AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಗತಿಕ ಸಮುದಾಯವನ್ನು ಮತ್ತೊಮ್ಮೆ ದಾರಿತಪ್ಪಿಸಲು ಪಾಕಿಸ್ತಾನ ಯತ್ನ: ಉಗ್ರ ಮಸೂದ್ ಅಜರ್‌ ತಲೆಗೆ 70 ಲಕ್ಷ ಬಹುಮಾನ ಘೋಷಣೆ

ಜೈಶ್ ಉಗ್ರ ಮಸೂದ್ ಅಜರ್ ತಲೆಗೆ ಇನಾಮು ಮೊತ್ತವನ್ನು ಪಾಕಿಸ್ತಾನ 70 ಲಕ್ಷ ಪಾಕಿಸ್ತಾನಿ ರೂಪಾಯಿಗಳಿಗೆ ಹೆಚ್ಚಿಸಿದ್ದು, ಹಣಕಾಸು ಕಾರ್ಯಪಡೆ ಸಭೆಗೆ ಕೆಲವೇ ವಾರಗಳಿರುವಾಗ ಈ ಬೆಳವಣಿಗೆ ನಡೆದಿದೆ. 2021ರಲ್ಲಿ ಮಸೂದ್ ಅಜರ್‌ನ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡುವವರಿಗೆ ಫೆಡರಲ್ ಇನ್ವೆಸ್ಟಿಗೇಶನ್ ಏಜೆನ್ಸಿ 50 ಲಕ್ಷ ಪಾಕಿಸ್ತಾನಿ ರೂಪಾಯಿ ಬಹುಮಾನ ಘೋಷಿಸಿತ್ತು.

ಜಾಗತಿಕ ಸಮುದಾಯವನ್ನು ಮತ್ತೊಮ್ಮೆ ದಾರಿತಪ್ಪಿಸಲು ಪಾಕಿಸ್ತಾನ ಯತ್ನ: ಉಗ್ರ ಮಸೂದ್ ಅಜರ್‌ ತಲೆಗೆ 70 ಲಕ್ಷ ಬಹುಮಾನ ಘೋಷಣೆ
ಉಗ್ರ ಮಸೂದ್ ಅಜರ್‌ Image Credit source: PTI
ಪ್ರಸನ್ನ ಹೆಗಡೆ
|

Updated on: Sep 14, 2026 | 6:57 PM

Share

ಇಸ್ಲಾಮಾಬಾದ್, ಸೆಪ್ಟೆಂಬರ್​​ 14: ಜಾಗತಿಕ ಸಮುದಾಯವನ್ನು ಮತ್ತೊಮ್ಮೆ ದಾರಿತಪ್ಪಿಸಲು ಪಾಕಿಸ್ತಾನ ಯತ್ನಿಸಿದ್ದು, ಫೆಡರಲ್ ಇನ್ವೆಸ್ಟಿಗೇಶನ್ ಏಜೆನ್ಸಿ ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಯಲ್ಲಿ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ನ ಸುಳಿವು ನೀಡುವವರಿಗೆ ಘೋಷಿಸಿದ್ದ ಬಹುಮಾನವನ್ನು 20 ಲಕ್ಷ ಪಾಕಿಸ್ತಾನಿ ರೂಪಾಯಿಗಳಷ್ಟು ಹೆಚ್ಚಿಸಿ 70 ಲಕ್ಷ ರೂಪಾಯಿಗೆ ನಿಗದಿಪಡಿಸಿದೆ. ಅಕ್ಟೋಬರ್‌ನಲ್ಲಿ ನಡೆಯಲಿರುವ ಹಣಕಾಸು ಕಾರ್ಯಪಡೆ ಸಭೆಗೆ ಕೆಲವೇ ವಾರಗಳಿರುವಾಗ ಈ ಬೆಳವಣಿಗೆ ನಡೆದಿದೆ.

ಮಸೂದ್ ಅಜರ್‌ ಈಗ ಎಲ್ಲಿದ್ದಾನೆ?

2021ರಲ್ಲಿ ಮಸೂದ್ ಅಜರ್‌ನ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡುವವರಿಗೆ ಫೆಡರಲ್ ಇನ್ವೆಸ್ಟಿಗೇಶನ್ ಏಜೆನ್ಸಿ 50 ಲಕ್ಷ ಪಾಕಿಸ್ತಾನಿ ರೂಪಾಯಿ ಬಹುಮಾನ ಘೋಷಿಸಿತ್ತು. ಬಳಿಕ ಅಜರ್ ಪಾಕಿಸ್ತಾನದಲ್ಲಿಲ್ಲ, ಅಫ್ಘಾನಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಪಾಕಿಸ್ತಾನ ನಿರಂತರವಾಗಿ ಹೇಳಿಕೊಂಡಿದೆ. ಆದರೆ, ಭಾರತೀಯ ಗುಪ್ತಚರ ಸಂಸ್ಥೆಗಳ ಪ್ರಕಾರ ಅಜರ್ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ನವಾಬ್‌ಶಾದಲ್ಲಿದ್ದಾನೆ. ಕಳೆದ ಆರು ತಿಂಗಳಲ್ಲಿ ನಡೆಸಿದ ತಾಂತ್ರಿಕ ವಿಶ್ಲೇಷಣೆಯ ಆಧಾರದ ಮೇಲೆ ಈ ಮಾಹಿತಿ ಲಭಿಸಿದೆ ಎಂದು ಮೂಲಗಳು ತಿಳಿಸಿವೆ.

LIVE TV

ಇದನ್ನೂ ಓದಿ: ಒಡೆದು ಆಳಿದ ಬ್ರಿಟನ್‌ಗೆ ಈಗ ಒಡೆಯುವ ಭೀತಿ: ಯುಕೆ 4 ಭಾಗವಾಗುವುದು ನಿಜವೇ? ಇಲ್ಲಿದೆ ಮಾಹಿತಿ

ಫೆಡರಲ್ ಇನ್ವೆಸ್ಟಿಗೇಶನ್ ಏಜೆನ್ಸಿಯ 2026ರ ‘ರೆಡ್ ಬುಕ್’ನಲ್ಲಿ ಅಜರ್‌ನ ಹೆಸರನ್ನು ಸೇರಿಸಿರುವುದು ಮತ್ತು ಬಹುಮಾನ ಮೊತ್ತ ಹೆಚ್ಚಿಸಿರುವುದು ಹಣಕಾಸು ಕಾರ್ಯಪಡೆ ಸಭೆಗೂ ಮುನ್ನ ಉಗ್ರ ಜಾಲಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿರುವುದಾಗಿ ತೋರಿಸಿಕೊಳ್ಳುವ ಪಾಕಿಸ್ತಾನದ ಪ್ರಯತ್ನವಾಗಿದೆ ಎಂದು ಮೂಲಗಳು ವಿಶ್ಲೇಷಿಸಿವೆ. 2019ರ ಫೆಬ್ರವರಿಯಲ್ಲಿ ನಡೆದ ಪುಲ್ವಾಮಾ ದಾಳಿಯೂ ಸೇರಿದಂತೆ ಭಾರತದಲ್ಲಿ ನಡೆದ ಹಲವು ದಾಳಿಗಳ ಪ್ರಕರಣಗಳಲ್ಲಿ ಅಜರ್‌ ಬೇಕಾಗಿದ್ದಾನೆ. ಪುಲ್ವಾಮಾ ದಾಳಿಯಲ್ಲಿ 40 CRPF ಸಿಬ್ಬಂದಿ ಮೃತಪಟ್ಟಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್