AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಪಾನ್​​​ನ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನದಲ್ಲಿ ಬೆಂಕಿ, 5 ಜನ ಸಾವು

ಜಪಾನ್​​​ನ ಟೋಕಿಯೊ ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನದಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ. ರನ್​​​​ವೇಯಲ್ಲಿ ಚಲಿಸುತ್ತಿದ್ದ ವಿಮಾನದ ಕಿಟಕಿಯಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ

ಜಪಾನ್​​​ನ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನದಲ್ಲಿ ಬೆಂಕಿ, 5 ಜನ ಸಾವು
ಅಕ್ಷಯ್​ ಪಲ್ಲಮಜಲು​​
|

Updated on:Jan 02, 2024 | 5:21 PM

Share

ಜಪಾನ್​​​ನ ಟೋಕಿಯೊ ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನದಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ. ರನ್​​​​ವೇಯಲ್ಲಿ ಚಲಿಸುತ್ತಿದ್ದ ವಿಮಾನದ ಕಿಟಕಿಯಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ ಎಂದು ದೇಶದ ಸಾರ್ವಜನಿಕ ಪ್ರಸಾರಕ ಎನ್‌ಎಚ್‌ಕೆ ತಿಳಿಸಿದೆ.  ಎರಡು ವಿಮಾನ ನಡುವೆ ಡಿಕ್ಕಿಯಾಗಿದೆ. ಈ ವಿಮಾನದಲ್ಲಿ 300ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಈ ಘಟನೆಯಿಂದ  5 ಜನ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಈ ವಿಮಾನವು ಕೋಸ್ಟ್ ಗಾರ್ಡ್ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರಣ ಬೆಂಕಿ ಕಾಣಿಸಿಕೊಂಡಿದೆ ಎಂದು ನಿಪ್ಪಾನ್ ಟಿವಿ ವರದಿ ಮಾಡಿದೆ. ಜಪಾನ್​​​​ ವಿಮಾನ ಸಂಸ್ಥೆ ನೀಡಿದ ವರದಿ ಪ್ರಕಾರ ಈ ವಿಮಾನವು ಕೋಸ್ಟ್ ಗಾರ್ಡ್ ವಿಮಾನಕ್ಕೆ ಡಿಕ್ಕಿ ಹೊಡೆದಿರಬಹುದು ಎಂದು ಸಂಶಯ ವ್ಯಕ್ತಪಡಿಸಿದೆ. ಕೋಸ್ಟ್ ಗಾರ್ಡ್ ವಿಮಾನದಲ್ಲಿದ್ದ ಐವರು ಸಿಬ್ಬಂದಿಗಳ ಶವ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಪಾನ್ ಏರ್‌ಲೈನ್ಸ್‌ನ ವಕ್ತಾರರು ತಿಳಿಸಿರುವಂತೆ ವಿಮಾನವು 300 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊ ಹೊಕ್ಕೈಡೋದ ಶಿನ್-ಚಿಟೋಸ್ ವಿಮಾನ ನಿಲ್ದಾಣದಿಂದ ಹೊರಟು ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಇಳಿದಿದೆ. ಇದೀಗ ವಿಮಾನದಲ್ಲಿದ್ದ 300 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸುರಕ್ಷಿತವಾಗಿ ಕಾಪಾಡಿದ್ದು, ಅವರನ್ನು ಆ ವಿಮಾನದಿಂದ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: ‘ನಾನು ಸುರಕ್ಷಿತವಾಗಿ ಮರಳಿದ್ದೇನೆ’; ಜಪಾನ್​ನಿಂದ ಹಿಂದಿರುಗಿ ಟ್ವೀಟ್ ಮಾಡಿದ ಜೂ. ಎನ್​ಟಿಆರ್

ವಿಮಾನವು ಹನೇಡಾ ವಿಮಾನ ನಿಲ್ದಾಣದಲ್ಲಿ ರನ್‌ವೇಯಲ್ಲಿ ಇಳಿಯುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಬಿಬಿಸಿ ವರದಿ ಮಾಡಿದೆ. JAL 516 ವಿಮಾನವು ಹೊಕ್ಕೈಡೋದಿಂದ ಟೇಕ್ ಆಫ್ ಆಗಿದೆ ಎಂದು ವರದಿ ಹೇಳಿದೆ. ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಹನೇಡಾ ವಿಮಾನ ನಿಲ್ದಾಣದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ಹಾರಿಸುವ ಕೆಲಸವನ್ನು ನಡೆಸಿದ್ದಾರೆ. ಇನ್ನು ವಿಮಾನದ ಒಳಗೆ ಇರುವವರಿಗೆ ಯಾವುದಾದರೂ ತೊಂದರೆ ಸಂಭವಿಸಿದ್ದೇಯೆ ಎಂಬ ಬಗ್ಗೆ ಯಾವುದೇ ವರದಿ ಬಂದಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Tue, 2 January 24

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More