ಇದನ್ನೂ ಓದಿ: Israel-Iran war: ಇಸ್ರೇಲ್​ನ 1000 ಹಾಸಿಗೆಗಳ ಆಸ್ಪತ್ರೆಗೆ ಅಪ್ಪಳಿಸಿದ ಇರಾನಿನ ಕ್ಷಿಪಣಿ; ಕಂಗಾಲಾಗಿ ಓಡಿದ ರೋಗಿಗಳು

ಇದನ್ನೂ ಓದಿ
Image
ಧಮ್ಕಿಯಿಂದ ಪ್ರಯೋಜನವಾಗಿಲ್ಲ, ಇರಾನ್ ವಿರುದ್ಧ ಯುದ್ಧಕ್ಕೆ ಸಿದ್ಧವಾದ ಟ್ರಂಪ್
Image
ಭಾರತದ ಕಡೆಯಿಂದ ಮೋದಿ ಯುದ್ಧ ನಿಲ್ಲಿಸಿದರು; ವರಸೆ ಬದಲಿಸಿದ ಟ್ರಂಪ್
Image
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
Image
ಇರಾನ್ ಶರಣಾಗುವುದಿಲ್ಲ, ಮಧ್ಯಪ್ರವೇಶಿಸಬೇಡಿ; ಟ್ರಂಪ್​ಗೆ ಖಮೇನಿ ಎಚ್ಚರಿಕೆ

“ಇರಾನಿನ ಪರಮಾಣು ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿವಾದಾತ್ಮಕ ಸಮಸ್ಯೆಗಳನ್ನು ಪರಿಹರಿಸುವ ಹಿತಾಸಕ್ತಿಗಳಲ್ಲಿ ಯುದ್ಧವನ್ನು ಬೇಗನೆ ನಿಲ್ಲಿಸುವ ಮತ್ತು ರಾಜಕೀಯ ಮತ್ತು ರಾಜತಾಂತ್ರಿಕ ಪ್ರಯತ್ನಗಳನ್ನು ತೀವ್ರಗೊಳಿಸುವ ಅಗತ್ಯವನ್ನು ಒತ್ತಿಹೇಳಲಾಯಿತು” ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ನಡೆಸಿದ ದೂರವಾಣಿ ಸಂಭಾಷಣೆ ವೇಳೆ ಹೇಳಿದ್ದರು.

ಒಂದು ದಿನದ ಹಿಂದೆ, ಇರಾನ್ ವಿರುದ್ಧದ ದಾಳಿಗಳಲ್ಲಿ ಇಸ್ರೇಲ್‌ ಜೊತೆ ಕೈ ಜೋಡಿಸುವು ಬಗ್ಗೆ ಚಿಂತಿಸುತ್ತಿರುತ್ತಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದರು. “ನಾನು ಇಸ್ರೇಲ್ ಜೊತೆ ಕಣಕ್ಕಿಳಿಯಬಹುದು ಅಥವಾ ಇಳಿಯದೆಯೂ ಇರಬಹುದು” ಎಂದು ಅವರು ಹೇಳಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 6:13 pm, Thu, 19 June 25

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ