ಕೆನಡಾದಲ್ಲಿ ಭೀಕರ ರಸ್ತೆ ಅಪಘಾತ: ಭಾರತದ 5 ವಿದ್ಯಾರ್ಥಿಗಳು ದುರ್ಮರಣ

ಕೆನಡಾದಲ್ಲಿ ಶನಿವಾರ ಒಂಟಾರಿಯೊ ಹೆದ್ದಾರಿಯಲ್ಲಿ ಪ್ಯಾಸೆಂಜರ್ ವ್ಯಾನ್ ಟ್ರಾಕ್ಟರ್-ಟ್ರೇಲರ್‌ಗೆ ಡಿಕ್ಕಿ ಹೊಡೆದು ಐವರು ಭಾರತೀಯ ವಿದ್ಯಾರ್ಥಿಗಳು ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.

ಕೆನಡಾದಲ್ಲಿ ಭೀಕರ ರಸ್ತೆ ಅಪಘಾತ: ಭಾರತದ 5 ವಿದ್ಯಾರ್ಥಿಗಳು ದುರ್ಮರಣ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Mar 14, 2022 | 4:19 PM

ಟೊರೊಂಟೊ: ಕೆನಡಾದಲ್ಲಿ (Canada) ಶನಿವಾರ ಒಂಟಾರಿಯೊ ಹೆದ್ದಾರಿಯಲ್ಲಿ ಪ್ಯಾಸೆಂಜರ್ ವ್ಯಾನ್ ಟ್ರಾಕ್ಟರ್-ಟ್ರೇಲರ್‌ಗೆ ಢಿಕ್ಕಿ ಹೊಡೆದು ಐವರು ಭಾರತೀಯ ವಿದ್ಯಾರ್ಥಿಗಳು ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ ಎಂದು ಕೆನಡಾದಲ್ಲಿನ ಭಾರತೀಯ ಹೈಕಮಿಷನರ್ ಅಜಯ್ ಬಿಸಾರಿಯಾ (Ajay Bisaria) ಸೋಮವಾರ ತಿಳಿಸಿದ್ದಾರೆ. ಟ್ವಿಟರ್‌ನಲ್ಲಿ ಭಾರತೀಯ ರಾಯಭಾರಿ(Indian embassy) ವಿದ್ಯಾರ್ಥಿಗಳ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ ಅವರು ಟೊರೊಂಟೊದಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಂತ್ರಸ್ತರ ಸ್ನೇಹಿತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಹೇಳಿದರು.“ಕೆನಡಾದಲ್ಲಿ ಹೃದಯ ವಿದ್ರಾವಕ ದುರಂತ. ಶನಿವಾರ ಟೊರೊಂಟೊ ಬಳಿ ಆಟೋ ಅಪಘಾತದಲ್ಲಿ 5 ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಆಸ್ಪತ್ರೆಯಲ್ಲಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಸಂತಾಪಗಳು. ರಾಯಭಾರಿ ಕಚೇರಿಯ ತಂಡವು ಸಂತ್ರಸ್ತರ ಸ್ನೇಹಿತರೊಂದಿಗೆ ಸಹಾಯಕ್ಕಾಗಿ ಸಂಪರ್ಕದಲ್ಲಿದೆ ಎಂದು ಬಿಸಾರಿಯಾ ಟ್ವೀಟ್ ಮಾಡಿದ್ದಾರೆ.  ಕ್ವಿಂಟೆ ವೆಸ್ಟ್ ಒಂಟಾರಿಯೊ ಪ್ರಾಂತೀಯ ಪೊಲೀಸ್ (OPP) ಪ್ರಕಾರ ಸಾವಿಗೀಡಾದ ವಿದ್ಯಾರ್ಥಿಗಳನ್ನು ಹರ್‌ಪ್ರೀತ್ ಸಿಂಗ್, ಜಸ್ಪಿಂದರ್ ಸಿಂಗ್, ಕರಣ್‌ಪಾಲ್ ಸಿಂಗ್, ಮೋಹಿತ್ ಚೌಹಾನ್ ಮತ್ತು ಪವನ್ ಕುಮಾರ್ ಎಂದು ಗುರುತಿಸಲಾಗಿದೆ. 

ಅಪಘಾತದಲ್ಲಿ ಮೃತಪಟ್ಟ ಭಾರತೀಯ ವಿದ್ಯಾರ್ಥಿಗಳ ನಿಧನಕ್ಕೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಸಂತಾಪ ಸೂಚಿಸಿದ್ದಾರೆ.

“ಕೆನಡಾದಲ್ಲಿ 5 ಭಾರತೀಯ ವಿದ್ಯಾರ್ಥಿಗಳ ನಿಧನಕ್ಕೆ ತೀವ್ರ ಸಂತಾಪಗಳು. ಗಾಯಗೊಂಡವರು ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ. ಭಾರತೀಯ ರಾಯಭಾರ ಕಚೇರಿ ಎಲ್ಲಾ ಅಗತ್ಯ ಬೆಂಬಲ ಮತ್ತು ಸಹಾಯವನ್ನು ಒದಗಿಸುತ್ತದೆ” ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

ಅಪಘಾತದ ನಂತರ ಗಂಭೀರ ಗಾಯಗೊಂಡ ಇತರ ಇಬ್ಬರು ವಿದ್ಯಾರ್ಥಿಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಪಘಾತದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರೆಲ್ಲರೂ ಗ್ರೇಟರ್ ಟೊರೊಂಟೊ ಮತ್ತು ಮಾಂಟ್ರಿಯಲ್ ಪ್ರದೇಶಗಳಲ್ಲಿ ವಿದ್ಯಾರ್ಥಿಗಳಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Covid Vaccination ದೇಶದಲ್ಲಿ 12-14 ವಯಸ್ಸಿನ ಎಲ್ಲಾ ಮಕ್ಕಳಿಗೆ ಕೊವಿಡ್ ಲಸಿಕೆ ನೀಡಿಕೆ ಬುಧವಾರ ಆರಂಭ

Published On - 4:18 pm, Mon, 14 March 22