AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೇಷ್ಯಾದಲ್ಲಿ ಸಿಂಕ್​ಹೋಲ್​ಗೆ ಬಿದ್ದ ಆಂಧ್ರದ ಮಹಿಳೆ, ಐದು ದಿನಗಳಿಂದ ನಡೆಯುತ್ತಿದೆ ಶೋಧ

ಆಂಧ್ರದ ಮಹಿಳೆಯೊಬ್ಬರು ಮಲೇಷ್ಯಾದಲ್ಲಿ ಸಿಂಕ್​ಹೋಲ್​ಗೆ ಬಿದ್ದಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಕಳೆದ ಐದು ದಿನಗಳಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮಹಿಳಾ ಪ್ರವಾಸಿಗರೊಬ್ಬರು ಆಗಸ್ಟ್​ 23ರಂದು ಪಾದಚಾರಿ ಮಾರ್ಗದಲ್ಲಿ ನಡೆಯುತ್ತಿರುವಾಗ ಆಯತಪ್ಪಿ ಸಿಂಕ್​ಹೋಲ್ ಮೇಲೆ ಕಾಲಿಟ್ಟಿದ್ದು, ತಕ್ಷಣವೇ ಒಳಗೆ ಬಿದ್ದಿದ್ದಾರೆ. ನೀರಿನ ರಭಸ ಹೆಚ್ಚಿದ್ದರಿಂದ ಕೊಚ್ಚಿ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

ಮಲೇಷ್ಯಾದಲ್ಲಿ ಸಿಂಕ್​ಹೋಲ್​ಗೆ ಬಿದ್ದ ಆಂಧ್ರದ ಮಹಿಳೆ, ಐದು ದಿನಗಳಿಂದ ನಡೆಯುತ್ತಿದೆ ಶೋಧ
ಮಲೇಷ್ಯಾ ಸಿಂಕ್ ಹೋಲ್
ನಯನಾ ರಾಜೀವ್
|

Updated on: Aug 28, 2024 | 3:00 PM

Share

ಆಂಧ್ರಪ್ರದೇಶದ ಮಹಿಳೆಯೊಬ್ಬರು ಮಲೇಷ್ಯಾದ ಕೌಲಾಲಂಪುರದಲ್ಲಿ ಸಿಂಕ್​ಹೋಲ್​ಗೆ ಬಿದ್ದಿರುವ ಘಟನೆ ನಡೆದಿದೆ. ಕಳೆದ ಐದು ದಿನಗಳಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮಹಿಳಾ ಪ್ರವಾಸಿಗರೊಬ್ಬರು ಆಗಸ್ಟ್​ 23ರಂದು ಪಾದಚಾರಿ ಮಾರ್ಗದಲ್ಲಿ ನಡೆಯುತ್ತಿರುವಾಗ ಆಯತಪ್ಪಿ ಸಿಂಕ್​ಹೋಲ್ ಮೇಲೆ ಕಾಲಿಟ್ಟಿದ್ದು, ತಕ್ಷಣವೇ ಒಳಗೆ ಬಿದ್ದಿದ್ದಾರೆ. ನೀರಿನ ರಭಸ ಹೆಚ್ಚಿದ್ದರಿಂದ ಕೊಚ್ಚಿ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

ಎಕ್ಸ್​​ಪೋಸ್ಟ್​ನಲ್ಲಿ ನೀಡಿರುವ ಮಾಹಿತಿ ಪ್ರಕಾರ, ಭಾರತೀಯ ರಾಯಭಾರ ಕಚೇರಿಯು ಹುಡುಕಾಟ ನಡೆಸುತ್ತಿದೆ. ಹೋಗಿರುವ ಸಂಭಾವ್ಯ ಮಾರ್ಗಗಳ ಕುರಿತು ಅವಲೋಕಿಸುತ್ತಿವೆ. ಪೊಲೀಸ್, ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ, ಇಂದಾ ವಾಟರ್ ಕನ್ಸೋರ್ಟಿಯಂ, ಕೌಲಾಲಂಪುರ್ ಫೆಡರಲ್ ಟೆರಿಟರಿ ಸಂಸ್ಥೆಗಳು ಮತ್ತು ನಾಗರಿಕ ರಕ್ಷಣಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅದು ಹೇಳಿದೆ. ಮಹಿಳೆಯನ್ನು ವಿಜಯ ಲಕ್ಷ್ಮಿ ಗಾಲಿ ಎಂದು ಗುರುತಿಸಲಾಗಿದೆ.

ಶೋಧ ಕಾರ್ಯಾಚರಣೆ ಐದನೇ ದಿನಕ್ಕೆ ಕಾಲಿಟ್ಟಿದ್ದು ಹುಡುಕಾಟದ ಪ್ರಯತ್ನಗಳಲ್ಲಿ ತೊಡಗಿರುವ ಸಂಬಂಧಿತ ಏಜೆನ್ಸಿಗಳೊಂದಿಗೆ @hcikl ನಿಕಟ ಸಂಪರ್ಕದಲ್ಲಿದೆ. ಡ್ಯಾಂಗ್ ವಾಂಗಿ ಪ್ರದೇಶದಲ್ಲಿ ಮಹಿಳೆ ಬಿದ್ದ ಸಿಂಕ್‌ಹೋಲ್ 8 ಮೀಟರ್ ಆಳವಾಗಿತ್ತು. ಮಹಿಳೆ ಎರಡು ತಿಂಗಳ ಹಿಂದೆ ವಿಹಾರಕ್ಕೆಂದು ತನ್ನ ಪತಿ ಮತ್ತು ಹಲವಾರು ಸ್ನೇಹಿತರೊಂದಿಗೆ ಮಲೇಷ್ಯಾಕ್ಕೆ ಬಂದಿದ್ದಳು ಮತ್ತು ಅವರು ಶನಿವಾರ ಮನೆಗೆ ಮರಳಬೇಕಿತ್ತು.

ಮತ್ತಷ್ಟು ಓದಿ: ಮ್ಯಾನ್ ಹೋಲ್​ಗೆ ಬಿದ್ದ ವಿದ್ಯಾರ್ಥಿನಿ, ಅದೃಷ್ಟವಶಾತ್ ಅಪಾಯದಿಂದ ಪಾರು

ಕಳೆದ ವರ್ಷ ಸಿಂಕ್‌ಹೋಲ್ ಕಾಣಿಸಿಕೊಂಡ ಅದೇ ಸ್ಥಳದಲ್ಲಿ ಮಣ್ಣು ಕುಸಿದಿರುವುದು ವರದಿಯಾಗಿದೆ. ಆದರೆ ಅದನ್ನು ಸರಿಪಡಿಸಲಾಗಿದೆ ಎಂದು ಹೇಳಿದರು. ಸುರಕ್ಷತೆಯ ದೃಷ್ಟಿಯಿಂದ ಈ ಪ್ರದೇಶದಲ್ಲಿನ ವ್ಯಾಪಾರಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಪ್ರಜ್ವಲ್ ರೇವಣ್ಣ ಜೈಲು ಸ್ಥಳಾಂತರ ರದ್ದಾಗಲು ಪ್ರಭಾವಿ ವ್ಯಕ್ತಿ ಕರೆಯೇ ಕಾರಣ
ಪ್ರಜ್ವಲ್ ರೇವಣ್ಣ ಜೈಲು ಸ್ಥಳಾಂತರ ರದ್ದಾಗಲು ಪ್ರಭಾವಿ ವ್ಯಕ್ತಿ ಕರೆಯೇ ಕಾರಣ
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್