ಚೀನಾದಿಂದ ವಿದೇಶಿ ಹೂಡಿಕೆಯಲ್ಲಿ ಭಾರಿ ಇಳಿಕೆ

ಕಳೆದ ಮೂರು ವರ್ಷಗಳಲ್ಲಿ ಚೀನಾದಿಂದ ವಿದೇಶಿ ನೇರ ಹೂಡಿಕೆ ಕುಸಿದಿದ್ದು, 2019-20ರಲ್ಲಿ ಎಫ್‌ಡಿಐ 163.77 ಮಿಲಿಯನ್ ಡಾಲರ್‌ಗೆ ಇಳಿದಿದೆ ಎಂದು ಹಣಕಾಸು ಸಚಿವ ಅನುರಾಗ್ ಸಿಂಗ್ ಠಾಕೂರ್ ಸೋಮವಾರ ಲೋಕಸಭೆಗೆ ತಿಳಿಸಿದ್ದಾರೆ. ಭಾರತದಲ್ಲಿ ಚೀನಾದ ಕಂಪನಿಗಳಿಂದ ಒಟ್ಟು ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಒಳಹರಿವಿನ ವಿವರಗಳನ್ನು ನೀಡಿದ ಅನುರಾಗ್ ಸಿಂಗ್ ಠಾಕೂರ್, ಚೀನಾದ ಕಂಪನಿಗಳಿಂದ ಒಟ್ಟು ವಿದೇಶಿ ನೇರ ಹೂಡಿಕೆ 2017-18 ರಲ್ಲಿ 350.22 ಮಿಲಿಯನ್ ಡಾಲರ್ ಆಗಿದ್ದರೆ, 2018-19ರಲ್ಲಿ ಅದು 229 ಮಿಲಿಯನ್ ಡಾಲರ್‌ಗೆ ಇಳಿದಿದೆ […]

ಚೀನಾದಿಂದ ವಿದೇಶಿ ಹೂಡಿಕೆಯಲ್ಲಿ ಭಾರಿ ಇಳಿಕೆ
ಸಾಧು ಶ್ರೀನಾಥ್​

Updated on: Sep 16, 2020 | 2:18 PM

ಕಳೆದ ಮೂರು ವರ್ಷಗಳಲ್ಲಿ ಚೀನಾದಿಂದ ವಿದೇಶಿ ನೇರ ಹೂಡಿಕೆ ಕುಸಿದಿದ್ದು, 2019-20ರಲ್ಲಿ ಎಫ್‌ಡಿಐ 163.77 ಮಿಲಿಯನ್ ಡಾಲರ್‌ಗೆ ಇಳಿದಿದೆ ಎಂದು ಹಣಕಾಸು ಸಚಿವ ಅನುರಾಗ್ ಸಿಂಗ್ ಠಾಕೂರ್ ಸೋಮವಾರ ಲೋಕಸಭೆಗೆ ತಿಳಿಸಿದ್ದಾರೆ.

ಭಾರತದಲ್ಲಿ ಚೀನಾದ ಕಂಪನಿಗಳಿಂದ ಒಟ್ಟು ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಒಳಹರಿವಿನ ವಿವರಗಳನ್ನು ನೀಡಿದ ಅನುರಾಗ್ ಸಿಂಗ್ ಠಾಕೂರ್, ಚೀನಾದ ಕಂಪನಿಗಳಿಂದ ಒಟ್ಟು ವಿದೇಶಿ ನೇರ ಹೂಡಿಕೆ 2017-18 ರಲ್ಲಿ 350.22 ಮಿಲಿಯನ್ ಡಾಲರ್ ಆಗಿದ್ದರೆ, 2018-19ರಲ್ಲಿ ಅದು 229 ಮಿಲಿಯನ್ ಡಾಲರ್‌ಗೆ ಇಳಿದಿದೆ ಎಂದು ಹೇಳಿದರು.

ಜೊತೆಗೆ 2019-20ರ ಅವಧಿಯಲ್ಲಿ, ಎಫ್‌ಡಿಐ 163.77 ಮಿಲಿಯನ್ ಡಾಲರ್‌ಗೆ ಇಳಿದಿದೆ ಎಂದು ಮಾನ್ಸೂನ್ ಅಧಿವೇಶನದ ಮೊದಲ ದಿನದಂದು ಈ ಮಾಹಿತಿ ನೀಡಿದ್ದಾರೆ. ಭಾರತದಿಂದ ವಿದೇಶಿ ನೇರ ಹೂಡಿಕೆಗೆ ಸಂಬಂಧಿಸಿದಂತೆ ವಿವರ ನೀಡಿರುವ ಅನುರಾಗ್​ 2020 ರಲ್ಲಿ 20.63 ಮಿಲಿಯನ್ ಡಾಲರ್ ಹೂಡಿಕೆ ಆಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 27.57 ಮಿಲಿಯನ್ ಡಾಲರ್ ಹೂಡಿಕೆ ಆಗಿತ್ತು ಎಂದಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us