ತಾಲಿಬಾನ್ ಜೊತೆಗೆ ಭಾರತದ ಮೊದಲ ರಾಜತಾಂತ್ರಿಕ ಸಭೆ: ಮಹತ್ವದ ಬೆಳವಣಿಗೆ

ಭಾರತೀಯರು ಸ್ವದೇಶಕ್ಕೆ ಹಿಂದಿರುಗಲು ಸಹಕರಿಸುವುದಾಗಿ ಸಭೆಯಲ್ಲಿ ತಾಲಿಬಾನಿಗಳು ಭರವಸೆ ನೀಡಿದರು ಎಂದು ಭಾರತೀಯ ವಿದೇಶಾಂಗ ಇಲಾಖೆಯ ಮಾಧ್ಯಮ ಪ್ರಕಟಣೆ ತಿಳಿಸಿದೆ.

ತಾಲಿಬಾನ್ ಜೊತೆಗೆ ಭಾರತದ ಮೊದಲ ರಾಜತಾಂತ್ರಿಕ ಸಭೆ: ಮಹತ್ವದ ಬೆಳವಣಿಗೆ
ಭಾರತ ಮತ್ತು ತಾಲಿಬಾನ್ ಮಾತುಕತೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 31, 2021 | 6:33 PM

ದೋಹಾ: ಕತಾರ್​ನ ರಾಜಧಾನಿ ದೋಹಾ ನಗರದಲ್ಲಿ ಅಫ್ಘಾನಿಸ್ತಾನದ ಆಡಳಿತದ ಚುಕ್ಕಾಣಿ ಹಿಡಿದಿರುವ ತಾಲಿಬಾನ್ ಪ್ರತಿನಿಧಿಗಳೊಂದಿಗೆ ಭಾರತದ ವಿದೇಶಾಂಗ ವ್ಯವಹಾರಗಳ ಇಲಾಖೆ ಅಧಿಕಾರಿಗಳು ಮಂಗಳವಾರ ಚರ್ಚೆ ನಡೆಸಿದ್ದಾರೆ. ಈ ವೇಳೆ ಆಫ್ಘನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ ಸಂಬಂಧ ಮಾತಕತೆ ನಡೆಯಿತು. ಭಾರತೀಯರು ಸ್ವದೇಶಕ್ಕೆ ಹಿಂದಿರುಗಲು ಸಹಕರಿಸುವುದಾಗಿ ಸಭೆಯಲ್ಲಿ ತಾಲಿಬಾನಿಗಳು ಭರವಸೆ ನೀಡಿದರು ಎಂದು ಭಾರತೀಯ ವಿದೇಶಾಂಗ ಇಲಾಖೆಯ ಮಾಧ್ಯಮ ಪ್ರಕಟಣೆ ತಿಳಿಸಿದೆ. ದೋಹಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಸಭೆ ನಡೆಯಿತು.

ಭಾರತ ಸರ್ಕಾರದ ಪರವಾಗಿ ದೋಹಾದಲ್ಲಿರುವ ಭಾರತೀಯ ರಾಯಭಾರಿ ದೀಪಕ್ ಮಿತ್ತಲ್ ಸಭೆಯಲ್ಲಿ ಪಾಲ್ಗೊಂಡಿದ್ದರು. ತಾಲಿಬಾನ್ ಆಡಳಿತವನ್ನು ದೋಹಾದಲ್ಲಿರುವ ರಾಜಕೀಯ ಕಚೇರಿಯ ಮುಖ್ಯಸ್ಥ ಶೇರ್ ಮೊಹಮದ್ ಅಬ್ಬಾಸ್ ಸ್ಟಾನೆಕ್​ಝೈ ಪ್ರತಿನಿಧಿಸಿದರು. ಭಾರತೀಯ ರಾಯಭಾರ ಕಚೇರಿಯಲ್ಲಿಯೇ ಸಭೆ ನಡೆಯಿತು.

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರು ಸುರಕ್ಷಿತವಾಗಿ ಸ್ವದೇಶಕ್ಕೆ ಮರಳುವುದು, ಅವರ ಸುರಕ್ಷೆಯ ಬಗ್ಗೆ ಮಾತುಕತೆಯಲ್ಲಿ ಚರ್ಚೆ ನಡೆಯಿತು. ಇದರ ಜೊತೆಗೆ ಭಾರತಕ್ಕೆ ಬರಲು ಇಚ್ಛಿಸುವ ಅಫ್ಘಾನ್​ ಅಲ್ಪಸಂಖ್ಯಾತರ ಬಗ್ಗೆಯೂ ಚರ್ಚೆ ನಡೆಯಿತು. ಅಫ್ಘಾನಿಸ್ತಾನದಲ್ಲಿರುವ ಭಾರತೀಯರ ರಕ್ಷಣೆಗೆ ಕ್ರಮ ತೆಗೆದುಕೊಳ್ಳುವುದಾಗಿ ಮಾತುಕತೆಯಲ್ಲಿ ಪಾಲ್ಗೊಂಡಿದ್ದ ತಾಲಿಬಾನ್ ಪ್ರತಿನಿಧಿಗಳು ಭರವಸೆ ನೀಡಿದರು ಎಂದು ಭಾರತದ ವಿದೇಶಾಂಗ ಇಲಾಖೆ ವಕ್ತಾರರು ಹೇಳಿದ್ದಾರೆ.

ಅಫ್ಘಾನಿಸ್ತಾನದ ಬೆಳವಣಿಗೆಗಳ ಬಗ್ಗೆ ಈಚಿನ ದಿನಗಳಲ್ಲಿ ದೆಹಲಿಯಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದಿವೆ. ಅಫ್ಘಾನಿಸ್ತಾನಕ್ಕೆ ಸಂಬಂಧಿಸಿದಂತೆ ಭಾರತದ ಆದ್ಯತೆಗಳು ಏನಾಗಿರಬೇಕು ಎಂಬುದನ್ನು ನಿರ್ಧರಿಸಲು ಉನ್ನತ ಮಟ್ಟದ ಸಮಿತಿ ರೂಪಿಸಲು ಪ್ರಧಾನಿ ನರೇಂದ್ರ ಮೋದಿ ಈಚೆಗಷ್ಟೇ ಸೂಚಿಸಿದ್ದರು. ಈ ಸಮಿತಿಯಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್ ಮತ್ತು ಇತರ ಹಿರಿಯ ಅಧಿಕಾರಿಗಳು ಇದ್ದಾರೆ.

(First diplomatic meeting between India and Taliban happened today in Doha)

ಇದನ್ನೂ ಓದಿ: ‘ಅಫ್ಘಾನ್​ ಹಿಂದು-ಸಿಖ್ಖ​​ರು ಭಾರತಕ್ಕೆ ಹೋಗಿ-ಬರಲು ನಾವು ಅಡಚಣೆ ಮಾಡೋದಿಲ್ಲ’ -ತಾಲಿಬಾನ್​ ವಕ್ತಾರ

ಇದನ್ನೂ ಓದಿ: ‘ಭಾರತ ಒಂದು ಪ್ರಮುಖ ರಾಷ್ಟ್ರ..ನಮ್ಮಿಂದ ಅದಕ್ಕೆ ಏನೂ ಅಪಾಯವಿಲ್ಲ’-ತಾಲಿಬಾನ್​ ವಕ್ತಾರ

Published On - 6:19 pm, Tue, 31 August 21

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ