AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿರುವ ಭಾರತದ ರಾಯಭಾರಿ ಕಚೇರಿಯನ್ನು ಮುನ್ನಡೆಸಲಿರುವ ಮೊದಲ ಮಹಿಳಾ ಉಪರಾಯಭಾರಿ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತ ರಾಯಭಾರಿ ಕಚೇರಿಗೆ ಭಾರತದ ನೂತನ ಚಾರ್ಜ್ ಡಿ'ಅಫೇರ್ (ಉಪರಾಯಭಾರಿ)ಯಾಗಿ ಗೀತಿಕಾ ಶ್ರೀವಾಸ್ತವ ಅವರು ನೇಮಕಾಗೊಂಡಿದ್ದಾರೆ. ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆಯಾಗಿದ್ದಾರೆ.

ಪಾಕಿಸ್ತಾನದಲ್ಲಿರುವ ಭಾರತದ ರಾಯಭಾರಿ ಕಚೇರಿಯನ್ನು ಮುನ್ನಡೆಸಲಿರುವ ಮೊದಲ ಮಹಿಳಾ ಉಪರಾಯಭಾರಿ
ಗೀತಿಕಾ ಶ್ರೀವಾಸ್ತವ
ಅಕ್ಷಯ್​ ಪಲ್ಲಮಜಲು​​
|

Updated on: Aug 29, 2023 | 12:45 PM

Share

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತದ ರಾಯಭಾರಿ (Indian Embassy) ಕಚೇರಿಗೆ ಭಾರತದ ನೂತನ ಚಾರ್ಜ್ ಡಿ’ಅಫೇರ್ (ಉಪರಾಯಭಾರಿ)ಯಾಗಿ ಗೀತಿಕಾ ಶ್ರೀವಾಸ್ತವ (Geetika Srivastava) ಅವರು ನೇಮಕಾಗೊಂಡಿದ್ದಾರೆ. ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆಯಾಗಿದ್ದಾರೆ. ಪ್ರಸ್ತುತ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ (MEA) ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಡಾ ಎಂ ಸುರೇಶ್ ಕುಮಾರ್ ಅವರು ನವದೆಹಲಿಗೆ ವರ್ಗಾವಣೆಗೊಂಡಿದ್ದು, ಅವರ ಉತ್ತರಾಧಿಕಾರಿಯಾಗಿ ಗೀತಿಕಾ ಶ್ರೀವಾಸ್ತವ ಅವರನ್ನು ನೇಮಕ ಮಾಡಲಾಗಿದೆ.

ಈ ಉಪರಾಯಭಾರಿಯು, ರಾಯಭಾರಿ ಅಥವಾ ಹೈ ಕಮಿಷನರ್ ಅನುಪಸ್ಥಿತಿಯ ಸಂದರ್ಭದಲ್ಲಿ ತಾತ್ಕಾಲಿಕವಾಗಿ ವಿದೇಶದಲ್ಲಿ ರಾಜತಾಂತ್ರಿಕ ಕಾರ್ಯಾಚರಣೆಯನ್ನು ರಾಜತಾಂತ್ರಿಕರಾಗಿ  ನಿರ್ವಹಿಸುವುದು ಇವರ ಕೆಲಸವಾಗಿರುತ್ತದೆ. ಇನ್ನು ಕಾಮನ್‌ವೆಲ್ತ್ ದೇಶಗಳ ನಡುವಿನ ರಾಜತಾಂತ್ರಿಕ ಕಾರ್ಯಾಚರಣೆಗಳನ್ನು ಹೈ ಕಮಿಷನ್‌ಗಳು ಎಂದು ಕರೆಯಲಾಗುತ್ತದೆ, ಆದರೆ ಕಾಮನ್‌ವೆಲ್ತ್ ಅಲ್ಲದ ದೇಶಗಳ ನಡುವಿನ ರಾಜತಾಂತ್ರಿಕ ಕಾರ್ಯಗಳನ್ನು ರಾಯಭಾರ ಕಚೇರಿಗಳು ಎಂದು ಕರೆಯಲಾಗುತ್ತದೆ.

ಇಸ್ಲಾಮಾಬಾದ್ ಮತ್ತು ನವದೆಹಲಿಯಲ್ಲಿರುವ ಭಾರತ- ಪಾಕಿಸ್ತಾನಿ ರಾಯಭಾರಿ ಕಚೇರಿಯಲ್ಲಿ ಆಗಸ್ಟ್ 2019ರಿಂದ ಯಾವ ರಾಯಭಾರಿ ಅಧಿಕಾರಿಗಳು ಇಲ್ಲ. ಈ ಎರಡು ರಾಯಭಾರಿ ಕಚೇರಿಗಳು ಚಾರ್ಜ್ ಡಿ’ಅಫೇರ್‌ಗಳ ನೇತೃತ್ವದಲ್ಲಿ ನಡೆಯುತ್ತಿದೆ. ಭಾರತ ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಪಾಕಿಸ್ತಾನವು ಹೈ ಕಮಿಷನ್‌ನ ಸ್ಥಾನಮಾನವನ್ನು ತೆಗೆದು ಹಾಕಿದೆ. ಭಾರತವು ಕೂಡ ಇಸ್ಲಾಮಾಬಾದ್​​ನಲ್ಲಿರುವ ತನ್ನ ರಾಯಭಾರಿ ಅಧಿಕಾರಿಯನ್ನು ವಾಪಸ್ಸು ಕರೆಸಿಕೊಂಡಿದೆ. 1947ರಿಂದ ಭಾರತ -ಪಾಕಿಸ್ತಾನ ರಾಯಭಾರಿಯಾಗಿ ದಿವಂಗತ ಪ್ರಕಾಶ್ ಅವರು ಅಧಿಕಾರ ವಹಿಸಿಕೊಂಡಾಗಿನಿಂದ, 2019ರವರೆಗೆ (ಅಂದರೆ 370ನೇ ವಿಧಿಯನ್ನು ರದ್ದು ಆಗುವವರೆಗೆ) 22 ರಾಯಭಾರಿಗಳು ಸೇವೆ ಸಲ್ಲಿಸಿದ್ದಾರೆ. ಇನ್ನು  ಗೀತಿಕಾ ಶ್ರೀವಾಸ್ತವ ಅವರು 2005ರಲ್ಲಿ ಭಾರತೀಯ ವಿದೇಶಾಂಗ ಸೇವೆ (IFS) ಸಲ್ಲಿಸಿದ್ದರು. ಇದೀಗ ಈ ಹುದ್ದೆಯನ್ನು ಅಲಂಕಾರಿಸಿರುವ ಮೊದಲ ಮಹಿಳೆಯಾಗಲಿದ್ದಾರೆ.

ಇದನ್ನೂ ಓದಿ: ಅಮೆರಿಕದಲ್ಲಿ ಭಾರತದ ರಾಯಭಾರ ಕಚೇರಿ ಮೇಲೆ ಖಲಿಸ್ತಾನಿಗಳ ದಾಳಿ, ಕಚೇರಿ ಧ್ವಂಸ

ಇವರು  2007 ರಿಂದ 2009 ರವರೆಗೆ ಚೀನಾದಲ್ಲಿನ ಭಾರತೀಯ ರಾಯಭಾರಿ ಕಚೇರಿಯಲ್ಲಿ ಸೇವೆ ಸಲ್ಲಿಸಿ, ನಂತರ ಕೋಲ್ಕತ್ತಾದ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯಲ್ಲಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಹಿಂದೂ ಮಹಾಸಾಗರ ಪ್ರದೇಶದ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದರು.

ಭಾರತದ ಮಹಿಳಾ ರಾಜತಾಂತ್ರಿಕರು ಈ ಹಿಂದೆ ಪಾಕಿಸ್ತಾನದಲ್ಲಿ ಸೇವೆ ಸಲ್ಲಿಸಿದ್ದಾರೆ ಆದರೆ ಇಂತಹ ಉನ್ನತ ಹುದ್ದೆಗಳಿಗೆ ನೇಮಕಾಗೊಂಡಿರಲಿಲ್ಲ. ಪಾಕಿಸ್ತಾನದಲ್ಲಿ ಹೈ ಕಮಿಷನರ್‌ನ ಪಾತ್ರವು ದೊಡ್ಡ ಜವಾಬ್ದಾರಿಯಾಗಿದೆ. ಅಂತರಾಷ್ಟ್ರೀಯ ರಾಜತಾಂತ್ರಿಕತೆ ಕಾರ್ಯನಿರ್ವಹಕರಾಗಿ ಮತ್ತು ಅಲ್ಲಿನ ಕಠಿಣ ಸಂದರ್ಭಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ವಿಶೇಷವಾಗಿ 1947ರಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಹಲವು ವಿವಾದಗಳನ್ನು ನಿರ್ವಹಿಸುವುದು ಇವರ ಮುಖ್ಯ ಕಾರ್ಯವಾಗಿರುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್