AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News ಚೀನಾದ ರೆಸ್ಟೋರೆಂಟ್​​ನಲ್ಲಿ ಬೆಂಕಿ ಅವಘಡ: 17 ಮಂದಿ ಸುಟ್ಟು ಭಸ್ಮ, ಹಲವರಿಗೆ ಗಾಯ

ಈಶಾನ್ಯ ಚೀನಾದಲ್ಲಿನ ರೆಸ್ಟೋರೆಂಟ್​ನಲ್ಲಿ ಬುಧವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ಮಂದಿ ಸುಟ್ಟು ಭಸ್ಮವಾಗಿದ್ದಾರೆ.

Breaking News ಚೀನಾದ ರೆಸ್ಟೋರೆಂಟ್​​ನಲ್ಲಿ ಬೆಂಕಿ ಅವಘಡ: 17 ಮಂದಿ ಸುಟ್ಟು ಭಸ್ಮ, ಹಲವರಿಗೆ ಗಾಯ
ಈಶಾನ್ಯ ಚೀನಾದ ರೆಸ್ಟೋರೆಂಟ್‌ನಲ್ಲಿ ಬೆಂಕಿ ಅವಘಡImage Credit source: Twitter
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Sep 28, 2022 | 3:27 PM

Share

ಬೀಜಿಂಗ್: ಈಶಾನ್ಯ ಚೀನಾದಲ್ಲಿನ (northeastern China) ರೆಸ್ಟೋರೆಂಟ್​ನಲ್ಲಿ(restaurant) ಬುಧವಾರ ಭಾರೀ ಅಗ್ನಿ ಅವಘಡ (Fire) ಸಂಭವಿಸಿದ್ದು 17 ಮಂದಿ ಸುಟ್ಟು ಭಸ್ಮವಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ. ಮಧ್ಯಾಹ್ನ 12.40ಕ್ಕೆ ಇಲ್ಲಿನ ಚಾಂಗ್​ಚುನ್ ನಗರದ ರೆಸ್ಟೋರೆಂಟ್​ನಲ್ಲಿ ಬೆಂಕಿ ಹೊತ್ತಿಕೊಂಡಿತು ಎಂದು ಸ್ಥಳೀಯ ಸರ್ಕಾರ ವೈಬೊ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ. ಅಗ್ನಿಶಾಮಕ ದಳದ ವಾಹನಗಳು  ಸ್ಥಳಕ್ಕೆ ಧಾವಿಸಿದ್ದು, ಶೋಧ ಕಾರ್ಯ  ಮತ್ತು ರಕ್ಷಣಾ ಕಾರ್ಯವನ್ನು 3 ಗಂಟೆಗೆ ಮುಗಿಸಿವೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.  ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು ಆವರ ಆರೈಕೆ ಮಾಡಲಾಗುತ್ತಿದೆ ಎಂದು ಪ್ರಕಟಣೆ ಹೇಳಿದೆ. ಈ ಅಗ್ನಿ ಅವಘಡಕ್ಕೆ ಕಾರಣ ಏನು ಎಂಬುದನ್ನು ತನಿಖೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಚೀನಾದಲ್ಲಿ ಆಗಾಗ್ಗೆ ಬೆಂಕಿ ಅವಘಡಗಳು ಸಂಭವಿಸುತ್ತಲೇ ಇರುತ್ತವೆ.ಈ ತಿಂಗಳ ಆರಂಭದಲ್ಲಿ, ಕೇಂದ್ರ ನಗರವಾದ ಚಾಂಗ್ಶಾದಲ್ಲಿ ಭಾರಿ ಬೆಂಕಿಯು ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಕಂಪನಿ ಚೀನಾ ಟೆಲಿಕಾಂನ ಕಚೇರಿಯನ್ನು ಹೊಂದಿರುವ ಗಗನಚುಂಬಿ ಕಟ್ಟಡದಲ್ಲಿ ಕಾಣಿಸಿಕೊಂಡಿತು. ಆದರೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಕಳೆದ ವರ್ಷ ಜುಲೈನಲ್ಲಿ, ಈಶಾನ್ಯ ಜಿಲಿನ್ ಪ್ರಾಂತ್ಯದಲ್ಲಿ ಗೋದಾಮಿನಲ್ಲಿ  ಬೆಂಕಿಹೊತ್ತಿಕೊಂಡಿದ್ದು 15 ಜನರು ಸಾವನ್ನಪ್ಪಿದರು ಮತ್ತು 25 ಜನರು ಗಾಯಗೊಂಡರು ಎಂದು ರಾಜ್ಯ ಮಾಧ್ಯಮ ವರದಿಗಳು ತಿಳಿಸಿವೆ. ಅದಕ್ಕೂ ಒಂದು ತಿಂಗಳ ಮೊದಲು, ಮಧ್ಯ ಹೆನಾನ್ ಪ್ರಾಂತ್ಯದ ಸಮರ ಕಲೆಗಳ ಶಾಲೆಯಲ್ಲಿ ಸಂಭವಿಸಿದ  ಬೆಂಕಿ ಅನಾಹುತದಲ್ಲಿ ಮಕ್ಕಳು ಸೇರಿದಂತೆ 18 ಮಂದಿ ಸಾವಿಗೀಡಾಗಿದ್ದರು.

Published On - 3:02 pm, Wed, 28 September 22

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್