Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲಿಬಾನಿಗಳ ವಿರುದ್ಧ ಶಸ್ತ್ರ ಹಿಡಿದಿದ್ದ ಅಫ್ಘಾನಿಸ್ತಾನದ ಮಹಿಳಾ ಗವರ್ನರ್ ಬಂಧನ

ತಾಲಿಬಾನ್ ವಿರುದ್ಧ ಮಝಾರಿ ಪ್ರಬಲವಾಗಿ ದನಿ ಎತ್ತಿದ್ದರು. ತಾಲಿಬಾನಿಗಳು ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಅವಕಾಶವೇ ಇರುವುದಿಲ್ಲ ಎಂದು ಹೇಳಿದ್ದರು.

ತಾಲಿಬಾನಿಗಳ ವಿರುದ್ಧ ಶಸ್ತ್ರ ಹಿಡಿದಿದ್ದ ಅಫ್ಘಾನಿಸ್ತಾನದ ಮಹಿಳಾ ಗವರ್ನರ್ ಬಂಧನ
ಅಫ್ಘಾನಿಸ್ತಾನದ ಪ್ರಾಂತ್ಯವೊಂದರ ಗವರ್ನರ್ ಆಗಿದ್ದ ಸಲೀಮಾ ಮಝಾರಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 18, 2021 | 10:44 PM

ಕಾಬೂಲ್: ಅಫ್ಘಾನಿಸ್ತಾನದಲ್ಲಿದ್ದ ಮೂವರು ಮಹಿಳಾ ಗವರ್ನರ್​ಗಳ ಪೈಕಿ ಒಬ್ಬರಾದ ಸಲಿಮಾ ಮಝಾರಿ ಅವರನ್ನು ತಾಲಿಬಾನ್ ಹೋರಾಟಗಾರರು ಬಂಧಿಸಿದ್ದಾರೆ. ಮಝಾರಿ ಅವರು ಹಝಾರಾ ಜಿಲ್ಲೆಯ ಗವರ್ನರ್ ಆಗಿದ್ದರು.

ತಾಲಿಬಾನ್ ವಿರುದ್ಧ ಮಝಾರಿ ಪ್ರಬಲವಾಗಿ ದನಿ ಎತ್ತಿದ್ದರು. ತಾಲಿಬಾನಿಗಳು ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಅವಕಾಶವೇ ಇರುವುದಿಲ್ಲ. ತಾಲಿಬಾನ್ ಆಡಳಿತದಲ್ಲಿರುವ ನಗರ ಅಥವಾ ಹಳ್ಳಿಗಳಲ್ಲಿ ಮಹಿಳೆಯರು ಮನೆಗಳಲ್ಲಿ ಬಂಧಿಗಳಾಗಿರುತ್ತಾರೆ. ಅವರಿಗೆ ಅಸ್ತಿತ್ವವೇ ಇರುವುದಿಲ್ಲ ಎಂದು ಹೇಳಿದ್ದರು.

ಹಝಾರಾ ಸಮುದಾಯಕ್ಕೆ ಸೇರಿರುವ ಮಝಾರಿ ಅವರ ಸುರಕ್ಷೆ ಬಗ್ಗೆ ಇದೀಗ ಅಂತರರಾಷ್ಟ್ರೀಯ ಸಮುದಾಯದಲ್ಲಿ ಆತಂಕ ವ್ಯಕ್ತವಾಗಿದೆ. ಶಿಯಾ ಮುಸ್ಲಿಮರ ಉಪಪಂಗಡ ಎನಿಸಿರುವ ಹಝಾರಾ ಸಮುದಾಯವನ್ನು ಸುನ್ನಿ ಮುಸ್ಲಿಮರ ಸಂಘಟನೆ ತಾಲಿಬಾನ್ ತಮಗಿಂತ ಕೀಳು ಎಂದು ಪರಿಗಣಿಸುತ್ತದೆ.

ಈ ಹಿಂದೆಯೂ ತಾಲಿಬಾನ್ ಮತ್ತು ಇಸ್ಲಾಮಿಕ್ ಸ್ಟೇಟ್ ಹೋರಾಟಗಾರರು ಹಝಾರಾ ಸಮುದಾಯದ ಮೇಲೆ ದಾಳಿ ನಡೆಸಿದ್ದರು. ಕಾಬೂಲ್​ನಲ್ಲಿ ಕಳೆದ ಮೇ ತಿಂಗಳಲ್ಲಿ ನಡೆದಿದ್ದ ದಾಳಿಯಲ್ಲಿ 80 ಬಾಲಕಿಯರು ಮೃತಪಟ್ಟಿದ್ದರು.

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಮುನ್ನಡೆ ಸಾಧಿಸುತ್ತಿದ್ದಾಗ ಮಝಾರಿ ತಾಲಿಬಾನಿಗಳನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಸರ್ಕಾರಿ ಭದ್ರತಾ ಸಿಬ್ಬಂದಿಯ ಜೊತೆಗೆ ಸ್ಥಳೀಯರನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದರು.

(Female governor in Afghanistan who took up arms against Taliban is now in custody)

ಇದನ್ನೂ ಓದಿ: ನಮಗೆ ಸಹಾಯ ಮಾಡಿದವರನ್ನು ತಾಲಿಬಾನಿಗಳ ಮರ್ಜಿಗೆ ಬಿಡಲು ಆಗದು: ಅಫ್ಘಾನಿಸ್ತಾನದ 20 ಸಾವಿರ ಮಂದಿಯ ಪುನರ್ವಸತಿಗೆ ಬ್ರಿಟನ್ ನಿರ್ಧಾರ

ಇದನ್ನೂ ಓದಿ: Taliban In Afghanistan: ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಆಡಳಿತ ಇದ್ದರೆ ಇಡೀ ಜಗತ್ತಿಗೆ ಕೊರೊನಾ ಇದ್ದಂತೆ ಏಕೆ?

Published On - 10:42 pm, Wed, 18 August 21

ಫ್ರೀಡ್​​ಮ್ಯಾನ್ ಪೋಡ್​ಕ್ಯಾಸ್ಟ್​​​: ಆಡಳಿತ ಸುಧಾರಣೆ ಬಗ್ಗೆ ಮೋದಿ ಮಾತು
ಫ್ರೀಡ್​​ಮ್ಯಾನ್ ಪೋಡ್​ಕ್ಯಾಸ್ಟ್​​​: ಆಡಳಿತ ಸುಧಾರಣೆ ಬಗ್ಗೆ ಮೋದಿ ಮಾತು
ಹೊಸ ನಟರು ಬಂದರೂ ಪುನೀತ್ ಫ್ಯಾನ್ಸ್ ನಿಯತ್ತು ಬದಲಾಗಲ್ಲ: ರಮ್ಯಾ ಮೆಚ್ಚುಗೆ
ಹೊಸ ನಟರು ಬಂದರೂ ಪುನೀತ್ ಫ್ಯಾನ್ಸ್ ನಿಯತ್ತು ಬದಲಾಗಲ್ಲ: ರಮ್ಯಾ ಮೆಚ್ಚುಗೆ
ಹಾಸನ: ಸತತ ನಾಲ್ಕು ಗಂಟೆಗಳ ಬಳಿಕ ಕಾಡಾನೆ ಸೆರೆ
ಹಾಸನ: ಸತತ ನಾಲ್ಕು ಗಂಟೆಗಳ ಬಳಿಕ ಕಾಡಾನೆ ಸೆರೆ
ಅಂಬಿ ಮೊಮ್ಮಗನ ನಾಮಕರಣ: ವಿಶೇಷ ಗಿಫ್ಟ್ ನೀಡಿದ ಕಿಚ್ಚ ಸುದೀಪ್
ಅಂಬಿ ಮೊಮ್ಮಗನ ನಾಮಕರಣ: ವಿಶೇಷ ಗಿಫ್ಟ್ ನೀಡಿದ ಕಿಚ್ಚ ಸುದೀಪ್
ಮಹಾರಾಷ್ಟ್ರ: ಚಾಲಕನಿಗೆ ಹೃದಯಾಘಾತ, 10 ವಾಹನಗಳಿಗೆ ಡಿಕ್ಕಿ ಹೊಡೆದ ಕಾರು
ಮಹಾರಾಷ್ಟ್ರ: ಚಾಲಕನಿಗೆ ಹೃದಯಾಘಾತ, 10 ವಾಹನಗಳಿಗೆ ಡಿಕ್ಕಿ ಹೊಡೆದ ಕಾರು
ಮಲ್ಲಿಕಾರ್ಜುನ ಖರ್ಗೆ ಜತೆ ಡಿಕೆ ಶಿವಕುಮಾರ್ ದಿಢೀರ್ ಪಯಣ!
ಮಲ್ಲಿಕಾರ್ಜುನ ಖರ್ಗೆ ಜತೆ ಡಿಕೆ ಶಿವಕುಮಾರ್ ದಿಢೀರ್ ಪಯಣ!
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಗಣೇಶ್ ಆಚಾರ್ಯ ಮಾತು
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಗಣೇಶ್ ಆಚಾರ್ಯ ಮಾತು
ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಅಗ್ನಿ ಅವಘಡ
ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಅಗ್ನಿ ಅವಘಡ
ಒಂದೇ ಓವರ್​ನಲ್ಲಿ 6 ಸಿಕ್ಸ್​: ಏಕದಿನ ಕ್ರಿಕೆಟ್​ನ ಮೊದಲ ವಿಶ್ವ ದಾಖಲೆ
ಒಂದೇ ಓವರ್​ನಲ್ಲಿ 6 ಸಿಕ್ಸ್​: ಏಕದಿನ ಕ್ರಿಕೆಟ್​ನ ಮೊದಲ ವಿಶ್ವ ದಾಖಲೆ
Video: ಮಹಾರಾಷ್ಟ್ರದ ಸೆಂಟ್ರಲ್​ ಬ್ಯಾಂಕ್​ನಲ್ಲಿ ಭಾರಿ ಅಗ್ನಿ ಅವಘಡ
Video: ಮಹಾರಾಷ್ಟ್ರದ ಸೆಂಟ್ರಲ್​ ಬ್ಯಾಂಕ್​ನಲ್ಲಿ ಭಾರಿ ಅಗ್ನಿ ಅವಘಡ