ಯುಎಸ್​​ನ ಈ ವಿಶ್ವವಿದ್ಯಾಲಯದಲ್ಲಿ ಒಂದೇ ವಾರದಲ್ಲಿ 2ನೇ ಬಾರಿ ಗುಂಡಿನ ದಾಳಿ; ಒಬ್ಬ ಸಾವು, ಏಳುಮಂದಿಗೆ ಗಾಯ

ಘಟನೆಯ ಬಗ್ಗೆ ಯೂನಿವರ್ಸಿಟಿ ಟ್ವೀಟ್​ ಮಾಡಿದೆ..ಈ ಸಲ ಫೈರಿಂಗ್​​ನಲ್ಲಿ ಹತ್ಯೆಯಾದ ವ್ಯಕ್ತಿ ವಿಶ್ವವಿದ್ಯಾಲಯಕ್ಕೆ ಸೇರಿದವರಲ್ಲ. ಇನ್ನು ಏಳು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

ಯುಎಸ್​​ನ ಈ ವಿಶ್ವವಿದ್ಯಾಲಯದಲ್ಲಿ ಒಂದೇ ವಾರದಲ್ಲಿ 2ನೇ ಬಾರಿ ಗುಂಡಿನ ದಾಳಿ; ಒಬ್ಬ ಸಾವು, ಏಳುಮಂದಿಗೆ ಗಾಯ
ಘಟನೆ ನಡೆದ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ..
Follow us
TV9 Web
| Updated By: Lakshmi Hegde

Updated on: Oct 18, 2021 | 1:01 PM

ವಾಷಿಂಗ್ಟನ್​: ಯುಎಸ್​​ನ ಯೂನಿವರ್ಸಿಟಿ (US University Shooting) ವೊಂದರಲ್ಲಿ ಭಾನುವಾರ ಬೆಳಗ್ಗೆ ಗುಂಡಿನ ದಾಳಿಯಾಗಿದ್ದು, ಈ ಘಟನೆಯಲ್ಲಿ ಒಬ್ಬ ಮೃತಪಟ್ಟಿದ್ದಾನೆ. ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲಿಸರು ತಿಳಿಸಿದ್ದಾರೆ. ಈ ಗುಂಡಿನ ದಾಳಿ ನಡೆದಿದ್ದು ಲೂಯಿಸಿಯಾನ ರಾಜ್ಯದ ಗ್ರಾಂಬ್ಲಿಂಗ್​ ಸ್ಟೇಟ್​ ವಿಶ್ವವಿದ್ಯಾಲಯದಲ್ಲಿ (Grambling State University). ಇದು ಈ ವಾರದಲ್ಲಿ ನಡೆಯುತ್ತಿರುವ ಎರಡನೇ ದಾಳಿಯಾಗಿದೆ. ಅಕ್ಟೋಬರ್​ 13ರಂದು ಇದೇ  ವಿಶ್ವವಿದ್ಯಾಲಯದಲ್ಲಿ ದುಷ್ಕರ್ಮಿಗಳು ಫೈರಿಂಗ್​ ನಡೆಸಿದ್ದರು. ಅದರಲ್ಲಿ 19ವರ್ಷದ ಒಬ್ಬ ವಿದ್ಯಾರ್ಥಿ ಮೃತಪಟ್ಟಿದ್ದರೆ, 16 ವರ್ಷದ ವಿದ್ಯಾರ್ಥಿ ತೀವ್ರ ಗಾಯಗೊಂಡಿದ್ದರು. 

ಘಟನೆಯ ಬಗ್ಗೆ ಯೂನಿವರ್ಸಿಟಿ ಟ್ವೀಟ್​ ಮಾಡಿದೆ..ಈ ಸಲ ಫೈರಿಂಗ್​​ನಲ್ಲಿ ಹತ್ಯೆಯಾದ ವ್ಯಕ್ತಿ ವಿಶ್ವವಿದ್ಯಾಲಯಕ್ಕೆ ಸೇರಿದವರಲ್ಲ. ಇನ್ನು ಏಳು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅದು ಮಾರಣಾಂತಿಕವಲ್ಲದ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದೆ.   ಹಾಗೇ, ವಿದ್ಯಾರ್ಥಿಗಳು ಘಟನೆಗಳ ಬಗ್ಗೆ ತಪ್ಪು ಮಾಹಿತಿಗಳನ್ನು ಹಬ್ಬಿಸಬಾರದು ಎಂದು ಮನವಿ ಮಾಡಿದೆ. ಇನ್ನು ಈ ಯೂನಿವರ್ಸಿಟಿಯಲ್ಲಿ ಒಂದೇ ವಾರದಲ್ಲಿ ಎರಡು ಗುಂಡಿನ ದಾಳಿ ನಡೆದಿದ್ದರೂ, ಒಂದಕ್ಕೊಂದು ಸಂಬಂಧವಿರುವ ಬಗ್ಗೆ ಸರಿಯಾದ ಸ್ಪಷ್ಟನೆ ಸಿಕ್ಕಿಲ್ಲ ಎಂದೂ ಹೇಳಲಾಗಿದೆ. ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಗುಂಡಿನ ದಾಳಿಯ ಬೆನ್ನಲ್ಲೇ ಇಲ್ಲಿ ನಡೆಯಬೇಕಿದ್ದ ವಾರ್ಷಿಕ ಫೂಟ್​ಬಾಲ್​ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಹಾಗೇ,  ಇಂದು ಮತ್ತು ನಾಳೆ ಯಾವ ತರಗತಿಗೂ ನಡೆಯುತ್ತಿಲ್ಲ. ಸದ್ಯಕ್ಕೆ ಕರ್ಫ್ಯೂ ಘೋಷಣೆಯಾಗಿದೆ.  ಘಟನೆಗೆ ಸಂಬಂಧಪಟ್ಟಂತೆ ಯಾರಿಗೇ ಏನೇ ಸಣ್ಣ ಮಾಹಿತಿ ಗೊತ್ತಿದ್ದರೂ ನಮ್ಮೊಂದಿಗೆ ಹಂಚಿಕೊಳ್ಳಿ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಅವರು ಫೇಸ್​​ಬುಕ್​ನಲ್ಲಿ ಕೂಡ ಈ ಫೈರಿಂಗ್​ ಬಗ್ಗೆ ಪೋಸ್ಟ್​ ಹಾಕಿಕೊಂಡಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಯುವ ಮೋರ್ಚಾ ನಾಯಕನ ಹತ್ಯೆ; ಮನೆ ಎದುರು ನಿಂತಿದ್ದ ಮುಖಂಡನಿಗೆ ಗುಂಡು ಹಾರಿಸಿದ ದುಷ್ಕರ್ಮಿಗಳು

ಸಿದ್ದರಾಮಯ್ಯ ಮುಸ್ಲಿಂ ನಾಯಕರನ್ನು ಮುಗಿಸುತ್ತಾ ಬಂದಿದ್ದಾರೆ; ನಾಳೆ ಶಾಸಕ ಜಮೀರ್ ಅಹ್ಮದ್​​ರನ್ನೂ ಮುಗಿಸ್ತಾರೆ: ಟಿ.ಎ. ಶರವಣ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್